ಮುನಿಸು ಮನ್ನಾ;  ಸಿದ್ದರಾಮಯ್ಯ ಅಸಮಾಧಾನ ಸದ್ಯಕ್ಕೆ ಶಮನ


Team Udayavani, Jul 2, 2018, 6:00 AM IST

ban02071801.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್‌ ಮಂಡನೆ ಮತ್ತು ಭವಿಷ್ಯದ ಬಗ್ಗೆ ಹೇಳಿಕೆ ನೀಡಿ ಆತಂಕ ಸೃಷ್ಠಿಸಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಶಾಂತರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯಲು ಅಗತ್ಯ ಸಹಕಾರ ಕೊಡುವ ಭರವಸೆ ನೀಡಿದ್ದಾರೆ. ಇದರೊಂದಿಗೆ ಸೋಮವಾರದಿಂದ ಆರಂಭವಾಗಲಿರುವ ಸಮ್ಮಿಶ್ರ ಸರ್ಕಾರದ ಪೂರ್ಣ ಪ್ರಮಾಣದ ಅಧಿವೇಶನದ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಬಿದ್ದಂತಾಗಿದ್ದು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿಶ್ಚಿಂತೆಯಿಂದ ಬಜೆಟ್‌ ಮಂಡಿಸುವ ವಾತಾವರಣ ನಿರ್ಮಾಣವಾಗಿದೆ.

ಭಾನುವಾರ ಸಂಜೆ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಡೆದಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲದಕ್ಕೆ ಕಾರಣವಾಗಿರುವ ಹೇಳಿಕೆಗಳಿಗೂ ತಮಗೂ ಯಾವುದೇ ಸಂಬಂಧ ಇಲ್ಲ. ಬಜೆಟ್‌ ಮಂಡನೆಗೂ ಯಾವುದೇ ತಕರಾರಿಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ತಿಳಿದು ಬಂದಿದೆ. ಅಲ್ಲದೆ, ಬಜೆಟ್‌ನಲ್ಲಿ ಬೆಳೆಸಾಲ ಮನ್ನಾ ಸೇರಿದಂತೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನೀಡಿರುವ ವರದಿಗೆ ಸಮನ್ವಯ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಇದರೊಂದಿಗೆ ಮಿತ್ರ ಪಕ್ಷಗಳು ಸೋಮವಾರದಿಂದ ಆರಂಭವಾಗುವ ವಿಧಾನ ಮಂಡಲ ಕಲಾಪ, ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡುವ ಭಾಷಣದಲ್ಲಿ ಒಗ್ಗಟ್ಟಿನಿಂದ ಪಾಲ್ಗೊಳ್ಳಲು ವೇದಿಕೆ ಸಿದ್ಧವಾಗಿದೆ. ಸೋಮವಾರ ಮಧ್ಯಾಹ್ನ 12.30ಕ್ಕೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದರೊಂದಿಗೆ ಕಲಾಪಕ್ಕೆ ಚಾಲನೆ ನೀಡಲಿದ್ದಾರೆ.

ಸಿದ್ದರಾಮಯ್ಯ ಅವರಲ್ಲದೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಸಮನ್ವಯ ಸಮಿತಿ ಸಂಚಾಲಕ ಡ್ಯಾನಿಶ್‌ ಅಲಿ ಪಾಲ್ಗೊಂಡಿದ್ದ ಸಭೆಯಲ್ಲಿ ಪ್ರಮುಖವಾಗಿ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಬೆಳೆಸಾಲ ಮನ್ನಾ ಮಾಡಲು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಆದರೆ, ರೈತರ ಸಾಲದ ಅವಧಿ ಎಲ್ಲಿಂದ ಎಲ್ಲಿಯವರೆಗೆ ಎಂಬ ಬಗ್ಗೆ ಎರಡೂ ಪಕ್ಷಗಳ ನಾಯಕರ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಸಂಸದ ಎಂ.ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ, 2009ರ ಏಪ್ರಿಲ್‌ 1ರಿಂದ 2018ರ ಮೇ 31ರವರೆಗೆ ರೈತರು ಮಾಡಿರುವ ಬೆಳೆ ಸಾಲ ಮನ್ನಾ ಮಾಡಲು ಶಿಫಾರಸ್ಸು ಮಾಡಿತ್ತು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ 2017ರ ಡಿಸೆಂಬರ್‌ 31ರವರೆಗಿನ ಬೆಳೆ ಸಾಲ ಮಾತ್ರ ಮನ್ನಾ ಮಾಡುವ ಇಚ್ಚೆ ಹೊಂದಿದ್ದಾರೆ. ಹೀಗಾಗಿ ಸಾಲ ಮನ್ನಾ ಆಗಬೇಕಿರುವ ಕಾಲಾವಧಿ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದ್ದು, ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ ಆರ್ಥಿಕ ಮಿತವ್ಯಯ ಮತ್ತು ಸಾಲ ಮನ್ನಾಕ್ಕೆ ಹಣ ಹೊಂದಿಸುವ ಉದ್ದೇಶದಿಂದ ಹಿಂದಿನ ಸರ್ಕಾರದ ಕೊನೆಯ ಬಜೆಟ್‌ನಲ್ಲಿ ಘೋಷಿಸಿದ್ದ ಕೆಲವು ಹೊಸ ಯೋಜನೆಗಳನ್ನು ಈ ಬಜೆಟ್‌ನಲ್ಲಿ ಕೈಬಿಡುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಉಪಮುಖ್ಯಮಂತ್ರಿ ಪರಮೇಶ್ವರ್‌ ಕೂಡ ಪರೋಕ್ಷವಾಗಿ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆ ನಂತರ ಮಾತನಾಡಿದ ಸಮಿತಿ ಸಂಚಾಲಕ ಡ್ಯಾನಿಶ್‌ ಅಲಿ, ಬಜೆಟ್‌ ಮಂಡನೆ ಬಗ್ಗೆ ಎರಡೂ ಪಕ್ಷಗಳಲ್ಲಿ ಯಾವುದೇ ಗೊಂದಲವಿಲ್ಲ. ಯಾರೋ ಕಿಡಿಗೇಡಿಗಳು ಸಿದ್ದರಾಮಯ್ಯ ಅವರು ಖಾಸಗಿಯಾಗಿ ಮಾತನಾಡಿರುವ ದೃಶ್ಯ ಬಿಡುಗಡೆ ಮಾಡಿದ್ದಾರೆಯೇ ಹೊರತು ಯಾವ ನಾಯಕರಿಗೂ ಈ ಬಗ್ಗೆ ಅಸಮಾಧಾನವಿಲ್ಲ. ಇದು ಹೊಸ ಸರ್ಕಾರವಾಗಿರುವುದರಿಂದ ಹೊಸ ಬಜೆಟ್‌ ಮಂಡನೆಯಾಗುತ್ತದೆ. ಆದರೆ, ಹಿಂದಿನ ಸರ್ಕಾರದ ಎಲ್ಲ ಪ್ರಮುಖ ಯೋಜನೆಗಳನ್ನೂ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದರು.

