ಹುಬ್ಬಳ್ಳಿ-ಧಾರವಾಡ ನಡುವೆ ಎಲಿವೇಟೆಡ್ ರಸ್ತೆಗೆ ಒಪ್ಪಿಗೆ
Team Udayavani, Dec 27, 2018, 6:57 AM IST
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಿಸುವ ಕುರಿತು ಕೇಂದ್ರ ಭೂ ಸಾರಿಗೆ , ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಸಮ್ಮತಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿದ್ದ ವೇಳೆ, ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣದ ಅಗತ್ಯತೆ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವರಿಕೆ ಮಾಡಿ ಕೊಟ್ಟರು. ಯೋಜನೆಗೆ ಒಪ್ಪಿಗೆಯೂ ದೊರೆತಿದೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಅವಳಿ ನಗರಗಳ ನಡುವಿನ ಎಲಿವೇಟೆಡ್ ರಸ್ತೆ ನಿರ್ಮಾಣ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಳಿಸಿದ ಕೂಡಲೇ ಕೈಗೆತ್ತಿ ಕೊಳ್ಳಲಾಗುವುದು ಎಂದರು. ಕರ್ನಾಟಕ- ಗೋವಾ ರಾಜ್ಯ ಸಂಪರ್ಕಿಸುವ ರಾಷ್ಟ್ರೀಯ
ಹೆದ್ದಾರಿ ಎರಡು ಪಥಗಳಾಗಿದ್ದು ಇದರ ಅಗಲೀಕರಣಕ್ಕಾಗಿ ಮುಂದಿನ 18 ತಿಂಗಳ ಕಾಲ ರಸ್ತೆ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಸಬಹುದಾದ ಪರ್ಯಾಯ ಸಂಪರ್ಕ ಮಾರ್ಗಗಳ ಅಭಿವೃದ್ಧಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದಲೇ ಕೈಗೆತ್ತಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.
ಬೇಲೂರು- ಹಾಸನ ನಡುವೆ ರಾಷ್ಟ್ರೀಯ ಹೆದ್ದಾರಿ 373ರ ಅಭಿವೃದ್ಧಿ, ಹಾಸನ-ಹೊಳೇನರಸೀಪುರ ಚತುಷ್ಪಥ ರಸ್ತೆ, ಚನ್ನ
ರಾಯಪಟ್ಟಣ-ಹೊಳೇನರಸೀಪುರ -ಅರಕಲಗ ೂಡು-ಕೊಡ್ಲಿಪೇಟೆ-ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ
ಮೇಲ್ದರ್ಜೆಗೆ ಸೇರಿಸುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಲೋಕೋ ಪಯೋಗಿ ಸಚಿವ ಎಚ್.ಡಿ .ರೇವಣ್ಣ, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಉಪಸ್ಥಿತರಿದ್ದರು.
ಇಂದು ಮೋದಿ ಭೇಟಿ: ಕುಮಾರ ಸ್ವಾಮಿಯವರು ಗುರುವಾರ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಲಿದ್ದು, ರಾಜ್ಯದ ಯೋಜನೆಗಳು ಹಾಗೂ ಮೇಕೆದಾಟು, ಮಹದಾಯಿ ಕುರಿತು ಚರ್ಚಿಸಲಿದ್ದಾರೆ. ಕೇಂದ್ರ ಸಚಿವರಾದ ಸುರೇಶ್‌ಪ್ರಭು, ಅರುಣ್ ಜೇಟ್ಲಿ,
ಪಿಯೂಶ್ ಗೋಯೆಲ್, ಸಿದ್ಧಾರ್ಥ್ ನಾಥ್ ಸಿಂಗ್ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.