ನಗರದ ಕುಡಿವ ನೀರಿಗೆ ಮಳೆ ಕೊಯ್ಲು ಪದ್ಧತಿ ಮೊರೆ
Team Udayavani, Feb 27, 2018, 12:12 PM IST
ಬೆಂಗಳೂರು: ರಾಜಧಾನಿಗೆ ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಎಚ್ಚೆತ್ತಿರುವ ಬಿಬಿಎಂಪಿ, ಅಂತರ್ಜಲ ಮಟ್ಟ ಹೆಚ್ಚಿಸಲು ಮಳೆನೀರು ಕೊಯ್ಲು ವ್ಯವಸ್ಥೆಗೆ ಮುಂದಿನ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲು ಮುಂದಾಗಿದೆ. ಹಾಗೇ ಮಳೆಕೊಯ್ಲು ಪದ್ಧತಿ ಅಳವಡಿಸಿದ್ದರೆ ಮಾತ್ರ ನಕ್ಷೆ ಮಂಜೂರು ಮಾಡಲು ನಿರ್ಧರಿಸಿದೆ.
ಇತ್ತೀಚೆಗೆ ಅಂತಾರಾಷ್ಟ್ರೀಯ ಸುದ್ದಿವಾಹಿನಿಯೊಂದು ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಜಗತ್ತಿನ ಪ್ರಮುಖ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ವರದಿ ಮಾಡಿತ್ತು. ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವುದು ಮೈಸೂರಿನ ಕೆಆರ್‌ಎಸ್ ಜಲಾಶಯದಿಂದ. ಒಂದೊಮ್ಮೆ ಮಳೆ ಕಡಿಮೆಯಾಗಿ ಕೆಆರ್‌ಎಸ್‌ನಲ್ಲಿ ನೀರಿನ ಸಂಗ್ರಹ ಕಡಿಮೆಯಾದರೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತದೆ. ಹೀಗಾಗಿ ಅಂತರ್ಜಲ ಪ್ರಮಾಣ ಹೆಚ್ಚಿಸಲು ಆದ್ಯತೆ ನೀಡಲಾಗಿದೆ.
ವಾರ್ಡ್‌ಗೆ 50 ಲಕ್ಷ ಅನುದಾನ: ನಗರದ 40*60 ಅಡಿ ನಿವೇಶನದಲ್ಲಿ ನಿರ್ಮಿಸುವ ಪ್ರತಿ ಕಟ್ಟಡಕ್ಕೂ ಮಳೆನೀರು ಕೊಯ್ಲು ವ್ಯವಸ್ಥೆ ಅಳವಡಿಕೆ ಕಡ್ಡಾಯ ಎಂಬ ಜಲಮಂಡಳಿ ಆದೇಶ ಸಮರ್ಪಕವಾಗಿ ಪಾಲನೆಯಾಗಿಲ್ಲ. ಹೀಗಾಗಿ ಪಾಲಿಕೆಯೇ ಆಸಕ್ತಿ ವಹಿಸಿ, ತನ್ನ ವ್ಯಾಪ್ತಿಯ ಎಲ್ಲ ಉದ್ಯಾನ, ಪಾಲಿಕೆ ಶಾಲೆ, ಕಾಲೇಜು ಕಟ್ಟಡ, ವಾರ್ಡ್ ಕಚೇರಿ, ಖಾಲಿ ನಿವೇಶನಗಳು ಹಾಗೂ ವಿವಿಧ ಇಲಾಖೆ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ವ್ಯವಸ್ಥೆ ಅನುಷ್ಠಾನಗೊಳಿಸುತ್ತಿದೆ.
ಈ ಕಾರ್ಯಕ್ಕಾಗಿ ಪ್ರತಿ ವಾರ್ಡ್‌ಗೆ 50 ಲಕ್ಷ ರೂ.ನಂತೆ ಒಟ್ಟು 100 ಕೋಟಿ ರೂ. ಮೀಸಲಿಡಲು ಯೋಜನೆ ರೂಪಿಸಲಾಗಿದೆ. ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಸಾವಿರ, ಜಲಮಂಡಳಿಯ ನಿಯಂತ್ರಣದಲ್ಲಿ 8,550 ಹಾಗೂ 3 ಲಕ್ಷಕ್ಕೂ ಹೆಚ್ಚು ಖಾಸಗಿ ಕೊಳವೆ ಬಾವಿಗಳಿವೆ. ವುಗಳಿಗೆ ಜಲಮರುಪೂರಣ ಮಾಡುವುದು ಪಾಲಿಕೆಯ ಉದ್ದೇಶವಾಗಿದೆ.
ನಕ್ಷೆ ಪಡೆಯುವಾಗಲೂ ಪರಿಶೀಲನೆ: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಿಸುವವರು ಬಿಬಿಎಂಪಿಯಿಂದ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ಹಾಗೂ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯಬೇಕು. ಇನ್ನು ಮುಂದೆ ಹೀಗೆ ನಕ್ಷೆ ಮಂಜೂರಾತಿ ಪಡೆಯುವ ಮೊದಲೇ ನಿವೇಶನದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿರಬೇಕು. ಪದ್ಧತಿ ಅಳವಡಿಸಿರುವುದನ್ನು ಖಚಿತಪಡಿಸಿಕೊಂಡ ನಂತರವೇ ನಕ್ಷೆ ಮಂಜೂರು ಮಾಡುವ ಕುರಿತು ಬಜೆಟ್‌ನಲ್ಲಿ ಹೊಸ ನಿಯಮ ರೂಪಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಿರ್ಧರಿಸಿದೆ.
* ವೆಂ. ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.