ಚಾಲಕನ ಮನೆಗೆ ನುಗ್ಗಿ ಪ್ರಾಣ ಬೆದರಿಕೆ


Team Udayavani, Sep 23, 2019, 3:09 AM IST

chalakana

ಬೆಂಗಳೂರು: ತಪಾಸಣೆ ನೆಪದಲ್ಲಿ ಗೂಡ್ಸ್‌ ವಾಹನ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಹಲಸೂರು ಗೇಟ್‌ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ವೀಡಿಯೋ ವೈರಲ್‌ ಆಗಿತ್ತು. ಘಟನೆ ಬೆನ್ನಿಗೇ ಶನಿವಾರ ರಾತ್ರಿ ಜೆ.ಪಿ.ನಗರದ ಜರಗನಹಳ್ಳಿಯಲ್ಲಿರುವ ಚಾಲಕ ಸುನೀಲ್‌ ಕುಮಾರ್‌ ಮನೆಗೆ ನುಗ್ಗಿದ ನಾಲ್ಕೈದು ಮಂದಿ ಅಪರಿಚಿತರು, ಚಾಲಕನ ತಾಯಿಗೆ ಪ್ರಾಣ ಬೆದರಿಕೆ ಹಾಕಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಈ ಸಂಬಂಧ ಚಾಲಕ ಸುನೀಲ್‌ ಕುಮಾರ್‌ ತಾಯಿ ರತ್ನಮ್ಮ, ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ದೂರು ಸ್ವೀಕರಿಸಿರುವ ಪೊಲೀಸರು ಗಂಭೀರ ಸ್ವರೂಪವಲ್ಲದ ಪ್ರಕರಣ(ಎನ್‌ಸಿಆರ್‌) ದಾಖಲಿಸಿಕೊಂಡಿದ್ದಾರೆ. ಗೂಡ್ಸ್‌ ವಾಹನ ಚಾಲಕರಾಗಿರುವ ಸುನೀಲ್‌ ಕುಮಾರ್‌, ಜರಗನಹಳ್ಳಿಯಲ್ಲಿ ತಾಯಿ ರತ್ನಮ್ಮ ಜತೆ ವಾಸವಾಗಿದ್ದಾರೆ. ಶುಕ್ರವಾರ ಹಲಸೂರು ಗೇಟ್‌ ಸಂಚಾರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ, ಚಲಿಸುವ ವಾಹನವನ್ನೇರಿ ಚಾಲಕ ಸುನೀಲ್‌ ಕುಮಾರ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಕೂಡ ನಡೆಸಿದ್ದರು. ಈ ವಿಚಾರವನ್ನು ತಾಯಿ ರತ್ನಮ್ಮಗೆ ಕರೆ ಮಾಡಿ ಹೇಳಿದ್ದ ಸುನೀಲ್‌ ಕುಮಾರ್‌ ಇದುವರೆಗೂ ಮನೆಗೆ ಬಂದಿಲ್ಲ.

ಈ ನಡುವೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ನುಗ್ಗಿದ ನಾಲ್ಕೈದು ಮಂದಿ, “ನಿಮ್ಮ ಮಗ ಎಲ್ಲಿದ್ದಾನೆ? ಎಂದು ಪ್ರಶ್ನಿಸಿ ಸುನೀಲ್‌ ತಾಯಿ ರತ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಒಂದು ವೇಳೆ ನಿಮ್ಮ ಮಗ ಕೈಗೆ ಸಿಕ್ಕರೆ ಕೈ-ಕಾಲು ಮುರಿದು ಹಾಕುತ್ತೇವೆ. ನಿನ್ನನ್ನು ಮತ್ತು ನಿನ್ನ ಮಗನನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿದ್ದಾರೆ ಎಂದು ರತ್ನಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಈ ಕೃತ್ಯದ ಹಿಂದೆ ಹಲ್ಲೆ ನಡೆಸಿದ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಕೈವಾಡ ಇದೆಯೇ? ಇಲ್ಲವೇ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಅಪರಿಚಿತ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪುಟ್ಟೇನಹಳ್ಳಿ ಪೊಲೀಸರು ಹೇಳಿದರು.

ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಚಾಲಕ ಸುನೀಲ್‌ ಕುಮಾರ್‌ ತಾಯಿ ರತ್ನಮ್ಮ, “ತಾಯಿ, ಮಗ ಇಬ್ಬರೇ ವಾಸವಾಗಿದ್ದೇವೆ. ಶುಕ್ರವಾರ ಘಟನೆ ಬಳಿಕ ಮಗ ಕರೆ ಮಾಡಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ. ಅಂದಿನಿಂದ ಆತ ಮನೆಗೆ ಬಂದಿಲ್ಲ. ಶನಿವಾರ ಯಾರೋ ನಾಲ್ಕೈದು ಮಂದಿ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಅವರು ಪೊಲೀಸರೋ ಅಥವಾ ರೌಡಿಗಳೋ ಗೊತ್ತಿಲ್ಲ. ದಯಮಾಡಿ ತಮ್ಮ ಮಗನನ್ನು ಹುಡುಕಿಕೊಡಿ’ ಎಂದು ಅಳಲು ತೊಡಿಕೊಂಡರು.

ಇಲಾಖಾ ತನಿಖೆಗೆ ಆದೇಶ: ಪುರಭವನ ಮುಂಭಾಗ ಚಲಿಸುತ್ತಿದ್ದ ಗೂಡ್ಸ್‌ ವಾಹನದಲ್ಲೇ ಚಾಲಕನಿಗೆ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಕೂಡ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋ ಪ್ರಕಾರ ಸಾರ್ವಜನಿಕರ ಜತೆ ಸಿಬ್ಬಂದಿ ನಡೆದುಕೊಂಡಿರುವ ರೀತಿ ತೀರ ಕೆಟ್ಟ ರೀತಿಯದ್ದಾಗಿದೆ. ಹೀಗಾಗಿ ಆತನ ವಿರುದ್ಧ ಎಸಿಪಿ ದರ್ಜೆಯ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ.

ಮಹಾಸ್ವಾಮಿಯ ಮಾನಸಿಕ ಸ್ಥಿರತೆ ಪರೀಕ್ಷೆ: ಜತೆಗೆ ಥಣಿಸಂದ್ರದಲ್ಲಿರುವ ಸಂಚಾರ ತರಬೇತಿ ಸಂಸ್ಥೆಯಲ್ಲಿ (ಟ್ರಾಫಿಕ್‌ ಟ್ರೈನಿಂಗ್‌ ಇನ್‌ಸ್ಟಿಟ್ಯೂಟ್‌) ಒತ್ತಡ ನಿರ್ವಹಣೆ ಹಾಗೂ ಮೃಧುಕೌಶಲ್ಯ (ತಾಳ್ಮೆಯಿಂದ ವ್ಯವಹರಿಸುವ) ಕುರಿತ ಹತ್ತು ದಿನಗಳ ಕಡ್ಡಾಯ ತರಬೇತಿ ಪಡೆದು ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಲಾಗಿದೆ. ನಂತರ ಸಿಬ್ಬಂದಿಯ ಮಾನಸಿಕ ಸ್ಥಿರತೆ ಬಗ್ಗೆ ಪರೀಕ್ಷೆ ನಡೆಸಲಾಗುವುದು. ಈ ವೇಳೆ ಆತ ಅನುತ್ತೀರ್ಣಗೊಂಡರೆ ಮುಂದಿನ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಸಂಚಾರ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದರು.

