ನೆಪ ಬಿಡಿ; ರಸ್ತೆ ಗುಂಡಿ ಮುಚ್ಚಿ
Team Udayavani, Oct 6, 2018, 12:28 PM IST
ಬೆಂಗಳೂರು: “ಯಾವುದೇ ನೆಪ ಹುಡುಕದೇ, ಸಬೂಬು ಹೇಳದೇ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿ’ ಎಂದು ಹೈಕೋರ್ಟ್ ಶುಕ್ರವಾರ ಬಿಬಿಎಂಪಿಗೆ ತಾಕೀತು ಮಾಡಿತು.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಂದುವರಿಸಿದ ಮುಖ್ಯ ನ್ಯಾ. ದಿನೇಶ್ ಮಹೇಶ್ವರಿ ಹಾಗೂ ನ್ಯಾ. ಎಸ್.ಜಿ. ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ನೆಪ, ಸಬೂಬು ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮುಂದುವರಿಸುವಂತೆ ಬಿಬಿಎಂಪಿ ಪರ ವಕೀಲರಿಗೆ ಸೂಚನೆ ನೀಡಿತು.
ವಿಚಾರಣೆ ವೇಳೆ “ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಹೇಗೆ ಸಾಗಿದೆ?, ಯಾವ ಕಾರ್ಯವಿಧಾನ ಅನುಸರಿಸುತ್ತಿದ್ದೀರಿ?, ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಿದ್ದೀರಾ ಎಂದು ನಿಮ್ಮ ಮನಸ್ಸು ಮುಟ್ಟಿ ಹೇಳಿ ಎಂದು ಮುಖ್ಯ ನ್ಯಾಯಮೂರ್ತಿಗಳು, ಬಿಬಿಎಂಪಿ ಪರ ವಕೀಲರಿಗೆ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಬಿಬಿಎಂಪಿ ಪರ ವಕೀಲರು, ರಸ್ತೆ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಿದ್ದೇವೆ ಎಂದು ಹೇಳುವುದಿಲ್ಲ,
ಆದರೆ, ಆ ನಿಟ್ಟಿನಲ್ಲಿ ಕೆಲಸ ನಡೆದಿದೆ ಎಂದರು. ಆಗ “ಹೇಗಿದ್ರೂ ದಸರಾ ರಜೆಗಳು ಬರುತ್ತವೆ, ಆಗ ಸಂಚಾರ ದಟ್ಟಣೆ ಕಡಿಮೆ ಆಗಿರುತ್ತದೆ, ಆ ಸಂದರ್ಭದಲ್ಲಿ ಕಾಮಗಾರಿ ಮುಂದುವರಿಸಬಹುದು ಎಂದು ಕಾಯಬೇಡಿ, ಕೆಲಸ ನಿರಂತರವಾಗಿ ನಡೆಯಲಿ. ನೆಪ, ಸಬೂಬು ಬಿಟ್ಟು ಕೆಲಸ ಮಾಡಿ ಎಂದು ಮುಖ್ಯ ನ್ಯಾಯಮೂರ್ತಿಗಳು ಬಿಬಿಎಂಪಿ ಪರ ವಕೀಲರಿಗೆ ತಾಕೀತು ಮಾಡಿತು.
ಇದೇ ವೇಳೆ “ಫಿಕ್ಸ್ ಮೈ ಸ್ಟ್ರೀಟ್’ ಎಂಬ ಆ್ಯಪ್ ಆರಂಭಿಸಲಾಗಿದೆ. 2 ಹಾಟ್ ಮಿಕ್ಸ್ ಪ್ಲಾಂಟ್ ಆರಂಭಿಸಲು ಟೆಂಡರ್ ಕರೆಯಲಾಗಿದೆ. 5 ವರ್ಷ ಪಾಲಿಕೆಯೇ ರಸ್ತೆಗಳ ನಿರ್ವಹಣೆ ಮಾಡಲಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು. ಇದಕ್ಕೆ ನ್ಯಾಯಪೀಠ, ನಿಮ್ಮ ಆ್ಯಪ್‌ಗೆ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಿ. ಈವರೆಗೆ ಎಷ್ಟು ದೂರುಗಳು ಬಂದಿವೆ.
ಎಷ್ಟಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ಸಲ್ಲಿಸಿ. ರಸ್ತೆಗಳ ಸ್ಥಿತಿಗತಿಯ ಫೋಟೋ ಅಪ್‌ಲೋಡ್ ಮಾಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲು ಪೋರ್ಟಲ್ ತಯಾರಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಎಂದು ಸಲಹೆ ನೀಡಿ, ವಿಚಾರಣೆಯನ್ನು ಅ.23ಕ್ಕೆ ಮುಂದೂಡಿತು.
ಜಲಮಂಡಳಿ ವರದಿ: ವಸ್ತುಸ್ಥಿತಿ ವರದಿ ಸಲ್ಲಿಸಿದ ಬೆಂಗಳೂರು ಜಲಮಂಡಳಿ, ನೀರು ಹಾಗೂ ಒಳಚರಂಡಿ ಸಂಪರ್ಕಕ್ಕೆ ರಸ್ತೆ ಅಗೆಯುವ ಮುನ್ನ ಸಾರ್ವನಿಕರು ಬಿಬಿಎಂಪಿಯಿಂದ ಅನುಮತಿ ಪಡೆಯುವುದು ಕಡ್ಡಾಯವೆಂದು ತಿಳಿಸಿತು. ನಗರದ ರಸ್ತೆಗಳ ನಿರ್ವಹಣೆ ಹಾಗೂ ಗುಂಡಿಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಗೆ ಎಲ್ಲ ರೀತಿಯ ಸಹಕಾರ ನೀಡಲು ಜಲಮಂಡಳಿ ಸಿದ್ಧವಿದೆ.
ರಸ್ತೆ ಅಗೆಯಲು ಪಾಲಿಕೆ ಅನುಮತಿ ನೀಡಿದರೆ ಮಾತ್ರ ಜಲಮಂಡಳಿಯು ಪ್ರಕ್ರಿಯೆಗೆ ಅನುಮೋದನೆ ನೀಡಲಿದೆ. ನೀರು ಹಾಗೂ ಒಳಚರಂಡಿ ಪೈಪ್‌ಲೈನ್‌ಗಳನ್ನು ಬದಲಿಸುವ ಸಂದರ್ಭದಲ್ಲಿ ರಸ್ತೆಗಳನ್ನು ಅಗೆಯಬೇಕಿದ್ದಲ್ಲಿ, ಪಾಲಿಕೆಯಿಂದ ಅನುಮತಿ ಪಡೆಯಲಾಗುತ್ತದೆ. ಕಾಮಗಾರಿಯ ಬಳಿಕ ಅಗೆದಿರುವ ರಸ್ತೆಗಳನ್ನು ಮತ್ತೆ ಮೊದಲಿನಂತೆ ಮಾಡಲಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಜಲಮಂಡಳಿಯೇ ಭರಿಸಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.