Drug dealing: ವಿದೇಶಿ ಪ್ರಜೆ ಸೆರೆ
Team Udayavani, Apr 17, 2024, 10:18 AM IST
ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಆಫ್ರಿಕಾ ಮೂಲದ ಅಮಾಡೊ ಸಿಡ್ಬಿ ಬೌಬಾಕರ್(27) ಬಂಧಿತ ವಿದೇಶಿ ಪ್ರಜೆ.
ಆರೋಪಿಯಿಂದ 1.75 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ಕೋಕೇನ್, 1 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿ 2016 ರಲ್ಲಿ ವಿದೇಶಿ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇದರೊಂದಿಗೆ ನಗರದಲ್ಲಿರುವ ಇತರೆ ಪೆಡ್ಲರ್‌ಗಳಿಂದ ಕೋಕೇನ್ ತರಿಸಿಕೊಂಡು ನಿರ್ದಿಷ್ಟ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಇತ್ತೀಚೆಗೆ ಕತ್ರಿ ಗುಪ್ಪೆಯ ಆಟದ ಮೈದಾನದಲ್ಲಿ ಕೆಲ ಯುವಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ಆರೋಪಿ ಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.