ಚುನಾವಣೆಗೆ ಇವಿಎಂ ಬದಲು ಮತಪತ್ರವಿರಲಿ
Team Udayavani, Dec 15, 2017, 7:55 AM IST
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರಗಳನ್ನೇ ಬಳಕೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಇವಿಎಂ ಮತಯಂತ್ರಗಳ ಬಗ್ಗೆ ದೇಶಾದ್ಯಂತ ಸಂಶಯ ವ್ಯಕ್ತವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮತಪತ್ರಗಳನ್ನೇ ಬಳಕೆ ಮಾಡಬೇಕೆಂದು ಆಗ್ರಹಿಸಿದರು. ಈ ಸಂಬಂಧ ಸದ್ಯದಲ್ಲಿಯೇ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರದೇಶ ಕಾಂಗ್ರೆಸ್ ವತಿಯಿಂದ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ಸಿನಲ್ಲಿ ಭಿನ್ನಮತವಿಲ್ಲ: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಮುಖ್ಯಮಂತ್ರಿಯವರ ಯಾತ್ರೆ ಹಾಗೂ ನಮ್ಮ ಯಾತ್ರೆಯಿಂದ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಪ್ರತ್ಯೇಕ ಯಾತ್ರೆ ಸರಿಯಲ್ಲ ಎಂಬ ಹಿರಿಯ ನಾಯಕ ಜಾಫರ್ ಷರೀಪ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಹಿರಿಯ ಮುಖಂಡರ ಸಲಹೆ ಪಡೆಯುತ್ತೇವೆ. ಏನೇ ಮಾಡಿದರೂ ಒಟ್ಟಾಗಿಯೇ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲ ಜಿಲ್ಲೆಗಳಿಗೆ ವೀಕ್ಷಕರನ್ನು ಕಳುಹಿಸುತ್ತೇವೆ. ಅದರ ವರದಿ ನಮ್ಮ ಕೈ ಸೇರಿದ ಬಳಿಕ ಪಟ್ಟಿ
ಸಿದ್ಧವಾಗುತ್ತದೆ. ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.