ಸಿಬ್ಬಂದಿ ಕೆಟ್ಟ ವರ್ತನೆ ಸಾಬೀತು: ಸಿಬ್ಬಂದಿ ಹಾಗೂ ಚಾಲಕನ ನಡುವಿನ ಹೊಡೆದಾಟದ ವಿಡಿಯೋ ವೈರಲ್‌ ಆಗುತ್ತಿದ್ದಂತೆ, ಸಿಬ್ಬಂದಿ ವಿರುದ್ಧ ವಿಚಾರಣೆ ನಡೆಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ವರದಿ ಪ್ರಕಾರ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಚಾಲಕನ ಜತೆ ನಡೆದುಕೊಂಡ ರೀತಿ ತಪ್ಪು ಎಂಬುದು ಸಾಬೀತಾಗಿದೆ. ಹೀಗಾಗಿ ಆತನನ್ನು ಪೊಲೀಸ್‌ ಠಾಣೆ ಕರ್ತವ್ಯದಿಂದ ತೆಗೆದು (ಎಕ್ಸಿಕ್ಯೂಟಿವ್‌ ಹುದ್ದೆ) ಹಾಕಲಾಗಿದೆ ಎಂದು ಅಧಿಕಾರಿ ವಿವರಿಸಿದರು.

ಚಾಲಕನ ವಿರುದ್ಧವೇ ಎಫ್ಐಆರ್‌ – ಸಾರ್ವಜನಿಕರ ಆಕ್ರೋಶ: ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಗೂಡ್ಸ್‌ ವಾಹನ ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಾರ್ವಜನಿಕರು ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಈ ನಡುವೆಯೂ ಸಿಬ್ಬಂದಿ ಮಹಾಸ್ವಾಮಿ ನೀಡಿದ ದೂರಿನ ಮೇರೆಗೆ ಎಸ್‌.ಜೆ.ಪಾರ್ಕ್‌ ಪೊಲೀಸರು, ಚಾಲಕನ ವಿರುದ್ಧವೇ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಿಂದ ಸಾಮಾಜಿಕ ಜಾಲತಾಣ ಬಳಕೆದಾರರು, ನಗರ ಪೊಲೀಸರ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಸಿಬ್ಬಂದಿಗೆ ಯಾವುದೇ ಶಿಕ್ಷೆಯಾಗಿಲ್ಲ. ಸೂಕ್ತ ದಾಖಲೆಗಳನ್ನು ತೋರಿಸಿದರೂ ಹಲ್ಲೆಗೊಳಗಾದ ಅಮಾಯಕ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಾಲೆಂಜ್‌ ಮಾಡಿದ ಚಾಲಕ: ಈ ನಡುವೆ ಮೈಸೂರು ಮೂಲದ ಕ್ಯಾಬ್‌ ಚಾಲಕನೊಬ್ಬ ಸೆಲ್ಫಿ ವಿಡಿಯೋ ಮಾಡಿ, ನಗರ ಸಂಚಾರ ಪೊಲೀಸರಿಗೆ ಸವಾಲು ಹಾಕಿದ್ದಾರೆ. “ನಮ್ಮ ಚಾಲಕರ ಮೇಲೆ ನೀನು ಕೈ ಮಾಡಿದ್ದಿಯ. ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಾಲ್ಕು ವರ್ಷದ ಹಿಂದೆಯೇ ಎಲ್ಲ ದಾಖಲೆಗಳ ಅವಧಿ ಮುಗಿದಿವೆ. ನಾನು ಇದೇ ಅ.2ರಂದು ಬೆಂಗಳೂರಿಗೆ ಬರುತ್ತಿದ್ದೇನೆ. ತಾಕತ್ತಿದ್ರೆ ನನ್ನ ಕಾರು ತಡೆಯಿರಿ,’ ಎಂದು ತನ್ನ ಕಾರಿನ ನಂಬರ್‌ ಸಮೇತ ಸೆಲ್ಫಿ ವಿಡಿಯೋ ಮಾಡಿ ಫೇಸ್‌ಬುಕ್‌ ಮೂಲಕ ಹರಿ ಬಿಟ್ಟಿದ್ದಾರೆ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.