ಸಂಬಂಧಿತರ ಹೇಳಿಕೆ ಇಲ್ಲದೇ ಗಣಪತಿ ಆತ್ಮಹತ್ಯೆ ವರದಿ ಸಲ್ಲಿಕೆ


Team Udayavani, Feb 27, 2018, 6:00 AM IST

DYSP-Ganapathi-suicide-case.jpg

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ನ್ಯಾ.ಕೆ.ಎನ್‌.ಕೇಶವನಾರಾಯಣ ಅವರ ಏಕಸದಸ್ಯ ವಿಚಾರಣಾ ಆಯೋಗ ಸೋಮವಾರ ತನ್ನ ವಿಚಾರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ಕೆ.ಜೆ.ಜಾರ್ಜ್‌ ಮತ್ತು ಇಬ್ಬರು ಪೊಲೀಸ್‌ ಅಧಿಕಾರಿಗಳಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ. 

ವಿಕಾಸಸೌಧದಲ್ಲಿ ಸೋಮವಾರ ನ್ಯಾ.ಕೆ.ಎನ್‌.ಕೇಶವನಾರಾಯಣ ಅವರು ಆಯೋಗದ ವಿಚಾರಣಾ ವರದಿಯನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಮತ್ತು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಅವರಿಗೆ ಸಲ್ಲಿಸಿದ್ದಾರೆ. 320 ಪುಟಗಳ ಈ ವರದಿಯಲ್ಲಿ ಹಲವು ಶಿಫಾರಸುಗಳನ್ನು ಮಾಡಲಾಗಿದೆ.

ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ತನಿಖಾಧಿಕಾರಿಗಳು ಸೇರಿದಂತೆ 48 ಸಾಕ್ಷ್ಯಗಳನ್ನು ವಿಚಾರಣೆಗೊಳಪಡಿಸಿರುವುದರ ಜತೆಗೆ ಅವರು ನೀಡಿದ ದಾಖಲೆಗಳು, ಸಿಐಡಿ ವಶದಲ್ಲಿರುವ ದಾಖಲೆಗಳನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಲಾಗಿದೆ. ಸರ್ಕಾರಕ್ಕೆ ನೀಡಿರುವ ವರದಿಯ ಜತೆಗೆ ವಿಚಾರಣೆಗೆ ಪರಿಗಣಿಸಿರುವ ದಾಖಲೆಗಳನ್ನು ಕೂಡ ಒದಗಿಸಲಾಗಿದೆ.

ಆದರೆ, ಆಯೋಗದ ವಿಚಾರಣೆ ವೇಳೆ ಸಚಿವ ಕೆ.ಜೆ.ಜಾರ್ಜ್‌, ಐಪಿಎಸ್‌ ಅಧಿಕಾರಿಗಳಾದ ಎ.ಎಂ.ಪ್ರಸಾದ್‌ ಮತ್ತು ಪ್ರಣಬ್‌ ಮೊಹಂತಿ ಅವರನ್ನು ವಿಚಾರಣೆಗೆ ಒಳಪಡಿಸದಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಆಯೋಗದ ಅಧ್ಯಕ್ಷ ನ್ಯಾ.ಕೇಶವನಾರಾಯಣ, ಗಣಪತಿ ಆತ್ಮಹತ್ಯೆ ಪ್ರಕರಣದ ಒಟ್ಟಾರೆ ವಿಚಾರಣೆಗೆ ಆಯೋಗ ರಚಿಸಲಾಗಿತ್ತು. ಯಾರನ್ನೂ ಆರೋಪಿ ಎಂದು ಪರಿಗಣಿಸಿರಲಿಲ್ಲ. ಆರೋಪಿಗಳೇ ಇಲ್ಲ ಎಂದ ಮೇಲೆ ಯಾರನ್ನು ವಿಚಾರಣೆಗೊಳಪಡಿಸುವುದು? ಹೀಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಿಲ್ಲ. ಆಯೋಗದ ಸಮಕ್ಷಮ ಬಂದ ಸಾಕ್ಷಿಗಳ ಹೇಳಿಕೆ ಪಡೆದು ವರದಿ ಸಲ್ಲಿಸಿದ್ದೇವೆ ಎಂದಿದ್ದಾರೆ.

