ಸಿದ್ದು ಅನುಪಸ್ಥಿತಿಯಲ್ಲಿ ಚುನಾವಣೆ ಸಿದ್ದತೆ ಸಭೆ: ಆಪ್ತರ ಅಸಮಾಧಾನ?

Team Udayavani, Aug 11, 2018, 6:15 AM IST

siddu-11.jpg

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಭರದಿಂದ ಸಿದ್ದತೆ ನಡೆಸುತ್ತಿದ್ದು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಪಕ್ಷದ ಹಿರಿಯ ನಾಯಕರು ಬೆಂಗಳೂರಿನಲ್ಲಿ ಗುರುವಾರ ತಡರಾತ್ರಿ ಸಭೆ ನಡೆಸಿರುವುದು ಅವರ ಆಪ್ತವಲಯದ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ, ಇದು ಪಕ್ಷದೊಳಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್‌, ಸ್ಥಳೀಯ ಸಂಸ್ಥೆಯಲ್ಲಿ ದೋಸ್ತಿ ಪಕ್ಷ ಜೆಡಿಎಸ್‌ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆ ಮಾಡಲು ತೀರ್ಮಾನ ಮಾಡಿರುವುದರಿಂದ ಬಿಜೆಪಿ ಹಾಗೂ ಜೆಡಿಎಸ್‌ಗಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪಕ್ಷದ ನಾಯಕರು ಯೋಜನೆ ರೂಪಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಪರಮೇಶ್ವರ್‌,  ಸಚಿವರಾದ ಡಿ.ಕೆ. ಶಿವಕುಮಾರ್‌,  ಆರ್‌.ವಿ.ದೇಶಪಾಂಡೆ ಹಾಗೂ ನಗರದ ಕೆಲವು ಶಾಸಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್‌, ಹಿರಿಯ ಶಾಸಕರಾದ ರಾಮಲಿಂಗಾ ರೆಡ್ಡಿ, ಎಂ.ಬಿ. ಪಾಟೀಲ್‌ ಅವರಿಗೂ ಸಭೆಗೆ ಅಹ್ವಾನ ನೀಡಲಾಗಿತ್ತು. ಆದರೆ,  ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸಭೆ ನಡೆಸಿರುವುದರಿಂದ ಅವರು ಸಭೆಯಿಂದ ದೂರ ಉಳಿದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.

ಸಿದ್ದರಾಮಯ್ಯನವರು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತಂತೆ ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯಲು ಸ್ವ ಕ್ಷೇತ್ರ ಬಾದಾಮಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಉಳಿದ ನಾಯಕರು ಸಭೆ ನಡೆಸಿರುವುದು ಸಿದ್ದರಾಮಯ್ಯ ಆಪ್ತರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಅಲ್ಲದೆ, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಪನ್ಮೂಲ ಕ್ರೋಢೀಕರಣದ ಕುರಿತಂತೆಯೂ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದೆ. ನಗರದ ಕೆಲವು ಶಾಸಕರು ಮೊದಲು ಸಂಪುಟ ವಿಸ್ತರಣೆ ಮಾಡುವಂತೆ ಪಕ್ಷದ ನಾಯಕರಿಗೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.