DK Shivakumar: ಸೀಟ್ ಬೆಲ್ಟ್ ಧರಿಸದೆ ಕಾರು ಚಾಲನೆ; ನೆಟ್ಟಿಗರು ಕಿಡಿ
Team Udayavani, Jul 21, 2024, 12:05 PM IST
ಬೆಂಗಳೂರು: ಇತ್ತೀಚೆಗೆ ನಗರದ ಡಬಲ್ ಡೆಕ್ಕರ್ ಮೇಲು ಸೇತುವೆ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೀಟ್ ಬೆಲ್ಡ್ ಧರಿಸದೆ ಕಾರು ಚಲಾಯಿಸಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಾರು ಚಲಾಯಿಸುವ ವಿಡಿಯೋ ಹಂಚಿಕೊಂಡು ಡಿಸಿಎಂ ಶಿವಕುಮಾರ್ ಸೀಟ್ ಬೆಲ್ಟ್ ಎಲ್ಲಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ವಿಡಿಯೋವನ್ನು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಏಕೆ ಡಿಸಿಎಂ ಸೀಟ್ ಬೆಲ್ಟ್ ಧರಿಸಿಲ್ಲ. ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಮತ್ತೂಂದೆಡೆ ಸಾಮಾಜಿಕ ಕಾರ್ಯಕರ್ತ ವಿಜಯ್ ಡೆನ್ನೀಸ್ ಎಂಬುವರು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಜು.17ರಂದು ಡಿ.ಕೆ. ಶಿವಕುಮಾರ್ ಸೀಟ್ ಬೆಲ್ಟ್ ಧರಿಸದೆ ಕಾರು ಚಲಾಯಿಸಿದ್ದಾರೆ. ಸಂಚಾರ ನಿಯಮದ ಅನ್ವಯ ಸೀಟ್ ಬೆಲ್ಟ್ ಧರಿಸದಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಕಾನೂನುಗಳು ಎಲ್ಲರಿಗೂ ಸಮನಾಗಿರಬೇಕು. ಹೀಗಾಗಿ ಸಂಚಾರ ನಿಯಮ ಉಲ್ಲಂಘಿಸಿರುವ ಡಿಸಿಎಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.