ಕ್ಷೇತ್ರದ ಜನತೆಗೆ ಡಿವಿಎಸ್ ಕೃತಜ್ಞತೆ
Team Udayavani, May 25, 2019, 3:05 AM IST
ಬೆಂಗಳೂರು: ಚುನಾವಣೆ ಫಲಿತಾಂಶ ಹೊರ ಬಿದ್ದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರ ಹಿಡಿದಿದೆ. ಈ ಸಂದರ್ಭದಲ್ಲಿ ದೇಶ, ರಾಜ್ಯ ಹಾಗೂ ನನ್ನ ಕ್ಷೇತ್ರದ ಮತದಾರರಿಗೆ ಹೃದಯ ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ದೇಶ ಪ್ರಥಮ ಎಂಬ ಘೋಷವಾಕ್ಯಕ್ಕೆ ಇಂದು ಜನಾದೇಶ ಸಿಕ್ಕಿದೆ. ನರೇಂದ್ರ ಮೋದಿ ಅವರ 5 ವರ್ಷಗಳ ಆಡಳಿತ ವೈಖರಿ, ದೇಶದ ಅಭಿವೃದ್ಧಿ, ಜನರ ಸಮಸ್ಯೆಗಳ ಪರಿಹಾರ ಮತ್ತು ರಾಷ್ಟ್ರದ ಘನತೆ, ಗೌರವ ಎತ್ತಿ ಹಿಡುವಂತಹ ಕೆಲಸಗಳನ್ನು ಜನ ಒಪ್ಪಿಕೊಂಡಿದ್ದಾರೆ. ಈ ವಿಶೇಷವಾದ ಆಶೀರ್ವಾದ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದೆ. ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ನಡೆದುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನಿಮಗೆ ಎಂದೂ ವಿಶ್ವಾಸ ದ್ರೋಹ, ನಿಮ್ಮ ಮನಸ್ಸಿನ ಭಾವನೆಗೆ ಚ್ಯುತಿ ಬರುವಂತಹ ರೀತಿಯಲ್ಲಿ ನಾವು ನಡೆದುಕೊಳ್ಳುವುದಿಲ್ಲ. 5 ವರ್ಷಗಳಲ್ಲಿ ನಿಮ್ಮ ಸೇವೆಯನ್ನು ಮಾಡಿದ್ದಕ್ಕೆ, ಮತ್ತಷ್ಟು ಕೆಲಸವನ್ನು ನನ್ನಿಂದ ನಿರೀಕ್ಷೆ ಮಾಡುವ ನಿಟ್ಟಿನಲ್ಲಿ ಜನಾದೇಶ ನೀಡಿದ್ದೀರಿ. ಕ್ಷೇತ್ರದ ನೂರಾರು ಸಮಸ್ಯೆಗೆ ಸ್ಪಂದಿಸಿದ್ದೇನೆ. ಇನ್ನೂ ಸೇವೆ ಮಾಡುವುದು ಸಾಕಷ್ಟಿದೆ ಎಂದು ನಂಬಿದ್ದೇನೆ.
ಕಾರ್ಯಕರ್ತರ ಗೆಲುವು: ಏಳು ಜನ ಶಾಸಕರು ನನ್ನ ವಿರೋಧಿ ಬಣದಲ್ಲಿದ್ದರು. ಒಬ್ಬ ಶಾಸಕರು ಜತೆಗೆ ಇದ್ದರು. ಇಡೀ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಕಷ್ಟ ಎಂಬ ವಾತವರಣ ಸೃಷ್ಟಿಯಾಗಿತ್ತು. ಆದರೆ ಪಕ್ಷದ ಕಾರ್ಯಕರ್ತರು ಈ ಸವಾಲನ್ನು ಅತ್ಯಂತ ಯಶಸ್ವಿಯಾಗಿ ಸ್ವೀಕರಿಸಿ ಗೆಲವು ತಂದುಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ತಲೆತಗ್ಗಿಸಿ ವಂದಿಸುತ್ತೇನೆ. ಅವರ ಶ್ರಮಕ್ಕೆ ಗೌರವ ತರುವಂತ ಹಾಗೂ ದಿನದ 24 ಗಂಟೆ ಅವರ ಅಹವಾಲುಗಳನ್ನು ಆಲಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.