Bus drivers: ಕುಡಿದು ಶಾಲಾ ವಾಹನ ಚಾಲನೆ: 16 ಚಾಲಕರ ವಿರುದ್ಧ ಪ್ರಕರಣ
Team Udayavani, Jan 24, 2024, 12:17 PM IST
ಬೆಂಗಳೂರು: ಮದ್ಯಪಾನ ಮಾಡಿ ಶಾಲಾ ಮಕ್ಕಳ ವಾಹನ ಚಲಾಯಿಸುವ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ ಬೆಳಗ್ಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಈ ವೇಳೆ ಸಿಕ್ಕಿಬಿದ್ದ 16 ಚಾಲಕರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿಕೊಂಡಿದ್ದಾರೆ.
ಬೆಳಗ್ಗೆ 7ರಿಂದ 9.30ರವರೆಗೆ 3,414 ಶಾಲಾ ವಾಹನಗಳ ಚಾಲಕರನ್ನು ಪೊಲೀಸರು ಪರಿಶೀಲಿಸಿದ್ದು, 16 ಚಾಲಕರು ಮದ್ಯಸೇವಿಸಿ ಶಾಲಾ ವಾಹನ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ಇವರ ವಿರುದ್ಧ ಸಂಚಾರ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಇನ್ನು ಸಿಕ್ಕಿಬಿದ್ದ 16 ಚಾಲಕರ ವಾಹನ ಪರವಾನಗಿ ಪತ್ರ ಆರ್‌ಟಿಒ ಕಚೇರಿಗೆ ರವಾನಿಸಲಾಗಿದೆ.
ಶಾಲಾ ಮಕ್ಕಳನ್ನು ಕರೆತರುವ ವಾಹನಗಳ ಚಾಲಕರು, ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆ ಪ್ರಮಾಣ ಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಕಡ್ಡಾಯ ಮಾಡಿತ್ತು. ಇದರ ಬೆನ್ನಲ್ಲೇ ಶಾಲಾ ವಾಹನ ಚಾಲಕರ ವಿರುದ್ಧ ಸಂಚಾರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಕುರಿತು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೋಲೀಸ್ ಆಯುಕ್ತ ಎಂ.ಎನ್.ಅನುಚೇತ್ ಮಾತನಾಡಿ, ಕಡಿದು ವಾಹನ ಚಲಾಯಿಸಿದ ಚಾಲಕರ ಚಾಲನ ಪರವಾನಗಿ ಅಮಾನತುಗೊಳಿಸುವಂತೆ ಆರ್‌ಟಿಒಗೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.