ಕೌಶಲ್ಯ ಅಭಿವೃದ್ಧಿಗಾಗಿ ಹೊಸ ಪರಿಕಲ್ಪನೆಗೆ ಒತ್ತು

ದೃಶ್ಯಕಲಾ ವಿದ್ಯಾರ್ಥಿಗಳಿಗೆ ವಿಶಿಷ್ಟ ಯೋಜನೆ | ಪ್ರತಿಭೆ ಹೆಚ್ಚಿಸಿಕೊಳ್ಳಲು ಅವಕಾಶ

Team Udayavani, Oct 21, 2021, 10:32 AM IST

ಲಲಿತಕಲಾ

Representative Image used

ಬೆಂಗಳೂರು: ದೃಶ್ಯಕಲಾ ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ವೃದ್ಧಿಸುವ ದೃಷ್ಟಿಯಿಂದ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಜತೆಗೂಡಿ “ಹೊಸ ಸಾಧನೆಗಳು ಹೊಸ ಪರಿಕಲ್ಪನೆಗಳು” ಯೋಜನೆ ಸೃಜಿಸಿದೆ.

ವಿದ್ಯಾರ್ಥಿಗಳು ಕೇವಲ ಚಿತ್ರ ಬಿಡಿಸುವುದರಲ್ಲಷ್ಟೇ ಅಲ್ಲದೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೃಶ್ಯಕಲೆ ಸಂಬಂಧ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಆಧುನಿಕ ತಂತ್ರಜ್ಞಾನವನ್ನು ಒಳಗೊಂಡ ಕೌಶಲ್ಯ ತರಬೇತಿ ಇದರಲ್ಲಿದ್ದು, ದೃಶ್ಯಕಲಾ ವಿದ್ಯಾರ್ಥಿಗಳು ಹೊಸತನಕ್ಕೆ ತೆರೆದುಕೊಳ್ಳಲು ಲಲಿತಕಲಾ ಮತ್ತು ಶಿಲ್ಪಕಲಾ ಅಕಾಡೆಮಿಗಳು ಕ್ರಿಯಾಯೋಜನೆ ರೂಪಿಸಿವೆ.

ಈ ಯೋಜನೆಯಲ್ಲಿ ಅಧ್ಯಾಪಕರಿಗೆ ಮೊದಲು ಕೌಶ್ಯದ ಬಗ್ಗೆ ಮಾಹಿತಿ ನೀಡುವುದು ಬಳಿಕ ಅವರು ತರಗತಿಗಳಲ್ಲಿ ಕಲಿಕೆ ಜತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ಪಠ್ಯಕ್ರಮವನ್ನು ಹೊಂದಿಸಲಾ ಗಿದೆ. ರಾಜ್ಯದ ವಿವಿಧ ಭಾಗದ ಸುಮಾರು 70 ದೃಶ್ಯಕಲಾ ಕಾಲೇಜು ಅಧ್ಯಾಪಕರು ಇದರಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ;- ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?

ಜತೆಗೆ ಮೈಸೂರು, ಬೆಂಗಳೂರು, ಕುವೆಂಪು, ಕಲಬರುಗಿ ವಿಶ್ವವಿದ್ಯಾನಿಲಯ ಹಾಗೂ ಹಂಪಿ ಸೇರಿದಂತೆ ಸುಮಾರು 80 ಅಧ್ಯಾಪಕರುಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ತಿಳಿಸಿದರು. ನಮ್ಮಲ್ಲಿರುವ ಬಹುತೇಕ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಕೊರತೆಯಿದೆ. ಜತೆಗೆ ಕೇವಲ ಚಿತ್ರಕಲೆ ಬಿಡಿಸುವುದಕ್ಕೆ ಅವರು ಸೀಮಿತವಾಗಿದ್ದಾರೆ.

ಸಿನಿಮಾ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ದೃಶ್ಯಕಲೆಗೆ ಅವಕಾಶಗಳಿವೆ. ಆದರೆ, ಆ ಅವಕಾಶಗಳನ್ನು ಗಿಟ್ಟಿಸಿ ಕೊಳ್ಳಲು ಕೌಶಲ್ಯ ತರಬೇತಿ ಜತೆಗೆ ಉದ್ಯೋಗ ವಕಾಶಗಳ ಬಗ್ಗೆ ಮಾಹಿತಿ ಕೂಡ ಬೇಕಾಗುತ್ತದೆ. ಅದನ್ನು ನೀಡುವ ನಿಟ್ಟಿನಲ್ಲಿ ಎರಡೂ ಅಕಾಡೆಮಿಗಳು ಈ ಯೋಜನೆ ರೂಪಿಸಿವೆ ಎಂದರು.

ಚಿತ್ರಕಲಾ ಕ್ಷೇತ್ರದ ಆಸಕ್ತಿ ಇದ್ದವರು ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅಂತಹ ಸಾಧಕ ರನ್ನು ಕೂಡ ಕಾರ್ಯಾಗಾರಕ್ಕೆ ಆಹ್ವಾನ ನೀಡುವ ಇರಾದೆಯಿದೆ ಎಂದು ಲಲಿತಕಲಾ ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಶೇಖರ್‌ ಮಾಹಿತಿ ನೀಡಿದ್ದಾರೆ.

“ಹೊಸ ಸಾಧನೆಗಳು ಹೊಸ ಪರಿಕಲ್ಪನೆ ಗಳು’ಯೋಜನೆಯಡಿ ಕಲಬುರಗಿಯಲ್ಲಿ ಅಧ್ಯಾ ಪಕರ ಕಾರ್ಯಾಗಾರ ಹಮ್ಮಿಕೊಳ್ಳಲು ಈಗಾಗಲೇ ಅಕಾಡೆಮಿಗಳು ತೀರ್ಮಾನಿಸಿವೆ. ಅ.23ರಂದು ಅಳಂದ ರಸ್ತೆಯ ಅಜೀಂ ಪ್ರೇಮ್‌ಜೀ ಫೌಂಡೇಷನ್‌ ನಲ್ಲಿ ಕಾರ್ಯಾಗಾರ ನಡೆಸಲು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಾಧಕ ಕಲಾವಿದರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಚಿತ್ರಕಲಾ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಜತೆಗೂಡಿ “ಹೊಸ ಸಾಧನೆಗಳು ಹೊಸ ಪರಿಕಲ್ಪನೆಗಳು’ ಯೋಜನೆ ರೂಪಿಸಲಾಗಿದೆ. ಚಿತ್ರಕಲೆಗೆ ಸಂಬಂಧ ಉದ್ಯೋಗ ಹಲವು ಕ್ಷೇತ್ರಗಳಲ್ಲಿವೆ. ಅವುಗಳ ಬಗ್ಗೆ ಯುವ ಸಮೂಹಕ್ಕೆ ಮಾಹಿತಿ ನೀಡಬೇಕಾಗಿದೆ. – ವೀರಣ್ಣ ಮಾ.ಅರ್ಕಸಾಲಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.