Bengaluru: ಕುಡಿದು ಸ್ಕೂಲ್ ಬಸ್ ಓಡಿಸಿದ ಚಾಲಕರ ಲೈಸೆನ್ಸ್ ಅಮಾನತು
Team Udayavani, Nov 12, 2024, 10:09 AM IST
ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ 120ಕ್ಕೂ ಹೆಚ್ಚು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದಲ್ಲದೆ, ಅವರ ಚಾಲನಾ ಪರವಾನಗಿ(ಡಿ.ಎಲ್) ಅಮಾನತಿಗೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಜತೆಗೆ ಮದ್ಯ ಸೇವಿಸಿ ಚಾಲನಾ ಪರವಾನಗಿ ಇಲ್ಲದೇ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ 10 ತಿಂಗಳ ಅವಧಿಯಲ್ಲಿ ಸುಮಾರು 20 ಸಾವಿರ ಶಾಲಾ ವಾಹನಗಳನ್ನು ತಪಾಸಣೆಗೊಳಪಡಿಸಲಾಗಿದೆ. ಈ ಪೈಕಿ 120 ಚಾಲಕರು ಮದ್ಯದ ಅಮಲಿನಲ್ಲಿ ಚಾಲನೆ ಮಾಡಿರುವುದು ಪತ್ತೆಯಾಗಿದ್ದು, ಎಲ್ಲರ ಚಾಲನಾ ಪರವಾನಗಿ ಅಮಾತನಿಗೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.
ಮದ್ಯದ ಅಮಲಿನಲ್ಲಿ ಶಾಲಾ ವಾಹನ ಚಾಲನೆ ಮಾಡುವವರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅಂತಹ ಚಾಲಕರ ಡ್ರೈವಿಂಗ್ ಲೈಸೆನ್ಸ್ ಅಮಾನತಿಗೂ ಕ್ರಮಕೈಗೊಳ್ಳ ಲಾಗುತ್ತಿದೆ.
ಈ ಬಗ್ಗೆ ಶಾಲಾ ಆಡಳಿತ ಮಂಡಳಿಗೂ ನೋಟಿಸ್ ನೀಡಲಾಗಿದೆ. ಆದರೂ ಸರಿಯಾದ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಇನ್ಮುಂದೆ ಅಂತಹ ಶಾಲಾ ವಾಹನ ಪರವಾನಗಿ ರದ್ದುಗೊಳಿಸುವ ಕುರಿತು ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಅನುಚೇತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.