ಭಾರೀ ಚಳಿಯ ಪರಿಣಾಮ; ಜನವರಿಯಲ್ಲಿ ಕಾಶಿ ದರ್ಶನದ 3ನೇ ಟ್ರಿಪ್‌

ಡಿ.5ರ ನಂತರ ಉಷ್ಣಾಂಶವು ರಾತ್ರಿಯ ಹೊತ್ತು 5 ಡಿಗ್ರಿ ಸೆಲ್ಸಿಯಸ್‌ ಗೆ ತಲುಪುತ್ತದೆ

Team Udayavani, Nov 24, 2022, 11:25 AM IST

ಭಾರೀ ಚಳಿಯ ಪರಿಣಾಮ; ಜನವರಿಯಲ್ಲಿ ಕಾಶಿ ದರ್ಶನದ 3ನೇ ಟ್ರಿಪ್‌

ಬೆಂಗಳೂರು: ಉತ್ತರ ಭಾರತದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿರುವುದರಿಂದ ಡಿಸೆಂಬರ್‌ ಬದಲಾಗಿ ಜನವರಿಯಲ್ಲಿ ಕರ್ನಾಟಕ- ಭಾರತ್‌ ಗೌರವ್‌ ಕಾಶಿ ದರ್ಶನ ವಿಶೇಷ ರೈಲಿನ ಮೂರನೇ ಟ್ರಿಪ್‌ಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಕರ್ನಾಟಕ- ಭಾರತ್‌ ಗೌರವ್‌ ಕಾಶಿ ದರ್ಶನ ವಿಶೇಷ ರೈಲು ಪ್ರವಾಸದ ಎರಡನೇ ಯಾತ್ರೆಯ ಪ್ರಯಾಣಿಕರಿಗೆ ಬೀಳ್ಕೊಟ್ಟ ಬಳಿಕ ಮಾತನಾಡಿದ ಅವರು, ಡಿ.5ರ ನಂತರ ಉಷ್ಣಾಂಶವು ರಾತ್ರಿಯ ಹೊತ್ತು 5 ಡಿಗ್ರಿ ಸೆಲ್ಸಿಯಸ್‌ ಗೆ ತಲುಪುತ್ತದೆ. ಇಷ್ಟು ತೀವ್ರ ಚಳಿಯನ್ನು ದಕ್ಷಿಣ ಭಾರತದ ಜನರು ತಡೆದುಕೊಳ್ಳುವುದು ಬಹಳ ಕಷ್ಟ ಎಂದು ಹೇಳಿದರು.

ಐಆರ್‌ಸಿಟಿಸಿ ಉತ್ತರ ಭಾರತದ ಕಡೆಯ ತನ್ನ ಎಲ್ಲಾ ಪ್ರವಾಸಿ ರೈಲುಗಳನ್ನು ದಕ್ಷಿಣ ಮತ್ತು ಪಶ್ಚಿಮ ಭಾರತದ ಕಡೆಗೆ ಮಾರ್ಪಾಡು ಮಾಡುತ್ತದೆ. ಹೀಗಾಗಿ ಕಾಶಿ ದರ್ಶನ ರೈಲನ್ನು ಡಿಸೆಂಬರ್‌ ಬದಲಾಗಿ ಜನವರಿ ತಿಂಗಳಲ್ಲಿ ಯೋಜಿಸುವಂತೆ ಐಆರ್‌ ಸಿಟಿಸಿ ಅಧಿಕಾರಿಗಳು ಇಲಾಖೆಗೆ ಪತ್ರ ಬರೆದಿದ್ದಾರೆ. ನಮ್ಮ ಯಾತ್ರಾರ್ಥಿಗಳಲ್ಲಿ ಹೆಚ್ಚಿನ ಜನರು ಹಿರಿಯ ನಾಗರೀಕರಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ಜ.20ರ ನಂತರ 3ನೇ ಟ್ರಿಪ್‌ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಚಾರ್ಧಾಮ್‌ ಯಾತ್ರೆ: ಚಾರ್ಧಾಮ್‌ ಯಾತ್ರೆ ಇತ್ತೀಚೆಗೆ ಮುಗಿದಿದ್ದು, ಇಲಾಖೆಯ ಕಾಲಾವಧಿಯಂತೆಯೇ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಅರ್ಜಿಗಳನ್ನು ಆಹ್ವಾನಿಸುವ ಪ್ರಕ್ರಿಯೆ ಯಾವಾಗಲೂ ನವೆಂಬರ್‌ನಲ್ಲಿ ಪ್ರಾರಂಭವಾಗಿ, ಏಪ್ರಿಲ್‌ ತಿಂಗಳವರೆಗೆ ನಡೆಯುತ್ತದೆ. ಈ ಯೋಜನೆಗೂ ಸರ್ಕಾರದ ಸಹಾಯಧನವಿದ್ದು ಪ್ರಕ್ರಿಯೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಚಾರ್ಧಾಮ್‌ ಯಾತ್ರೆ ಇತ್ತೀಚೆಗೆ ಮುಗಿದಿರುವ ಹಿನ್ನೆಲೆಯಲ್ಲಿ ಅರ್ಜಿ ಅಹ್ವಾನಿಸುವ ಪ್ರಕ್ರಿಯೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ನಟಿ ತಾರಾ ಅನುರಾಧ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಎಲ್ಲಾ ಸೀಟುಗಳ ಭರ್ತಿ
ಕಾಶಿಗೆ ಸಂಚಾರ ಮಾಡುವ ಈ ರೈಲಿನಲ್ಲಿ ಒಂದು ಟ್ರಿಪ್‌ಗೆ ಗರಿಷ್ಠ 600 ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದ್ದು, 100 ಮಂದಿ ರೈಲ್ವೆ ಸಿಬ್ಬಂದಿ ಇರಲಿದ್ದಾರೆ. ಈ ಬಾರಿಯೂ ರೈಲಿನ ಎಲ್ಲ ಸೀಟುಗಳೂ ಭರ್ತಿಯಾಗಿದ್ದು, ರೈಲಿನಲ್ಲಿ ಭಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕಾಶಿ ಯಾತ್ರೆಯ ರೈಲನ್ನು ಸಂಪೂರ್ಣವಾಗಿ ಧಾರ್ಮಿಕ ಪುಣ್ಯ ಕ್ಷೇತ್ರಗಳ ಪೋಟೋಗಳಿಂದ ಅಲಂಕರಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.