Drug sales: ಮಾದಕ ವಸ್ತು ಮಾರಾಟ: ರಾಜಸ್ಥಾನ ಮೂಲದ ಇಬ್ಬರ ಸೆರೆ
Team Udayavani, Aug 16, 2023, 11:22 AM IST
ಬೆಂಗಳೂರು: ರಾಜಸ್ಥಾನದಿಂದ ಮಾದಕ ವಸ್ತು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಚೌಧರಿ (28) ಮತ್ತು ಓಂಸಿಂಗ್(30) ಬಂಧಿತರು. ಲಕ್ಷಾಂತರ ರೂ. ಮೌಲ್ಯದ 270 ಗ್ರಾಂ ತೂಕದ ಅಫೀಮು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ಪೈಕಿ ಚೌಧರಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಪ್ರೇಮ್ನಗರದ ಅಂಡರ್ಪಾಸ್ ಬಳಿ ಅಫೀಮು ಮಾರಾಟಕ್ಕೆ ಯತ್ನಿಸಿದ್ದ. ಈ ಮಾಹಿತಿ ಮೇರೆಗೆ ಆತನನ್ನು ಬಂಧಿಸಲಾಗಿತ್ತು. ಈತನಿಂದ 150 ಗ್ರಾಂ ಅಫೀಮು ವಶಕ್ಕೆ ಪಡೆಯಲಾಗಿತ್ತು. ಬಳಿಕ ಈತನ ಮಾಹಿತಿ ಆಧರಿಸಿ ಓಂಸಿಂಗ್ನನ್ನು ಬಂಧಿಸಿ, ಆತನಿಂದ 120 ಗ್ರಾಂ ಅಫೀಮು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.