ಸಂತ್ರಸ್ತರಿಗೆ ನೌಕರರ ಒಂದು ದಿನದ ವೇತನ
Team Udayavani, Sep 18, 2018, 6:15 AM IST
ಬೆಂಗಳೂರು: ಕೊಡಗು ಸೇರಿ ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನ ಬಿಟ್ಟುಕೊಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡುವುದಾಗಿ ಘೋಷಿಸಿದ್ದ ನೌಕರರ ಸಂಘಟನೆಗಳು, ಇದನ್ನು ಸರ್ಕಾರಿ ನೌಕರರ ವೇತನದಿಂದ ಕಡಿತ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ವೇತನದಲ್ಲಿ ಒಂದು ದಿನದ ವೇತನ ಕಡಿತಗೊಳಿಸಿ ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ 2018ಕ್ಕೆ ನೀಡಲು ಆದೇಶದಲ್ಲಿ ತಿಳಿಸಲಾಗಿದೆ. ವೇತನ ಕಡಿತಗೊಳಿಸುವ ಅಧಿಕಾರವನ್ನು ವೇತನ ಬಟವಾಡೆ ಅಧಿಕಾರಿಗಳು ಮತ್ತು ಖಜಾನೆ ಅಧಿಕಾರಿಗಳಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಲು ಇಚ್ಛಿಸದ ನೌಕರರು ಸೆ. 22ರೊಳಗೆ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಲಿಖೀತ ಅಭಿಮತ ಸಲ್ಲಿಸಬೇಕು.
ಇಲ್ಲವಾದಲ್ಲಿ ವೇತನ ನೀಡಲು ನೌಕರರ ಆಕ್ಷೇಪವಿಲ್ಲ ಎಂದು ಭಾವಿಸಿ ಸೆಪ್ಟೆಂಬರ್ ವೇತನದಲ್ಲಿ ಆ ಮೊತ್ತ ಕಡಿತಗೊಳಿಸಲಾಗುವುದು. ಇದಕ್ಕೆ ಆದಾಯ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
China Badminton: ಚಿರಾಗ್- ಸಾತ್ವಿಕ್ ಸೆಮಿಫೈನಲ್‌ಗೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.