ಎಲೆಕ್ಟ್ರಿಕ್‌ ಬಸ್‌ ಸಬ್ಸಿಡಿ ವಾಪಸ್‌?


Team Udayavani, Jan 5, 2019, 6:40 AM IST

electric-bus.jpg

ಬೆಂಗಳೂರು: ಸಬ್ಸಿಡಿ ಹಣ ಪಾವತಿಸಿ ನಾಲ್ಕು ತಿಂಗಳಾದರೂ, ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ ಪ್ರಕ್ರಿಯೆಯಲ್ಲಿ ತಟಸ್ಥವಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಹಣ ವಾಪಸ್‌ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

“ಫೇಮ್‌ ಇಂಡಿಯಾ’ ಯೋಜನೆ ಅಡಿ 2018ರ ಮಾರ್ಚ್‌ನಲ್ಲೇ ಬಿಎಂಟಿಸಿಗೆ 80 ಎಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿದ್ದ ಕೇಂದ್ರದ ಭಾರೀ ಕೈಗಾರಿಕೆಗಳ ಸಚಿವಾಲಯ, ಸೆಪ್ಟೆಂಬರ್‌ನಲ್ಲಿ ಬಸ್‌ಗಳ ಖರೀದಿ/ಗುತ್ತಿಗೆ ಪಡೆಯಲು ಸಬ್ಸಿಡಿ ರೂಪದಲ್ಲಿ ಮೊದಲ ಕಂತಾಗಿ 18 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಆದರೆ, ಈವರೆಗೆ ಆ ಹಣ ಖರ್ಚಾಗಿಲ್ಲ.

ಈಗ ನಿಗಮವು ಏಕಾಏಕಿ ಉದ್ದೇಶಿತ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವ ಅಗತ್ಯವಿದೆ ಎಂದು ಹೇಳುತ್ತಿದೆ. ಹಾಗಿದ್ದರೆ, ಈಗಾಗಲೇ ಪಾವತಿಸಿರುವ ಹಣ ಹಿಂಪಾವತಿ ಮಾಡಬೇಕಾಗುತ್ತದೆ ಎಂದು ಕೇಂದ್ರ ಹೇಳಿದೆ. ನಗರದಲ್ಲಿ ಇನ್ನೂ ಎಲೆಕ್ಟ್ರಿಕ್‌ ಬಸ್‌ಗಳು ರಸ್ತೆಗೆ ಇಳಿಯದ ಕುರಿತು ದೆಹಲಿಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು, ಬಸ್‌ಗಳ ಖರೀದಿಗೆ ಚಿಂತನೆ ನಡೆದಿದ್ದು, ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದರು.

ಈ ಪ್ರಕ್ರಿಯೆಗೆ ಸಾಕಷ್ಟು ಸಮಯ ಹಿಡಿಯಲಿದೆ. ಪುನಃ ಮೊದಲ ಹಂತದಿಂದ ಈ ಪ್ರಕ್ರಿಯೆ ಶುರುವಾಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ “ಯೋಜನೆಗಾಗಿ ಸಬ್ಸಿಡಿ ಹಣ ವಿನಿಯೋಗಿಸಿ, ಇಲ್ಲವಾದರೆ ಹಿಂಪಾವತಿ ಮಾಡಬೇಕಾಗುತ್ತದೆ’ ಎಂದು ರಾಜ್ಯ ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ವಾಣಿಜ್ಯ ಮತ್ತು ಕೈಗಾರಿಕೆಗಳ ನಿರ್ದೇಶಕರ ಮೂಲಕ ಬಿಎಂಟಿಸಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.  

