ನೌಕರರ ವೇತನ ಪರಿಷ್ಕರಣೆ;ಸಿಎಂ ಸ್ಪಷ್ಟನೆ
Team Udayavani, Apr 18, 2018, 7:00 AM IST
ಬೆಂಗಳೂರು: ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಜಾರಿಯಾಗುವುದು ಅನುಮಾನ ಎಂದು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಹಾಗೂ ಪಿಂಚಣಿಯನ್ನು 2017ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಪರಿಷ್ಕರಿಸಿ ಮತ್ತು ಪ್ರಸಕ್ತ ವರ್ಷದ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆರ್ಥಿಕ ಸೌಲಭ್ಯ ನೀಡುವ ಕುರಿತು ಮಾರ್ಚ್ 1 ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ.
ಈ ಆದೇಶಕ್ಕೆ ಮಾರ್ಚ್ 2 ರ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಈ ಆದೇಶದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿವರವಾದ ನಿಯಮಗಳು, ಫಿಟ್‌ಮೆಂಟ್ ಕೋಷ್ಠಕ ಮತ್ತು ಆದೇಶಗಳನ್ನು ಹೊರಡಿಸುವ ಪೂರ್ವದಲ್ಲಿ ಚುನಾವಣಾ ಆಯೋಗದಿಂದ ನಿರಪೇಕ್ಷಣಾ ಪತ್ರ ಪಡೆಯಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಏಪ್ರಿಲ್ 3 ರಂದು ಪತ್ರ ಬರೆಯಲಾಗಿದೆ. ರಾಜ್ಯ ಚುನಾವಣಾಧಿಕಾರಿಯ ಅನುಮತಿ ದೊರೆತ ಕೂಡಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.