ಕೃಷಿಕರ ಆರ್ಥಿಕ ಬಲವರ್ಧನೆಗೆ ಒತ್ತು

Team Udayavani, Jul 14, 2018, 12:15 PM IST

krushikara.jpg

ಬೆಂಗಳೂರು: ರೈತರ ಸುಸ್ಥಿರ ಬದುಕಿಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಶೀಘ್ರವೇ ಜಿಲ್ಲಾ ಮಟ್ಟದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಹಸಿರು ಕ್ರಾಂತಿಯ ಪಿತಾಮಹ ಡಾ.ಎಂ.ಎಸ್‌.ಸ್ವಾಮಿನಾಥನ್‌ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ನಾಡಿನ ಕೃಷಿ ಪದ್ಧತಿ, ನೀರಾವರಿ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ತರಲು ಚಿಂತಿಸಲಾಗಿದೆ. ಈ ನಿಟ್ಟಿನಲ್ಲಿ ಹಿರಿಯರಾದ ಡಾ.ಸ್ವಾಮಿನಾಥನ್‌ ಅವರು ಮಾರ್ಗದರ್ಶನ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಭೇಟಿ ವೇಳೆ ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಮಾರ್ಗದರ್ಶನ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಾ.ಎಂ.ಎಸ್‌.ಸ್ವಾಮಿನಾಥನ್‌, ದೇಶದಲ್ಲೇ ಅತ್ಯುತ್ತಮ ಸಂಸದೀಯ ವ್ಯವಸ್ಥೆ ಹೊಂದಿರುವ ರಾಜ್ಯ ಕರ್ನಾಟಕ. ಪ್ರತ್ಯೇಕವಾಗಿ ತೋಟಗಾರಿಕೆ ಇಲಾಖೆ ಹೊಂದಿರುವ ಮೊದಲ ರಾಜ್ಯವೆಂಬ ಹೆಗ್ಗಳಿಕೆಯೂ ಕರ್ನಾಟಕಕ್ಕೆ ಸಲ್ಲುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ತೋಟಗಾರಿಕೆಯನ್ನು ಬಲಪಡಿಸುವುದರಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಇಂದು ಕೃಷಿ ಉತ್ಪಾದಕತೆ ಮಾತ್ರವಲ್ಲದೇ ರೈತರ ಆದಾಯ ಹೆಚ್ಚಳಕ್ಕೂ ಆದ್ಯತೆ ನೀಡಬೇಕಿದೆ. ಆ ಹಿನ್ನೆಲೆಯಲ್ಲಿ ಹೆಚ್ಚಿನ ಬೆಲೆ ಹೊಂದಿರುವ ಬೆಳೆಗಳನ್ನು ಬೆಳೆಯಲು ಆದ್ಯತೆ ನೀಡಬೇಕು ಎಂದು ಸ್ವಾಮಿನಾಥನ್‌ ಸಲಹೆ ನೀಡಿದರು. ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ, ಸಲಹೆಗಳನ್ನು ರಾಜ್ಯದ ಕೃಷಿ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಕೃಷಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ, ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ, ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್‌ ನಾಡಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಿ.ವಿ.ಪ್ರಸಾದ್‌, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಕೃಷಿ ಇಲಾಖೆ ಕಾರ್ಯದರ್ಶಿ ಡಾ.ಯು.ಎಂ. ಮಹೇಶ್ವರರಾವ್‌ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.