2 ಸ್ಟ್ರೋಕ್‌ ಆಟೋಗೆ ಎಲೆಕ್ಟ್ರಿಕ್‌ ಬ್ಯಾಟರಿ, 30 ಸಾವಿರ ಸಬ್ಸಿಡಿ

Team Udayavani, Jan 31, 2018, 11:19 AM IST

2stroke.jpg

ಬೆಂಗಳೂರು: 2 ಸ್ಟ್ರೋಕ್‌ ಆಟೋಗಳನ್ನು ಇನ್ಮುಂದೆ ಗುಜರಿಗೆ ಹಾಕಬೇಕಿಲ್ಲ. ಎಲೆಕ್ಟ್ರಿಕ್‌ ಬ್ಯಾಟರಿಗಳನ್ನು ಅಳವಡಿಸಿಕೊಂಡರೆ ಸಾಕು. ಇದಕ್ಕೆ ಸರ್ಕಾರದ ಸಬ್ಸಿಡಿ ಕೂಡ ಸಿಗಲಿದೆ. 2 ಸ್ಟ್ರೋಕ್‌ ಆಟೋಗಳನ್ನು ಗುಜರಿಗೆ ಹಾಕುವ ಪ್ರಕ್ರಿಯೆಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಡಲಾಗಿದೆ.

ಇದಕ್ಕೆ ಅನುಮತಿ ದೊರಕಿದರೆ, ಇದರಡಿ 2 ಸ್ಟ್ರೋಕ್‌ ಆಟೋಗಳನ್ನು ಗುಜರಿಗೆ ಹಾಕಲು ಇಷ್ಟವಿಲ್ಲದವರು, ಎಲೆಕ್ಟ್ರಿಕ್‌ ಬ್ಯಾಟರಿ ಅಳವಡಿಸಿಕೊಳ್ಳಬಹುದು. ಇದಕ್ಕೂ 30 ಸಾವಿರ ರೂ. ಸಬ್ಸಿಡಿ ಒದಗಿಸಲಾಗುವುದು ಎಂದು ಸಾರಿಗೆ ಆಯುಕ್ತ ಬಿ. ದಯಾನಂದ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಈ ಸಂಬಂಧ ವಾಹನ ನೀತಿಗೆ ತಿದ್ದುಪಡಿ ತಂದು, ಎಲೆಕ್ಟ್ರಿಕ್‌ ಬ್ಯಾಟರಿ ಅಳವಡಿಸಿಕೊಳ್ಳುವ ಆಟೋಗಳಿಗೂ 30 ಸಾವಿರ ರೂ. ಸಹಾಯಧನಕ್ಕೆ ಅವಕಾಶ ಕಲ್ಪಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಬ್ಯಾಟರಿ ಅಳವಡಿಕೆಗೆ ಸುಮಾರು 1.2 ಲಕ್ಷ ರೂ.ವರೆಗೂ ಖರ್ಚಾಗುತ್ತದೆ. ನಗರದಲ್ಲಿ ಈಗಾಗಲೇ ಎರಡು ಎಲೆಕ್ಟ್ರಿಕ್‌ ರೆಟ್ರೋ ಫಿಟಿಂಗ್‌ ಕೇಂದ್ರಗಳು ಇವೆ. ಅಲ್ಲಿ ಈ ಪರಿವರ್ತನೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

4 ಆರ್‌ಟಿಒಗಳಲ್ಲಿ ವಾಹನ್‌-4: ಇದಲ್ಲದೆ, ರಾಮನಗರದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ “ವಾಹನ್‌-4′ ವ್ಯವಸ್ಥೆಗೆ ಸ್ಪಂದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಬರುವ ತಿಂಗಳು ಬೆಂಗಳೂರಿನ ನಾಲ್ಕು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಇದೇ ವೇಳೆ ಬಿ. ದಯಾನಂದ ಮಾಹಿತಿ ನೀಡಿದರು. 

ಸೇವೆಯಲ್ಲಿ ವ್ಯತ್ಯಯ:ಚಂದಾಪುರ, ಎಲೆಕ್ಟ್ರಾನಿಕ್‌ ಸಿಟಿ, ಯಲಹಂಕ ಮತ್ತು ಕಸ್ತೂರಿನಗರದಲ್ಲಿರುವ ಬೆಂಗಳೂರು ಪೂರ್ವ ಆರ್‌ಟಿಒ ಕಚೇರಿಗಳಲ್ಲಿ ವಾಹನ್‌-4 ಪರಿಚಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫೆ. 2ರಿಂದ 24ರವರೆಗೆ ವಿವಿಧ ದಿನಗಳಲ್ಲಿ ಉದ್ದೇಶಿತ ಈ ಆರ್‌ಟಿಒಗಳಲ್ಲಿ ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ಹಲವು ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದರು. 

ಚಂದಾಪುರದಲ್ಲಿ ಫೆ. 2ರಿಂದ 6ರವರೆಗೆ, ಎಲೆಕ್ಟ್ರಾನಿಕ್‌ ಸಿಟಿಯಲ್ಲಿ 3ರಿಂದ 11, ಯಲಹಂಕದಲ್ಲಿ 16ರಿಂದ 21 ಮತ್ತು ಕಸ್ತೂರಿನಗರದಲ್ಲಿ ಫೆ. 19ರಿಂದ 25ರವರೆಗೆ ಹಣ ಪಾವತಿ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ. ವಾಹನ ಅರ್ಹತಾ ಪ್ರಮಾಣಪತ್ರ, ಪರವಾನಗಿ ದ್ವಿಪ್ರತಿ ಸೇರಿದಂತೆ ಮತ್ತಿತರ ಸೇವೆಗಳು ಲಭ್ಯ ಇರಲಿವೆ. ಸಾರ್ವಜನಿಕರು ಹತ್ತಿರದ ಆರ್‌ಟಿಒಗಳಲ್ಲಿ ಈ ಸೇವೆಗಳನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.

15.93 ಲಕ್ಷ ವಾಹನಗಳ ನೋಂದಣಿ: ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ 15,93,974 ವಾಹನಗಳು ನೋಂದಣಿಯಾಗಿದ್ದು, ಈ ಪೈಕಿ 11,40,174 ದ್ವಿಚಕ್ರ ವಾಹನಗಳೇ ಆಗಿದೆ. 2017ರ ಜ. 1ರಿಂದ ಡಿಸೆಂಬರ್‌ ಅಂತ್ಯದವರೆಗೆ 15.93 ಲಕ್ಷ ವಾಹನಗಳು ನೋಂದಣಿಯಾಗಿದ್ದು, 7.77 ಲಕ್ಷ ವಾಹನ ಚಾಲನಾ ಪರವಾನಗಿ ವಿತರಿಸಲಾಗಿದೆ. ಇದರಲ್ಲಿ 4,64,218 ಲಕ್ಷ ದ್ವಿಚಕ್ರ ವಾಹನಗಳ ಚಾಲನಾ ಪರವಾನಗಿ ವಿತರಿಸಲಾಗಿದೆ ಎಂದು ಬಿ. ದಯಾನಂದ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.