ಈ ಮಧ್ಯೆ ಉದಯವಾಣಿ ಜತೆ ಮಾತನಾಡಿದ ನ್ಯಾ.ಕೇಶವನಾರಾಯಣ, ಗಣಪತಿ ಸಾವಿನ ಪ್ರಕರಣದಲ್ಲಿ ಅತಿ ಮುಖ್ಯವಾಗಿ ಮೃತ ಗಣಪತಿ ಅವರ ತಂದೆ ಕುಶಾಲಪ್ಪ, ಸೋದರಿ, ಗಣಪತಿ ಅವರ ಸಹೋದರರ ಹೇಳಿಕೆ ಅಗತ್ಯವಿತ್ತು. ಆದರೆ, ಹಲವು ಬಾರಿ ನೋಟಿಸ್‌ ನೀಡಿದ್ದರೂ ಅವರು ವಿಚಾರಣೆಗೆ ಬರಲಿಲ್ಲ. ಬಹುಶ: ಅವರು ವಿಚಾರಣೆಗೆ ಬಂದು ಅಭಿಪ್ರಾಯ ದಾಖಲಿಸಿದ್ದರೆ ನ್ಯಾಯಾಂಗ ವಿಚಾರಣಾ ಆಯೋಗದ ವರದಿಗೆ ಮತ್ತಷ್ಟು ಅನುಕೂಲವಾಗುತ್ತಿತ್ತು ಎಂದೂ ಹೇಳಿದ್ದಾರೆ.

ಸರ್ಕಾರ ವಿಚಾರಣಾ ಆಯೋಗಕ್ಕೆ ವಹಿಸಿದ್ದ ಜವಾಬ್ದಾರಿಯನ್ನು ಮುಕ್ತವಾಗಿ ಒಪ್ಪಿಕೊಂಡು ವಿಚಾರಣೆ ನಡೆಸಿದ್ದೇನೆ. ಘಟನೆ ನಡೆದ ಮಡಿಕೇರಿಯ ಲಾಡ್ಜ್ಗೆ ತೆರಳಿ ಖುದ್ದು ಪರಿಶೀಲನೆ ನಡೆಸಲಾಗಿದೆ. ಮಡಿಕೇರಿ ಠಾಣೆಯಲ್ಲಿ ಎಫ್ಐಆರ್‌, ಸಿಐಡಿ ತನಿಖಾ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಎಲ್ಲವನ್ನೂ  ಕೂಲಂಕಶವಾಗಿ ಅವಲೋಕಿಸಿ, ಒಟ್ಟು 48 ಜನರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದುಕೊಳ್ಳಲಾಗಿದ್ದು, ನಿಷ್ಪಕ್ಷಪಾತವಾಗಿ ವರದಿ ನೀಡಿದ್ದೇನೆ ಎಂದರು.

ಶ್ರೀಧರ್‌ ವಿಚಾರಣೆಯೂ ಇಲ್ಲ
ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿ ಶ್ರೀಧರ್‌ ಅವರ ವಿಚಾರಣೆಯನ್ನೂ ನಡೆಸಿಲ್ಲ. ಪ್ರಕರಣದ ಸಚಿವರು, ಇಬ್ಬರು ಪೊಲೀಸ್‌ ಅಧಿಕಾರಿಗಳ ಪಾತ್ರವಿಲ್ಲವೆಂದು “ಬಿ’ ರಿಪೋರ್ಟ್‌ ಸಲ್ಲಿಸಿದ್ದ ತನಿಖಾಧಿಕಾರಿಯನ್ನೇ ವಿಚಾರಣೆಗೊಳಪಡಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ನ್ಯಾಯಮೂರ್ತಿಗಳು, ಆ ಅಧಿಕಾರಿಗೆ ಆಯೋಗದ ನಿಯಮಾವಳಿ 8( ಬಿ) ಪ್ರಕಾರ ಎರಡು ಬಾರಿ ನೋಟಿಸ್‌ ನೀಡಲಾಗಿತ್ತು. ಅದಕ್ಕೆ ಅವರು, ಈಗಾಗಲೇ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಈ ಕಾರಣದಿಂದ ವಿಚಾರಣೆಗೆ ಹಾಜರಾಗಲಿಲ್ಲ ಎಂದು ಲಿಖೀತ ಉತ್ತರ ನೀಡಿದ್ದಾರೆ. ವಿಚಾರಣೆಗೆ ಹಾಜರಾಗಿಲ್ಲ ಎಂದು ಹೇಳಿದರು.

