ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆ : ಸಚಿವ ನಾಗೇಶ್
Team Udayavani, Apr 27, 2022, 6:20 AM IST
ಬೆಂಗಳೂರು: ರಾಜ್ಯದ ಎಲ್ಲ ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಿಸುವ ಪಠ್ಯವನ್ನು ಪರಿಶೀಲಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ಸೂಚನೆ ನೀಡಲಾಗಿದೆ. ಈ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಪ್ರತೀ ಬಿಇಒಗಳು ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಒಂದು ವೇಳೆ ಸರಕಾರದ ನೀತಿ ನಿಯಮಗಳಿಗೆ ವಿರುದ್ಧವಾಗಿ ಪಠ್ಯಕ್ರಮಗಳಿದ್ದರೆ, ಖಂಡಿತವಾಗಿಯೂ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾಯ್ದೆಯ ಉಲ್ಲಂಘನೆ
ವಿದ್ಯಾರ್ಥಿಗಳ ಪ್ರವೇಶಾತಿ ವೇಳೆ ಬೈಬಲ್ ಓದಲು ಒಪ್ಪಿಗೆ ಇದೆಯೇ ಎಂದು ಕೇಳುತ್ತಾರೆ. ಕೆಲವು ಶಿಕ್ಷಣ ಸಂಸ್ಥೆಗಳು ಒಪ್ಪಿಗೆ ಕೊಟ್ಟ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾತಿ ಕೋಡುತ್ತಾರೆ. ಇದು ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆ. ಒಂದು ವೇಳೆ ಬೈಬಲ್ ಓದಲು ನಿರಾಕರಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡುವುದಿಲ್ಲ ಎಂಬ ನಿಯಮಗಳನ್ನು ಅಳವಡಿಸಿಕೊಂಡಿವೆ. ಈ ವಿಚಾರವಾಗಿ ಬೇರೆ ಸಂದರ್ಭದಲ್ಲಿ ಮಾತನಾಡುವ ವಿರೋಧ ಪಕ್ಷಗಳು ಈಗ ಏಕೆ ಮಾತನಾಡುತ್ತಿಲ್ಲ? ಟಿಪ್ಪು, ಹಿಜಾಬ್ ವಿಚಾರಕ್ಕೆ ಮಾತನಾಡುವವರು ಬೈಬಲ್ ವಿಷಯದಲ್ಲಿ ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.
ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯಗೊಳಿಸಿರುವ ಕುರಿತು ಪ್ರತಿಕ್ರಿ ಯಿಸಿದ ಅವರು, ಕ್ಲಾರೆನ್ಸ್ ಶಾಲೆಗೆ ಎಲ್ಲ ಧರ್ಮದ ಮಕ್ಕಳು ಬರುತ್ತಾರೆ. ಅವರಿಗೆ ನಿಯಮಾನುಸಾರವಾಗಿ ಪಾಠ- ಪ್ರವಚನಗಳನ್ನು ಮಾಡಬೇಕು. ಪ್ರಜಾಪ್ರಭುತ್ವದ ಅಡಿಯಲ್ಲಿ ನಾವು ಏನು ಕ್ರಮ ತೆಗೆದುಕೊಳ್ಳಬೇಕೇ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.
ಶಾಲೆಗೆ ನೋಟಿಸ್
ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗ್ರಂಥಗಳನ್ನು ಬೋಧನೆಗೆ ಅವಕಾಶವಿಲ್ಲ. ಆದರೆ, ಯಾವ ಆಧಾರದಲ್ಲಿ ಮಕ್ಕಳಿಗೆ ಬೈಬಲ್ ಬೋಧನೆ ಮಾಡಲಾಗುತ್ತಿದೆ ಎಂದು ಕಾರಣ ನೀಡುವಂತೆ ಸೂಚಿಸಿ ಕ್ಲಾರೆನ್ಸ್ ಶಾಲೆಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಶಾಲಾ ಆಡಳಿತ ಮಂಡಳಿಯ ನಿರ್ಣಯವು ಕರ್ನಾಟಕ ಶಿಕ್ಷಣ ಕಾಯ್ದೆಗೆ ವಿರುದ್ಧವಾಗಿದೆ. ಅದಕ್ಕಾಗಿ ನೋಟಿಸ್ ನೀಡಲಾಗಿದೆ ಎಂದು ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.