ಇನ್ನೂ ನಿರ್ಧಾರವಾಗಿಲ್ಲ: ಈಗಾಗಲೇ ಹೈದರಾಬಾದ್‌, ಅಹಮದಾಬಾದ್‌, ಮುಂಬೈ ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ ಅಥವಾ ಗುತ್ತಿಗೆಯಲ್ಲಿ ಸಾಕಷ್ಟು ಮುಂದೆಹೋಗಿವೆ. ಕೇರಳ ಸೇರಿ ಕೆಲವೆಡೆ ಈಗಾಗಲೇ ಬೆರಳೆಣಿಕೆಯಷ್ಟು ಬಸ್‌ಗಳು ರಸ್ತೆಗೂ ಇಳಿದಿವೆ. ಆದರೆ, ಬೆಂಗಳೂರಿನಲ್ಲಿ ಯಾವ ಮಾದರಿಯಲ್ಲಿ (ಖರೀದಿ ಅಥವಾ ಗುತ್ತಿಗೆ) ಬಸ್‌ಗಳನ್ನು ಪಡೆಯಬೇಕು ಎಂಬುದೇ ಇನ್ನೂ ನಿರ್ಧಾರ ಆಗಿಲ್ಲ. ಈ ಎಲ್ಲ ಪ್ರಕ್ರಿಯೆಯಿಂದ ಎಲೆಕ್ಟ್ರಿಕ್‌ ಬಸ್‌ಗಳ ಯೋಜನೆಗೆ ಹಿನ್ನಡೆಯಾದಂತಾಗಿದೆ.

ವಿಚಿತ್ರವೆಂದರೆ ಇಡೀ ದೇಶದಲ್ಲಿ ಎಲೆಕ್ಟ್ರಿಕ್‌ ಬಸ್‌ ಆರಂಭಿಸುವ ಪ್ರಕ್ರಿಯೆಗೆ ಮುನ್ನುಡಿ ಬರೆದಿದ್ದ ಬಿಎಂಟಿಸಿಯೇ ಈಗ ಎಲ್ಲರಿಗಿಂತ ಹಿಂದೆ ಉಳಿದಿದೆ. 60 ಎಸಿ (12 ಮೀ. ಉದ್ದ) ಹಾಗೂ 20 ನಾನ್‌ಎಸಿ (9 ಮೀ. ಉದ್ದ) ಸೇರಿದಂತೆ ಬಿಎಂಟಿಸಿ 80 ಬಸ್‌ಗಳಿಗೆ ಟೆಂಡರ್‌ ಕರೆದಿತ್ತು. ಅತ್ಯಂತ ಕಡಿಮೆ ದರದಲ್ಲಿ ಬಸ್‌ಗಳ ಪೂರೈಕೆಗೆ ಮುಂದೆಬಂದ ಗೋಲ್ಡ್‌ಸ್ಟೋನ್‌ ಕಂಪನಿಗೆ ಕಾರ್ಯಾದೇಶ ನೀಡಲು ಉದ್ದೇಶಿಸಲಾಗಿತ್ತು. ಅಷ್ಟೇ ಅಲ್ಲ, ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ಇದೇ ಮಾದರಿಯಲ್ಲಿ ಮತ್ತೆ 500 ಬಸ್‌ಗಳ ಟೆಂಡರ್‌ಗೆ ಸಿದ್ಧತೆ ಕೂಡ ನಡೆಸಿತ್ತು. 

ಮನವರಿಕೆ ಮಾಡಿಕೊಟ್ಟಿದ್ದ ಬಿಎಂಟಿಸಿ: ಎಲೆಕ್ಟ್ರಿಕ್‌ ಬಸ್‌ಗಳನ್ನು ಈ ಹಿಂದೆ ಗುತ್ತಿಗೆ ಪದ್ಧತಿಯಲ್ಲಿ ಪಡೆದು, ಕಾರ್ಯಾಚರಣೆ ಮಾಡುವುದಾಗಿ ಬಿಎಂಟಿಸಿ ಹೇಳಿತ್ತು. ಇದಕ್ಕೆ ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ಆಕ್ಷೇಪಿಸಿದಾಗ, ಈ ವಿನೂತನ ಮಾದರಿಯಿಂದ ಆಗುವ ಲಾಭಗಳ ಬಗ್ಗೆ ಬಿಎಂಟಿಸಿ ಮನದಟ್ಟು ಮಾಡಿಕೊಟ್ಟಿತ್ತು. ಬಸ್‌ ಖರೀದಿಯು ನಗರ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಿ ಪರಿಣಮಿಸಲಿದೆ.