ಏನಿದು ಪ್ರಕರಣ?:
ಮಂಗಳೂರು ಐಜಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಕೊಡಗು ಜಿಲ್ಲೆ ಸೋಮವಾರ ಪೇಟೆಯ ಗಣಪತಿ ಅವರು 2016 ಜುಲೈ 7ರಂದು ಮಡಿಕೇರಿಯ ವಸತಿಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮುನ್ನ ವೀಡಿಯೋ ಹೇಳಿಕೆ ನೀಡಿ, ಸಚಿವ ಜಾರ್ಜ್‌, ಐಪಿಎಸ್‌ ಅಧಿಕಾರಿಗಳಾದ ಎ.ಎಂ.ಪ್ರಸಾದ್‌ ಮತ್ತು ಪ್ರಣಬ್‌ ಮೊಹಂತಿ ಮೇಲೆ ಆರೋಪ ಮಾಡಿದ್ದರು. 

ಹೀಗಾಗಿ ಗಣಪತಿ ಆತ್ಮಹತ್ಯೆ ಪ್ರಕರಣ ವಿವಾದವಾಗಿ ಜಾರ್ಜ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿಬಂದಿತ್ತು. ನಂತರ ಸಿಐಡಿ ತನಿಖೆಗೆ ಆದೇಶಿಸಲಾಗಿತ್ತಾದರೂ ಸರ್ಕಾರದ ವಿರುದ್ಧ ಜನರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ 2016ರ ಜು. 16ರಂದು ಪ್ರಕರಣದ ವಿಚಾರಣೆಗೆ ನ್ಯಾ.ಕೆ.ಎನ್‌.ಕೇಶವನಾರಾಯಣ್‌ ಅವರ ಏಕಸದಸ್ಯ ಆಯೋಗ ರಚಿಸಿತ್ತು. ವಿಚಾರಣಾ ವರದಿ ಸಲ್ಲಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ವಿಚಾರಣೆ ಪೂರ್ಣಗೊಳ್ಳದ ಕಾರಣ ಅವಧಿ ವಿಸ್ತರಿಸುತ್ತಾ ಬರಲಾಗಿತ್ತು. ಇದೀಗ ಆಯೋಗ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ಆಯೋಗದ ನ್ಯಾ.ಕೆ.ಎನ್‌.ಕೇಶವನಾರಾಯಣ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ವರದಿಯನ್ನು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿಕೊಡಲಾಗುವುದು. ಅವರು ಪರಿಶೀಲಿಸಿ ನೀಡುವ ಮಾಹಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ರಾಮಲಿಂಗಾರೆಡ್ಡಿ, ಗೃಹ ಸಚಿವ

ಪ್ರಾಮಾಣಿಕವಾಗಿ, ನಿಷ್ಪಕ್ಷಪಾತವಾಗಿ ಎಲ್ಲ ಆಯಾಮಗಳಲ್ಲಿ ಕೂಲಂಕಶ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ವರದಿಯಲ್ಲೇನಿದೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಏಕೆಂದರೆ, ನಿಯಮಾವಳಿ ಪ್ರಕಾರ ನಾವು ಗೌಪ್ಯತೆ ಕಾಪಾಡಬೇಕು. ವರದಿ ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿ ಸರ್ಕಾರದ್ದಾಗಿದೆ.
– ನ್ಯಾ.ಕೆ.ಎನ್‌.ಕೇಶವನಾರಾಯಣ, ವಿಚಾರಣಾ 
ಆಯೋಗದ ಅಧ್ಯಕ್ಷರು

ಟಾಪ್ ನ್ಯೂಸ್

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.