ಇಂದು ಹಸಿರು ಕರ್ನಾಟಕ ಯೋಜನೆಗೆ ಚಾಲನೆ
Team Udayavani, Aug 15, 2018, 6:00 AM IST
ಬೆಂಗಳೂರು: ಅರಣ್ಯ ಇಲಾಖೆ ಬುಧವಾರ (ಆ.15) ಹಸಿರು ಕರ್ನಾಟಕ ಯೋಜನೆಗೆ ಚಾಲನೆ ನೀಡಲಿದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅರಣ್ಯ ಸಚಿವ ಆರ್.ಶಂಕರ್ ಸಸಿ ನೆಡುವ ಮತ್ತು ಸಸಿ ವಿತರಣೆ ಮೂಲಕ ಯೋಜನೆಗೆ ಚಾಲನೆ ನೀಡಲಿ ದ್ದಾರೆ. ಆ.15 ರಿಂದ 18ರವರೆಗೆ ರಾಜ್ಯಾದ್ಯಂತ ಹಸಿರು ಕರ್ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲು ಅರಣ್ಯ ಇಲಾಖೆ ಉದ್ದೇಶಿಸಿದೆ.
ಇದಕ್ಕಾಗಿ ಸರ್ಕಾರಿ ಮತ್ತು ಖಾಸಗಿ ಖಾಲಿ ಸ್ಥಳಗಳಲ್ಲಿ, ಎಲ್ಲ ಇಲಾಖೆಯ ಕಚೇರಿ, ಶಾಲಾ-ಕಾಲೇಜು ಆವರಣಗಳಲ್ಲಿ ಸಸಿಗಳನ್ನು ನಡಲಾಗುವುದು. ಈ ಕಾರ್ಯಕ್ರಮ ದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು, ಸ್ಥಳೀಯ ಸಂಘ-ಸಂಸ್ಥೆಗಳು, ಸ್ವಯಂ ಸೇವಕರು ಮತ್ತು
ಸಾರ್ವಜನಿಕರು ಕೈ ಜೋಡಿಸಬಹುದು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಸ್ಥಳೀಯ ಗಣ್ಯ ವ್ಯಕ್ತಿಗಳು ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಬೇಕೆಂದು ಇಲಾಖೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.