ಸಹಕಾರ ಕ್ಷೇತ್ರದಿಂದ ಉದ್ಯೋಗ ಸೃಷ್ಟಿ

Team Udayavani, Sep 17, 2018, 12:23 PM IST

sahakara.jpg

ಬೆಂಗಳೂರು: ಸಹಕಾರ ಬ್ಯಾಂಕ್‌ಗಳು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಜತೆಗೆ ಬಡವರ ಕಲ್ಯಾಣ ಕಾರ್ಯದಲ್ಲಿ ನಿರತವಾಗಿದೆ ಎಂದು ರಾಜ್ಯಪಾಲ ವಜೂಭಾಯ್‌ ವಾಲಾ ಅಭಿಪ್ರಾಯಪಟ್ಟಿದ್ದಾರೆ.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದಿ ಮೈಸೂರು ಸಿಲ್ಕ್ ಕ್ಲಾತ್‌ ಮರ್ಚೆಂಟ್ಸ್‌ ಕೋ-ಆಪರೇಟಿವ್‌ ಬ್ಯಾಂಕ್‌ನ ಸುವರ್ಣ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜದಲ್ಲಿ ಸೌಲಭ್ಯ ವಂಚಿತರಿಗೆ ಸಹಾಯ, ಸಹಕಾರ ಮಾಡುವುದೇ ಸಹಕಾರಿ ಬ್ಯಾಂಕ್‌ಗಳ ಆದ್ಯತೆಯಾಗಬೇಕು. ಲಾಭದ ಉದ್ದೇಶದಿಂದ ಸಹಕಾರಿ ವಲಯ ಹುಟ್ಟಿಕೊಂಡಿಲ್ಲ. ಸೇವಾ ಮನೋಧರ್ಮದಿಂದ ಬೆಳೆದು ಬಂದಿದೆ ಎಂದು ಹೇಳಿದರು.

ಸಹಕಾರಿ ಅಥವಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಡ ಮತ್ತು ಮಧ್ಯಮ ವರ್ಗದವರು ಸಾಲ ಪಡೆದರೆ, ಪ್ರಾಣಿಕವಾಗಿ ಬದ್ಧತೆಯಿಂದ ಮರುಪಾವತಿ ಮಾಡುತ್ತಾರೆ. ಆದರೆ, ಶ್ರೀಮಂತರು ಸಾಲ ಪಡೆದು, ಮರುಪಾವತಿ ಮಾಡುವಾಗ ವಿಳಂಬ ಧೋರಣೆ ಅನುಸರಿಸುತ್ತಾರೆ. ಹೀಗಾಗಿ ಸಹಕಾರಿ ಬ್ಯಾಂಕ್‌ಗಳು ಶ್ರೀಮಂತರ ಹೂಡಿಕೆಯಲ್ಲಿ ಬಡವರಿಗೆ ಸಾಲ ಸೌಲಭ್ಯ ಹೆಚ್ಚೆಚ್ಚು ಒದಗಿಸಬೇಕು ಎಂದು ಸಲಹೆ ನೀಡಿದರು.

ಹೂಡಿಕೆಯನ್ನು ರಾಷ್ಟ್ರೀಯಕೃತ ಬ್ಯಾಂಕ್‌ಗಳ ಬದಲಾಗಿ ಸಹಕಾರಿ ಬ್ಯಾಂಕ್‌ನಲ್ಲಿ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ ಒಮ್ಮೆಗೆ ನಷ್ಟಕ್ಕೆ ಜಾರಿದರೆ ಗ್ರಾಹಕರಿಗೆ ಏನೂ ಸಿಗುವುದಿಲ್ಲ. ಆದರೆ, ಸಹಕಾರಿ ಬ್ಯಾಂಕ್‌ ನಷ್ಟವಾದರೂ, ಸರ್ಕಾರ ಅಲ್ಪ ಸ್ಪಲ್ಪ  ಸಹಾಯ ಮಾಡುತ್ತದೆ ಅಥವಾ ವಿಮೆ ಮೂಲಕವಾದರೂ ಗ್ರಾಹಕರಿಗೆ ಹಣ ಸಿಗುತ್ತದೆ. ಹೀಗಾಗಿ ಸಹಕಾರಿ ಬ್ಯಾಂಕ್‌ಗಳಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡುವಂತಾಗಲಿ ಎಂದರು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಗೂ ಹಿಂದಿನ ಕಾಂಗ್ರೆಸ್‌ ಸರ್ಕಾರ ಮಾಡಿರುವ ಸಹಕಾರಿ ಸಾಲಮನ್ನಾ ಸೇರಿದಂತೆ ಒಟ್ಟಾರೆ ಸಹಕಾರ ಕ್ಷೇತ್ರದ 19 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದೇವೆ. ಹಾಗೆಯೇ ರಾಷ್ಟ್ರೀಕೃತ ಬ್ಯಾಂಕ್‌ನ 30 ಸಾವಿರ ಕೋಟಿ ರೂ.ಸಾಲಮನ್ನಾ ಮಾಡಿದ್ದೇವೆ ಎಂದು ಹೇಳಿದರು.

ಮಾಜಿ ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ, ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎನ್‌.ಎಸ್‌.ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷ ಆರ್‌.ಪಿ.ರವಿಶಂಕರ್‌, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ.ಕೃಷ್ಣಭಗವಾನ್‌  ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಇಲಾಖೆಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಠೇವಣಿಯಾಗಿ ಇಟ್ಟಿರುವ ಹಣವನ್ನು ಅಪೆಕ್ಸ್‌ ಬ್ಯಾಂಕ್‌ಗೆ ವರ್ಗಾವಣೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಠೇವಣಿ ವರ್ಗಾವಣೆಗೊಂಡರೆ ರೈತರಿಗೆ ಸಾಲ ಕೊಡಲು ಅನುಕೂಲವಾಗಲಿದೆ. ಈ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ.
-ಬಂಡೆಂಪ್ಪ ಕಾಶಂಪುರ್‌, ಸಹಕಾರ ಸಚಿವ

ಟಾಪ್ ನ್ಯೂಸ್

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.