![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 5, 2024, 1:47 PM IST
ಬೆಂಗಳೂರು: ನಗರದಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ನಿರಂತರ ವಿಶೇಷ ಕಾರ್ಯಾಚರಣೆ ನಡೆಸು ತ್ತಿರುವ ಸಂಚಾರ ಪೊಲೀಸರು, ಕಳೆದ 7 ದಿನಗಳಲ್ಲಿ 394 ಪಾನಮತ್ತ ಚಾಲಕರು, ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ನಗರ ಸಂಚಾರ ಪೊಲೀಸರು 50 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ಅ.28ರಿಂದ ನ.3ರವರೆಗೆ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ವಿವಿಧ ಮಾದರಿಯ ಒಟ್ಟು 18,502 ವಾಹನಗಳ ಚಾಲಕರನ್ನು ತಪಾಸಣೆ ನಡೆಸಿದ್ದಾರೆ. ಈ ಪೈಕಿ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 394 ಚಾಲಕರು,ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅತಿ ವೇಗ, 128 ಪ್ರಕರಣ ದಾಖಲು: ಇದೇ ವೇಳೆ ಅತಿ ವೇಗದಿಂದ ವಾಹನ ಚಲಾಯಿ ಸುವವರ ವಿರುದ್ಧವೂ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು, 7 ದಿನಗಳಲ್ಲಿ 128 ಪ್ರಕರಣ ದಾಖಲಿಸಿದ್ದು, 1.29 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ಈ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧದ ವಿಶೇಷ ಕಾರ್ಯಾಚರಣೆ ಹಾಗೂ ಅತಿ ವೇಗ ವಾಹನ ಚಾಲನೆ ವಿರುದ್ಧದ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.