ಪೊಲೀಸರ ಕಂಡು ಡ್ರಗ್ಸ್ ತುಂಬಿದ್ದ ಬ್ಯಾಗ್ ಬಿಟ್ಟು ಪರಾರಿ
Team Udayavani, Jul 27, 2023, 2:57 PM IST
ಬೆಂಗಳೂರು: ಬಾಣಸವಾಡಿ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ಒಂದು ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಸಿಕೊಳ್ಳಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಠಾಣೆ ವ್ಯಾಪ್ತಿಯ ಎಚ್ಆರ್ಬಿಆರ್ ಲೇಔಟ್, ಕಲ್ಯಾಣ ನಗರದ ಸರ್ವೀಸ್ ರಸ್ತೆ ಬಳಿಯ ಜಲಮಂಡಳಿ ಕಚೇರಿ ಕಾಂಪೌಂಡ್ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಪಡೆದ ಠಾಣಾಧಿಕಾರಿ ಎಲ್.ಸಂತೋಷ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ಸ್ಥಳಕ್ಕೆ ಹೋಗಿದೆ. ಆದರೆ, ಪೊಲೀಸರ ಕಂಡ ಆರೋಪಿ, ಮಾದಕವಸ್ತು ತುಂಬಿದ್ದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀ ಸರು ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ 1.05 ಕೋಟಿ ರೂ. ಮೌಲ್ಯದ 1 ಕೆ.ಜೆ. ಎಂಡಿಎಂಎ ಕ್ರಿಸ್ಟಲ್ ಮತ್ತು 300 ಗ್ರಾಂ ಎಂಡಿಎಂಎ ಎಕ್ಸೈಸಿ ಮಾತ್ರೆಗಳು ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.