ಈಗಾಗಲೇ ಸಂಸ್ಥೆಯು ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಿರುವಾಗ ನೂರಾರು ಕೋಟಿ ರೂ. ಹೂಡಿಕೆ ಮಾಡುವುದು ಕಷ್ಟಸಾಧ್ಯ. ಹಾಗೊಂದು ವೇಳೆ, ಇಷ್ಟೊಂದು ಹಣ ಹೂಡಿಕೆ ಮಾಡಿ ಖರೀದಿಸಿದರೂ, ಮುಂದಿನ ದಿನಗಳಲ್ಲಿ ಈ ಮಾದರಿ ಬಸ್‌ಗಳು ಅಪ್ರಸ್ತುತವಾಗಬಹುದು. ಗುತ್ತಿಗೆ ಆಧಾರದಲ್ಲಿ ಇಂತಹ ಯಾವುದೇ “ರಿಸ್ಕ್’ ಇರುವುದಿಲ್ಲ. ನಿರ್ವಹಣಾ ವೆಚ್ಚವೂ ಬರುವುದಿಲ್ಲ.

ಇದೆಲ್ಲಕ್ಕಿಂತ ಹೆಚ್ಚಾಗಿ ಸಾಮಾನ್ಯವಾಗಿ ಖರೀದಿ ಮಾಡುವ ಬಸ್‌ಗಳ ಆಯಸ್ಸು ಇರುವುದೇ 9ರಿಂದ 10 ವರ್ಷ. ನಂತರ ಅವು ಗುಜರಿಗೇ ಸೇರುತ್ತವೆ. ಈ ಎಲ್ಲ ಹಿನ್ನೆಲೆಯಲ್ಲಿ ಗುತ್ತಿಗೆ ಮಾದರಿ ಅನುಸರಿಸುವುದು ಸೂಕ್ತ ಎಂಬ ವಾದವನ್ನು ಕೇಂದ್ರದ ಮುಂದಿಟ್ಟಿತ್ತು. ಇದಕ್ಕೆ ಅನುಮತಿಯೂ ದೊರಕಿತ್ತು. ಆದರೆ, ಈಗ ಏಕಾಏಕಿ ತನ್ನ ನಿಲುವು ಬದಲಿಸಿದೆ.

ನಗರದಲ್ಲಿ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಪಾತ್ರ ದೊಡ್ಡದು. ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಮಾದರಿಯ ಬಸ್‌ಗಳಿಗೆ ಕೈಹಾಕಲಾಗಿತ್ತು. ಆದರೆ, ಖರೀದಿ ಮಾಡಬೇಕೋ ಅಥವಾ ಗುತ್ತಿಗೆ ಪಡೆಯಬೇಕೋ ಎಂಬ ಗೊಂದಲದ ನಡುವೆ ನಗರದ ಜನ ಇದರ ಪ್ರಯೋಜನದಿಂದ ವಂಚಿತರಾಗುತ್ತಿದ್ದಾರೆ ಎನ್ನುತ್ತಾರೆ ತಜ್ಞರು.

ಹಣ ಹಿಂಪಾವತಿಸುವ ಪ್ರಸಂಗ ಬರುವುದಿಲ್ಲ. ಸಬ್ಸಿಡಿ ಹಣ ಬಳಸಲು ಮಾ.31ರವರೆಗೆ ಅವಕಾಶ ಇದೆ. ಅಷ್ಟರೊಳಗೆ ಎಲೆಕ್ಟ್ರಿಕ್‌ ಬಸ್‌ಗಳನ್ನು ಯಾವ ಮಾದರಿಯಲ್ಲಿ ಪಡೆಯಬೇಕು ಎಂಬುದನ್ನು ನಿರ್ಧರಿಸಲಾಗುವುದು. ಈಚೆಗೆ ನಡೆದ ನಿಗಮದ ಮಂಡಳಿ ಸಭೆಯಲ್ಲೂ ಈ ವಿಷಯ ಪ್ರಸ್ತಾಪವಾಗಿದೆ. ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
-ಡಾ.ಎನ್‌.ವಿ. ಪ್ರಸಾದ್‌, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.