ಯಾರ ಕೊರಳಿಗೆ ವಿಜಯದ ಮಾಲೆ?


Team Udayavani, Dec 10, 2021, 3:34 PM IST

election

Representative Image used

ದೇವನಹಳ್ಳಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮೂರು ಪಕ್ಷದ ಅಭ್ಯರ್ಥಿಗಳಲ್ಲಿ ಯಾರ ಕೊರಳಿಗೆ ವಿಜಯದ ಮಾಲೆ? ಎಂಬುದು ಕುತೂಹಲ ಮೂಡಿಸಿದೆ.

ಕಳೆದೊಂದು ತಿಂಗಳಿನಿಂದ ವಿಧಾನ ಪರಿಷತ್‌ ಚುನಾವಣೆಗಾಗಿ ಮೂರು ಪಕ್ಷಗಳ ಅಭ್ಯರ್ಥಿಗಳು ನಾಯಕರೊಂದಿಗೆ ಬಹಿರಂಗ ಪ್ರಚಾರ ನಡೆಸಿದ್ದರು. ಈಗ ಮನೆ ಮನೆ ಪ್ರಚಾರ ಶುರುವಾಗಿದ್ದು, ಮತದಾರರನ್ನು ಮನವೊಲಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್‌ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಎಸ್‌. ರವಿ ಮತ್ತೂಮ್ಮೆ ಕಾಂಗ್ರೆಸ್‌ ಹುರಿಯಾಳು ಆಗಿದ್ದಾರೆ. ಹಾಲಿ ವಿಧಾನ ಪರಿಷತ್‌ ಸದಸ್ಯರಾಗಿರುವ ಎಚ್‌.ಎಂ. ರಮೇಶ್‌ ಗೌಡ ಜೆಡಿಎಸ್‌ ಹಾಗೂ ಬಿ.ಸಿ.ನಾರಾಯಣಸ್ವಾಮಿ ಅಖಾಡದಲ್ಲಿದ್ದಾರೆ.

ಪ್ರತಿಷ್ಠೆಯ ಕಣ: ಈ ಮೂರು ಅಭ್ಯರ್ಥಿಗಳು ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಅಲೆದಾಡಿದ್ದಾರೆ. ಇಷ್ಟು ದಿನ ಅವರೊಟ್ಟಿಗೆ ಪ್ರಚಾರ ನಡೆಸಿದ ಮುಖಂಡರು ತೆರೆಯ ಹಿಂದಿನ ಆಟಕ್ಕೆ ಅಣಿಯಾಗುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣೆಯ ಹಿನ್ನೆಲೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಇಬ್ಬರೂ ಸಹ ಅಭ್ಯರ್ಥಿಗಳ ಪರ ಪ್ರಚಾರಕ್ಕೆಂದು ಸಂಚರಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಗೆಲ್ಲುವ ಕುದುರೆಯಾಗಿ ಬೆಟ್ಟಿಂಗ್‌ ಪ್ರಾರಂಭವಾಗಿದ್ದು, ಜೆಡಿಎಸ್‌ ಮತ್ತು ಕಾಂಗ್ರೆಸ್‌ ಗೆಲುವು ಅನೇಕರ ಆದಾಯಮೂಲವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ;- ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಅಭ್ಯರ್ಥಿಗಳಿಗೆ ಮಾತ್ರವಲ್ಲ ಪಕ್ಷಗಳಿಗೂ ಪ್ರತಿಷ್ಠೆಯಾಗಿರುವ ಈ ಚುನಾವಣೆಯಲ್ಲಿ ವಿಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುವುದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ ಗೆಲುವು ಸಾಧಿಸಿದರೆ ಅದು ಅಭ್ಯರ್ಥಿ ಮೂರನೇ ಗೆಲುವಾಗಲಿದೆ. ಈ ಚುನಾವಣೆಯಲ್ಲಿ ಎಂಎಲ್‌ಸಿ ಕುರ್ಚಿ ಯಾರಿಗೆ ಲಭಿಸಲಿದೆ ಎನ್ನುವ ಚರ್ಚೆ ಶುರುವಾಗಿದೆ.

ಕಮಲ ಅರಳುವ ನಿರೀಕ್ಷೆ: ಇಂದು ಮತದಾನ ನಡೆಯಲಿದ್ದು, ಚುನಾವಣಾ ಹಂತದ ಕ್ಲೈಮಾಕ್ಸ್‌ ತಲುಪಿದೆ. ಮತದಾನಕ್ಕೆ ಕೌಂಟ್‌ ಡೌನ್‌ ಶುರುವಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಒಳಗೊಂಡಂತೆ ಎಂಟು ಶಾಸಕರನ್ನು ಹೊಂದಿದ್ದು, ಅದರಲ್ಲಿ ಜೆಡಿಎಸ್‌ ಐದು ಶಾಸಕರನ್ನು ಮತ್ತು ಕಾಂಗ್ರೆಸ್‌ ಮೂರು ಶಾಸಕರನ್ನು ಹೊಂದಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಗೆ ನೇರ ಹಣಾಹಣಿಯಿದ್ದು, ಜಿಲ್ಲೆಯಲ್ಲಿ ಶಾಸಕರ ಬಲವಿಲ್ಲದ ಬಿಜೆಪಿ ಕಮಲ ಅರಳುವ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.