ಸಚಿವ ಸ್ಥಾನಕ್ಕೆ ಶಿಕ್ಷಣ ಸಚಿವ ಎನ್. ಮಹೇಶ್ ರಾಜೀನಾಮೆ
Team Udayavani, Oct 11, 2018, 6:35 PM IST
ಬೆಂಗಳೂರು: ಕಾಂಗ್ರೆಸ್ – ಜೆ.ಡಿ.ಎಸ್. ಸಮ್ಮಿಶ್ರ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವರಾಗಿದ್ದ ಬಿ.ಎಸ್.ಪಿ.ಯ ಎನ್. ಮಹೇಶ್ ಅವರು ಇಂದು ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಜೆ.ಡಿ.ಎಸ್. ಮಿತ್ರಪಕ್ಷವಾಗಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಮಾಯಾವತಿ ನೇತೃತ್ವದ ಬಿ.ಎಸ್.ಪಿ.ಯಿಂದ ಸ್ಪರ್ಧಿಸಿದ್ದ ಎನ್. ಮಹೆಶ್ ಅವರು ಚಾಮರಾಜನಗರದ ಕೊಳ್ಳೇಗಾಲ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಇವರ ಪಕ್ಷವು ಕರ್ನಾಟಕದಲ್ಲಿ ತನ್ನ ಖಾತೆಯನ್ನು ತೆರೆದಿತ್ತು. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಲ್ಲಿಸಿರುವ ಮಹೇಶ್ ಅವರು ಇನ್ನು ಮುಂದೆ ಪಕ್ಷ ಸಂಘಟನೆಯ ಕಡೆಗೆ ಹೆಚ್ಚಿನ ಗಮನಹರಿಸುವುದಾಗಿ ಹೇಳಿಕೊಂಡಿದ್ದಾರೆ, ಮಾತ್ರವಲ್ಲದೇ ಜೆ.ಡಿ.ಎಸ್. ಪಕ್ಷಕ್ಕೆ ತಮ್ಮ ಬೆಂಬಲ ಮುಂದುವರಿಯುತ್ತದೆ ಹಾಗೂ ಮುಂಬರುವ ಉಪಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರವನ್ನೂ ಸಹ ಮಾಡುತ್ತೇನೆ ಎಂದು ಮಹೇಶ್ ಅವರು ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಬಿ.ಎಸ್.ಪಿ.ಯ ಅಧ್ಯಕ್ಷರಾಗಿದ್ದ ಎನ್. ಮಹೇಶ್ ಅವರು ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿಯವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಹುಜನ ಸಮಾಜವಾದಿ ಪಕ್ಷ ಕರ್ನಾಟಕದಲ್ಲಿ ತನ್ನ ಖಾತೆಯನ್ನು ತೆರದಿತ್ತು. ಚುನಾವಣೆಯ ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಮೂಡಿಬಂದಿದ್ದ ಬಿ.ಜೆ.ಪಿ.ಯನ್ನು ಅಧಿಕಾರದಿಂದ ದೂರವಿರಿಸುವ ಸಲುವಾಗಿ ಕಾಂಗ್ರೆಸ್ – ಜೆ.ಡಿ.ಎಸ್. ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದಿದ್ದ ಸಂದರ್ಭದಲ್ಲಿ ಜೆ.ಡಿ.ಎಸ್. ಮಿತ್ರಪಕ್ಷವಾಗಿದ್ದ ಬಿ.ಎಸ್.ಪಿ.ಗೆ ಸಹಜವಾಗಿಯೇ ಒಂದು ಸಚಿವ ಸ್ಥಾನ ಒಲಿದು ಬಂದಿತ್ತು. ಇದರಂತೆ ಆ ಪಕ್ಷದ ಏಕೈಕ ಶಾಸಕರಾಗಿದ್ದ ಎನ್. ಮಹೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸದ್ದರು ಮತ್ತು ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯಂತಹ ಮಹತ್ವದ ಹುದ್ದೆಯನ್ನು ನಿಭಾಯಿಸುವ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.