ರೈತರ ಸಾಲ ಮನ್ನಾ ವಿಷಯದಲ್ಲಿಯ ಯಾವುದೇ ಗೊಂದಲವಿಲ್ಲ. ಎಷ್ಟು ಸಾಲ ಮನ್ನಾ ಆಗುತ್ತದೆ ಮತ್ತು ಯಾವ ದಿನಾಂಕದವರೆಗಿನ ಸಾಲ ಮನ್ನಾ ಆಗುತ್ತದೆ ಎನ್ನುವುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷಿಸುತ್ತಾರೆ ಎಂದು ಹೇಳಿದರು.

ಮುಂದಿನ ಐದು ವರ್ಷದಲ್ಲಿ 1 ಕೋಟಿ ಉದ್ಯೋಗ ಸೃಷ್ಠಿ ಮಾಡುವುದು, ವಸತಿ ರಹಿತರಿಗೆ 20 ಲಕ್ಷ ಮನೆ ನಿರ್ಮಾಣ, ಕ್ರೀಡಾ ನೀತಿ ಜಾರಿ, ಹೆಚ್ಚಿನ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಕೌಶಲ್ಯ ತರಬೇತಿಗೆ ಆದ್ಯತೆ ನೀಡುವುದು ಹಾಗೂ ಐದು ವರ್ಷ ನೀರಾವರಿ ಯೋಜನೆಗಳಿಗೆ 1.25 ಲಕ್ಷ ಕೋಟಿ ರೂ. ವೆಚ್ಚ ಮಾಡಲು ತೀರ್ಮಾನಿಸಲಾಗಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಸಂಪೂರ್ಣ ಯೋಜನೆಗಳ ಪುಸ್ತಕ ಬಿಡುಗಡೆಗೆ ನಿರ್ಧರಿಸಲಾಗಿದೆ ಎಂದರು.

ನಿಗಮ ಮಂಡಳಿ ಪಟ್ಟಿ ಸಿದ್ದ: ಎರಡೂ ಪಕ್ಷಗಳೂ ಈಗಾಗಲೇ ಹಂಚಿಕೆ ಮಾಡಿಕೊಂಡಿರುವಂತೆ ಮೊದಲ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲು ಎರಡೂ ಪಕ್ಷಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಕಾಂಗ್ರೆಸ್‌ನಿಂದ 20 ಹಾಗೂ ಜೆಡಿಎಸ್‌ನಿಂದ 10 ಶಾಸಕರ ಪಟ್ಟಿ ಸಿದ್ದಪಡಿಸಲಾಗಿದೆ. ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಆದರೆ,  ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್‌ ಸಿದ್ಧತೆಯಲ್ಲಿರುವುದರಿಂದ ಮತ್ತು ಸೋಮವಾರದಿಂದಲೇ ಅಧಿವೇಶನ ಆರಂಭವಾಗುತ್ತಿರುವುದರಿಂದ ಬಜೆಟ್‌ ಅಧಿವೇಶನ ಮುಗಿಯುವವರೆಗೂ ಘೋಷಣೆ ಮಾಡುವುದು ಅನುಮಾನ ಎನ್ನಲಾಗಿದೆ.

ಪ್ರಮುಖ ನಿರ್ಣಯಗಳು
* ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಬೆಳೆ ಸಾಲ ಮನ್ನಾ
* ಐದು ವರ್ಷದಲ್ಲಿ ನೀರಾವರಿ ಯೋಜನೆಗೆ 1.25 ಲಕ್ಷ ಕೋಟಿ ರೂ. ವೆಚ್ಚ
* ವಸತಿ ರಹಿತರಿಗೆ ಐದು ವರ್ಷದಲ್ಲಿ 20 ಲಕ್ಷ ಮನೆ ನಿರ್ಮಾಣದ ಗುರಿ
* ಕೌಶಲ್ಯ ತರಬೇತಿ ನೀಡುವುದರೊಂದಿಗೆ 1 ಕೋಟಿ ಉದ್ಯೋಗ ಸೃಷ್ಠಿ
* ಕ್ರೀಡಾಪಟುಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲು ಕ್ರೀಡಾ ನೀತಿ ಜಾರಿ
* ಎಲ್ಲರಿಗೂ ಆರೋಗ್ಯ ವಿಮೆ ಒದಗಿಸುವ ಆರೋಗ್ಯ ಕರ್ನಾಟಕ ಜಾರಿ

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.