ಡ್ರಗ್ಸ್‌ ದಂಧೆ: ಪೆಡ್ಲರ್‌ಗಳಿಬ್ಬರ ಬಂಧನ

Team Udayavani, Jan 22, 2021, 11:43 AM IST

Drugs: arrest two peddlers

ಬೆಂಗಳೂರು: “ಡಾರ್ಕ್‌ ವೆಬ್‌’ನಲ್ಲಿ ಮಾದಕವಸ್ತು ಖರೀದಿಸಿ ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪೆನಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ರಾಹುಲ್‌ ತುಳಸಿರಾಮ್‌ ಶರ್ಮಾ (28), ತಮಿಳುನಾಡು ಹೊಸೂರಿನ ಬಾಲಾಜಿ ಸಿ. ಬಂಧಿತರು. ಆರೋಪಿಗಳಿಂದ 1. 39 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು, ಲ್ಯಾಪ್‌ಟಾಪ್‌ ಹಾಗೂ 27.50 ಲಕ್ಷ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಗಳಿಬ್ಬರು ಹಲವು ವರ್ಷಗಳಿಂದ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದಾರೆ.

ಡಾರ್ಕ್‌ವೆಬ್‌ ಮೂಲಕ ಇಬ್ಬರು ಪರಿಚಿತರಾಗಿದ್ದಾರೆ. ಮಾದಕ ವಸ್ತುಗಳನ್ನು ಖರೀದಿಸಿ ಪರಿಚಯಸ್ಥ ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪೆನಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು. ಪಿಯುಸಿ ವ್ಯಾಸಂಗ ಮಾಡಿರುವ ರಾಹುಲ್‌ ಕೆಲ ವರ್ಷಗಳ ಹಿಂದೆ ನಗರಕ್ಕೆ ಆಗಮಿಸಿದ್ದು ಮಾದಕ ವಸ್ತು ಸೇವನೆ ಕಲಿತುಕೊಂಡಿದ್ದಾನೆ. ಬಳಿಕ ತಾನೇ ಪೆಡ್ಲರ್‌ ಆಗಿ ಬದಲಾಗಿದ್ದಾನೆ. ದುಶ್ಚಟಗಳು ಹಾಗೂ ವಿಲಾಸಿ ಜೀವನ ನಡೆಸುವ ಸಲುವಾಗಿ ಮಾದಕ ವಸ್ತು ಮಾರಾಟಕ್ಕಿಳಿದಿದ್ದ. ಸೇಲಂನನಲ್ಲಿ ಮೊದಲು ಚಿನ್ನಾಭರಣ ಮಾರಾಟ ಮಳಿಗೆ ಹೊಂದಿದ್ದ ಬಾಲಾಜಿ ವ್ಯವಹಾರದಲ್ಲಿ ನಷ್ಟವುಂಟಾಗಿದ್ದರಿಂದ ಸುಲಭವಾಗಿ ಹಣ ಗಳಿಸಲು ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ.

ಇದನ್ನೂ ಓದಿ:ಸಮಯ ಮತ್ತೆ ಮರಳಿ ಸಿಗಲ್ಲ….ಸಮಯ ಪಾಲನೆಯಿಂದ ನಮಗೇನು ಲಾಭ?

ಈತನಿಗೆ ಡಾರ್ಕ್‌ವೆಬ್‌ನಲ್ಲಿ ರಾಹುಲ್‌ ಪರಿಚಯ ಆದ ಬಳಿಕ ಬೆಂಗಳೂರಿಗೆ ಸ್ಥಳಾಂತರಗೊಂಡು ದಂಧೆ ನಡೆಸುತ್ತಿದ್ದ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. ಪೈಪ್‌ ಲೈನ್‌ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಇನ್ಸ್‌ಪೆಕ್ಟರ್‌ ಪಿ.ಶಿವಕುಮಾರ್‌, ಪಿಎಸ್‌ಐ ವಿದ್ಯಾಶ್ರೀ ಎಸ್‌. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ರಾಹುಲ್‌ನನ್ನು ಬಂಧಿಸಿ 334 ಎಲ್‌ಇಡಿ ಸ್ಟ್ರಿಪ್ಸ್‌ ಜಪ್ತಿ ಮಾಡಲಾಗಿತ್ತು. ಬಳಿಕ ಆತ ನೀಡಿದ ಮಾಹಿತಿ ಮೇರೆಗೆ ಬಾಲಾಜಿಯನ್ನು ಬಂಧಿಸಿ ಆತನಿಂದ ಉಳಿದ ಡ್ರಗ್ಸ್‌ ಹಾಗೂ ನಗದು ಜಪ್ತಿ ಮಾಡಲಾಗಿದೆ. ಆರೋಪಿಗಳಿಬ್ಬರನ್ನು ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆದಿದ್ದು ತನಿಖೆ ಮುಂದುವರಿಸಲಾಗಿದೆ ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.