ಪರಿಷತ್ ಚುನಾವಣೆ: ಬಿಜೆಪಿ ಕಾಂಗ್ರೆಸ್ನಲ್ಲಿ ಪೈಪೋಟಿ
Team Udayavani, May 29, 2018, 6:35 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ನಿಂದ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ದೊಡ್ಡದಾಗುತ್ತಿದೆ.
ರಾಜ್ಯ ವಿಧಾನಸಭೆಯ ಸಂಖ್ಯಾಬಲದ ಮೇಲೆ ಬಿಜೆಪಿ ಐದು, ಕಾಂಗ್ರೆಸ್ ನಾಲ್ಕು ಗೆಲ್ಲುವ ಸಾಧ್ಯತೆಯಿದ್ದು, ಹಾಲಿ ನಿವೃತ್ತಿ ಹೊಂದುತ್ತಿರುವವರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದವರು, ಪಕ್ಷ ಸಂಘಟನೆಯಲ್ಲಿ ತೊಡಗಿದ್ದವರು ಎರಡೂ ಪಕ್ಷಗಳಲ್ಲಿ ಲಾಬಿಯಲ್ಲಿ ತೊಡಗಿದ್ದಾರೆ.ಬಿಜೆಪಿಯಲ್ಲಿ ಡಿ.ಎಸ್.ವೀರಯ್ಯ, ಸೋಮಣ್ಣ ಬೇವಿನ ಮರದ, ಭಾನುಪ್ರಕಾಶ್, ಬಿ.ಜೆ.ಪುಟ್ಟಸ್ವಾಮಿ, ರಘುನಾಥ್ರಾವ್ ಮಲ್ಕಾಪುರೆ ನಿವೃತ್ತಿಯಾಗುತ್ತಿದ್ದು ಐವರೂ ಪುನರಾಯ್ಕೆ ಬಯಸಿದ್ದಾರೆ.
ಆದರೆ, ಇವರನ್ನು ಹೊರತುಪಡಿಸಿ ಕೆ.ಪಿ.ನಂಜುಂಡಿ, ರುದ್ರೇಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ತೇಜಸ್ವಿನಿ ರಮೇಶ್, ಅಶ್ವಥ್ನಾರಾಯಣ ಸಹ ಆಕಾಂಕ್ಷಿಗಳಾಗಿದ್ದಾರೆ.
ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ ಅವರು ಈ ಬಗ್ಗೆ ಮಾತುಕತೆ ನಡೆಸಿ ಒಮ್ಮತದ ಪಟ್ಟಿ ಸಿದ್ಧಪಡಿಸಿ ಕೇಂದ್ರದ ನಾಯಕರಿಗೆ ಸಲ್ಲಿಸಿದ್ದಾರೆ. ಅಲ್ಲಿಂದ ಒಪ್ಪಿಗೆ ಸಿಗುವುದಷ್ಟೇ ಬಾಕಿ ಎಂದು ಹೇಳಲಾಗಿದೆ.
ಕಾಂಗ್ರೆಸ್ನಲ್ಲೂ ಡಿಮ್ಯಾಂಡ್
ಇನ್ನು ಕಾಂಗ್ರೆಸ್ನಲ್ಲಿ ನಾಲ್ಕು ಸ್ಥಾನ ಗೆಲ್ಲಬಹುದಾಗಿದ್ದು, ನಿವೃತ್ತಿಯಾಗಲಿರುವ ಕೆ.ಗೋವಿಂದರಾಜು, ಸಿ.ಎಂ.ಇಬ್ರಾಹಿಂ, ಮೋಟಮ್ಮ ಪುನರಾಯ್ಕೆ ಬಯಸಿದ್ದಾರೆ. ಇವರ ಜತೆಗೆ ಮಾಜಿ ಮೇಯರ್ ರಾಮಚಂದ್ರಪ್ಪ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಚಿವೆ ರಾಣಿ ಸತೀಶ್, ಮಾಜಿ ಸಚಿವ ನಸೀರ್ ಅಹಮದ್ ಆಕಾಂಕ್ಷಿಗಳಾಗಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಜತೆ ಚರ್ಚೆಗೆ ತೆರಳಿರುವ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಪರಿಷತ್ ಚುನಾವಣೆ ಬಗ್ಗೆಯೂ ಮಾತುಕತೆ ನಡೆಸಿ ಅಭ್ಯರ್ಥಿಗಳ ಪಟ್ಟಿಗೆ ಒಪ್ಪಿಗೆ ಪಡೆದು ಬರಲಿದ್ದಾರೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಒಲವು
ಕಳೆದ ಹತ್ತು ವರ್ಷಗಳಿಂದ ಮಾಜಿ ಮೇಯರ್ ರಾಮಚಂದ್ರಪ್ಪ ಹೆಸರು ಪ್ರತಿ ಬಾರಿ ವಿಧಾನಪರಿಷತ್ ನಾಮಕರಣ ಸಂದರ್ಭದಲ್ಲಿ ಕೇಳಿ ಬರುತ್ತಿದೆಯಾದರೂ ಕೊನೇ ಕ್ಷಣದಲ್ಲಿ ಕೈ ತಪ್ಪುತ್ತಿದೆ. ಅವಕಾಶ ತಪ್ಪಿದಾಗ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ತೋರದೆ ತಮ್ಮಷ್ಟಕ್ಕೆ ತಾವು ಪಕ್ಷ ಸಂಘಟನೆಯಲ್ಲಿ ತೊಡಗುವ ರಾಮಚಂದ್ರಪ್ಪ ಅವರಿಗೆ ಈ ಬಾರಿಯಾದರೂ ಅವಕಾಶ ಮಾಡಿಕೊಡಬೇಕು ಎಂದು ಪಕ್ಷದ ನಾಯಕರಲ್ಲೂ ಕೇಳಿಬರುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ರಾಮಚಂದ್ರಪ್ಪ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.