ಪರಿಸರ ಸ್ನೇಹಿ ಗಣಪತಿ: ವಿದ್ಯಾರ್ಥಿಗಳಿಗೆ ಅರಿವು
Team Udayavani, Sep 7, 2018, 6:25 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಗಣೇಶ ಚತುರ್ಥಿಗೆ ಪರಿಸರ ಸ್ನೇಹಿ ಗಣಪತಿ
ಖರೀದಿಸುವಂತೆ ಅರಿವು ಮೂಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಜಿಲ್ಲಾ ಉಪನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಪರಿಸರ ಸಂರಕ್ಷಣೆ ಮತ್ತು ಸ್ವತ್ಛತೆ ವಿದ್ಯಾರ್ಥಿಗಳ ದೈನಂದಿನ ಚಟುವಟಿಕೆಯಲ್ಲಿ ಹಾಸುಹೊಕ್ಕಾಗಿರಬೇಕು. ರಾಸಾಯನಿಕ ಬಳಸಿ ತಯಾರಿಸುವ ಗಣೇಶನ ಮೂರ್ತಿ ವಿಸರ್ಜನೆಯ ನಂತರ ಕೆರೆಯ ನೀರು ಕಲುಷಿತವಾಗುವ ಜತೆಗೆ ಅಲ್ಲಿರುವ ಜಲಚರಗಳಿಗೂ ಹಾನಿಯಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಅರಿವು ಮೂಡಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ನೀಡಿರುವ ಸಲಹೆಗಳ ಆಧಾರದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕ್ರಮ ತೆಗೆದುಕೊಂಡಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಉಪನಿರ್ದೇಶಕರು ಸಂಬಂಧಪಟ್ಟ ಶಾಲೆಗಳ
ಮುಖ್ಯಶಿಕ್ಷಕರಿಗೆ ಸೂಚನೆ ನೀಡಲಿದ್ದಾರೆ. ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಹ ಶಿಕ್ಷಕರು ಪರಿಸರ ಸ್ನೇಹಿ ಗಣೇಶೋತ್ಸವದ ಬಗ್ಗೆ ಮಕ್ಕಳಿಗೆ ಅರಿವು ಮತ್ತು ಜಾಗೃತಿಯ ಸಂದೇಶ ನೀಡಲಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.