ಸ್ವಯಂ ಮೌಲ್ಯಮಾಪನ ಆಸ್ತಿಗಳ ಪರಿಶೀಲನೆಗೆ ಒತ್ತು

ತೆರಿಗೆ ಸಮರ್ಪಕ ಸಂಗ್ರಹಕ್ಕೆ ಗೌರವ್‌ ಗುಪ್ತಾ ನಿರ್ದೇಶನ

Team Udayavani, Oct 10, 2020, 12:28 PM IST

ಸ್ವಯಂ ಮೌಲ್ಯಮಾಪನ ಆಸ್ತಿಗಳ ಪರಿಶೀಲನೆಗೆ ಒತ್ತು

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರು “ಸ್ವಯಂ ಮೌಲ್ಯಮಾಪನ ಯೋಜನೆ’ ಅಡಿ ಘೋಷಣೆ (ಆಸ್ತಿ ಮಾಲೀಕರೇ ಅವರ ಆಸ್ತಿ ವಿವರ ಘೋಷಿಸಿಕೊಳ್ಳುವುದು) ಮಾಡಿಕೊಂಡಿರುವ ಆಸ್ತಿ ವಿವರದ ಬಗ್ಗೆ ಪರಿಶೀಲನೆ ನಡೆಸುವಂತೆ ಕಂದಾಯ ವಿಭಾಗದ ಅಧಿಕಾರಿಗಳಿಗೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಸೂಚನೆ ನೀಡಿದರು.

ಮಲ್ಲೇಶ್ವರದ ಐಪಿಪಿ ಕೇಂದ್ರದಲ್ಲಿ ಪಾಲಿಕೆ ಆಡಳಿತಾಧಿಕಾರಿ ಗೌರವ್‌ಗುಪ್ತಾ ಹಾಗೂ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಅವರ ನೇತೃತ್ವದಲ್ಲಿ ಶುಕ್ರವಾರ  ಪಾಲಿಕೆ ಕಂದಾಯ ವಿಭಾಗದ ಆಸ್ತಿ ತೆರಿಗೆ ಸಂಗ್ರಹ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಗೌರವ್‌ ಗುಪ್ತಾ, ನಗರದಲ್ಲಿ “ಸ್ವಯಂ ಮೌಲ್ಯಮಾಪನ ಯೋಜನೆ’ ಅಡಿ ಆಸ್ತಿ ಘೋಷಿಸಿಕೊಂಡಿರುವವರ ಬಗ್ಗೆ ಕೆಲವು ನಿರ್ದಿಷ್ಟ ಪ್ರಕರಣಗಳಲ್ಲಿ ಗೊಂದಲ ಹಾಗೂ ತಪ್ಪು ಮಾಹಿತಿ ಇದ್ದು, ಇದನ್ನು ಪರಿಶೀಲಿಸಿ ತಪ್ಪಿದ್ದಲ್ಲಿ ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಅಲ್ಲದೆ, ಪ್ರತಿ ವಲಯದಲ್ಲೂ “ಖಾತಾ  ಮೇಳ’ ಏರ್ಪಡಿಸಿ, ಆಸ್ತಿ ಮಾಲೀಕರಿಗೆ ನಿಗದಿಯ ಸಮಯದಲ್ಲಿ ಖಾತೆಗಳನ್ನು ನೀಡಬೇಕು. ಈ ಮೂಲಕ ಹೆಚ್ಚು ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು. ಆಸ್ತಿ ತೆರಿಗೆ ಸಂಗ್ರಹದ ಬಗ್ಗೆ ಪ್ರತಿ ವಾರ ಪರಿಶೀಲನಾ ಸಭೆ ನಡೆಸುವಂತೆ ನಿರ್ದೇಶಿಸಿದರು.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರ ಪಟ್ಟಿ ಸಿದ್ಧಪಡಿಸಿ ನೋಟಿಸ್‌ ಜಾರಿಗೊಳಿಸಬೇಕು. ನೋಟಿಸ್‌ ನೀಡಿಯೂ ತೆರಿಗೆ ಕಟ್ಟದಿದ್ದರೆ, ಆ ಆಸ್ತಿಗಳನ್ನು ಮುಟ್ಟುಗೋಲು ಅಥವಾ ಬೀಗಮುದ್ರೆ ಹಾಕಬೇಕು. ಇನ್ನೂ ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗದ ಆಸ್ತಿಗಳನ್ನು ಕೂಡಲೇ ತೆರಿಗೆ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು. ಆಸ್ತಿ ತೆರಿಗೆ ಸಂಗ್ರಹಿಸಲು ಸಮಗ್ರ ಯೋಜನೆ ರೂಪಿಸಿ, ಆಸ್ತಿಗಳನ್ನು ಪರಿಶೀಲಿಸಿ ತೆರಿಗೆ ಸಂಗ್ರಹಿಸಬೇಕು. ಜಿಐಎಸ್‌ ಮ್ಯಾಪಿಂಗ್‌, ಡ್ರೋನ್‌ ಸೇರಿದಂತೆ ಇತರೆ ತಂತ್ರಜ್ಞಾನ ಬಳಸಿಕೊಳ್ಳಲು ಸೂಚಿಸಿದರು.

ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಮಾತನಾಡಿ, ವಲಯವಾರು ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 100 ಸುಸ್ತಿದಾರರ ಪಟ್ಟಿ ಸಿದ್ಧಪಡಿಸಿ, ಅವರಿಗೆ ನೋಟಿಸ್‌ ಜಾರಿಗೊಳಿಸಬೇಕು. ಆಸ್ತಿ ತೆರಿಗೆ ಸಂಗ್ರಹ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು.ಹೊಸಆಸ್ತಿಗಳನ್ನುಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಹಾಗೂ ಖಾತಾ ನೀಡುವ ಸಂಬಂಧ ಕ್ರಮ ವಹಿಸಲು ನಿರ್ದೇಶನ ನೀಡಿದರು.

2,039 ಕೋಟಿರೂ.ಆಸ್ತಿಗೆ ತೆರಿಗೆ ಸಂಗ್ರಹ : ನಗರದಲ್ಲಿ ಒಟ್ಟು 19.80 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಯಲ್ಲಿವೆ. 2020-21 ಸಾಲಿನ ಆರ್ಥಿಕ ವರ್ಷದಲ್ಲಿ ಇಲ್ಲಿಯವರೆಗೆ 2,039 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಈಗಾಗಲೇ ವಲಯ ಹಾಗೂ ವಾರ್ಡ್‌ವಾರು 100 ಸುಸ್ತಿದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಸ್ತಿಗೆ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗದ ಆಸ್ತಿಗಳನ್ನು ಒಂದು ತಿಂಗಳಲ್ಲಿ ಸರ್ವೆ ಮಾಡಿಸಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗುವುದು ವಿಶೇಷ ಆಯುಕ್ತ ಬಸವರಾಜು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

17-BNG

Bengaluru: ಕೆಂಪೇಗೌಡ ಲೇಔಟ್‌ನಲ್ಲಿ ಅನಧಿಕೃತ ನಿವೇಶನ ತೆರವು

16-bng

Bengaluru: ವಿವಾಹ ತಿರಸ್ಕರಿಸಿದ ನರ್ಸ್‌ಗೆ ಚೂರಿ ಇರಿದ ಪಾಗಲ್‌ ಪ್ರೇಮಿ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.