ಅಭಿವೃದ್ಧಿ, ಜನಸಾಮಾನ್ಯರ ಕಲ್ಯಾಣಕ್ಕೆ ಶ್ರಮಿಸಿರುವೆ: ಸಚಿವ ಗೋಪಾಲಯ್ಯ
Team Udayavani, May 2, 2023, 8:53 AM IST
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್‌ನ ಬಿಜೆಪಿ ಅಭ್ಯರ್ಥಿ ಸಚಿವ ಕೆ. ಗೋಪಾಲಯ್ಯ ಮನೆ ಮನೆ ತೆರಳಿ, ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಸಂವಾದ, ರೋಡ್ ಶೋ ನಡೆಸಿದರು. ಸೋಮವಾರ ಕ್ಷೇತ್ರದ ಜೆ.ಸಿ ನಗರದ ಕುರುಬರಹಳ್ಳಿಯ 1ನೇ ಮುಖ್ಯ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಹಗಲಿರುಳು ಶ್ರಮಿಸಿದ್ದೇನೆ. ವಿಧಾನಸೌಧದ ಒಳಗೆ ಮತ್ತು ಹೊರಗೆ ಕ್ಷೇತ್ರದ ವಿಚಾರವಾಗಿ ಸಚಿವನಾಗಿ ಮಾತನಾಡಿದ್ದೇನೆ. ಈ ಬಾರಿಯೂ ಬಹುಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ರೈಲ್ವೆ ನಾರಾಯಣ, ಶಿವಾನಂದಮೂರ್ತಿ, ಗೋವಿಂದ, ಯತಿರಾಜ್ ನಾಯ್ಡು, ಶಿಲ್ಪ ನಾಗರಾಜ್, ರಾಘವೇಂದ್ರ ನಾಗರಾಜ್ ಇತರರಿದ್ದರು. ಹಾಗೆಯೇ ಕ್ಷೇತ್ರದ ಫೀನಾಕ್ಷಿ ಅಪಾರ್ಟ್ಮೆಂಟ್ ನಿವಾಸಿಗಳೊಂದಿಗೆ ಸಭೆ ನಡೆಸಿದ ಗೋಪಾಲಯ್ಯ, ಅಲ್ಲಿನ ಜನರ ಬೇಡಿಕೆಗಳನ್ನು ಆಲಿಸಿ, ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆ ನೀಡಿದರು.
ಇಂದು ಅಣ್ಣಾಮಲೈ ರೋಡ್ ಶೋ: ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಮಂಗಳವಾರ ಸಂಜೆ 5 ಗಂಟೆಗೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. 60 ಅಡಿ ರಸ್ತೆ, ಜೆ ಸಿ ನಗರ, ಕುರುಬರಹಳ್ಳಿ ಯಿಂದ ರೋಡ್ ಶೋ ಪ್ರಾರಂಭವಾಗಿ ಸತ್ಯನಾರಾಯಣ ಕಲ್ಯಾಣ ಮಂಟಪ ಹತ್ತಿರ ಭಾಷಣದೊಂದಿಗೆ ಕೊನೆಗೊಳ್ಳಲಿದೆ. ರೋಡ್ ಶೋದಲ್ಲಿ ಕೆ.ಗೋಪಾಲಯ್ಯ, ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ನರೇಂದ್ರಬಾಬು, ಬಿಬಿಎಂಪಿ ಮಾಜಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ ಮುಂತಾದವರು ಭಾಗವಹಿಸಲಿದ್ದಾರೆ.
ಅಮೃತ ಕರ್ನಾಟಕಕ್ಕೆ ಭದ್ರ ಬುನಾದಿ: ಅನ್ನ, ಅಭಯ, ಅಕ್ಷರ, ಆರೋಗ್ಯ, ಅಭಿವೃದ್ಧಿ, ಆದಾಯ ಎಂಬ ಅಂಶಗಳ ಜತೆಗೆ 103 ಭರವಸೆಗಳ ಮೂಲಕ ನಾಡಿನ ಜನರಿಗೆ ಗುಣಮಟ್ಟದ ಬದುಕು ನೀಡಲಿರುವ ರಾಜ್ಯ ಬಿಜೆಪಿಯ ಪ್ರಣಾಳಿಕೆ ಬಿಡುಗಡೆಯಾಗಿದೆ. ಇದು ಅಮೃತ ಕರ್ನಾಟಕದ ನಿರ್ಮಾಣಕ್ಕೆ ಭದ್ರ ಬುನಾದಿಯಾಗಲಿದೆ ಎಂದು ಗೋಪಾಲಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.