ಐದು ಲಕ್ಷ ಯುವಕರಿಗೆ ಉದ್ಯೋಗ
Team Udayavani, Jun 5, 2018, 11:52 AM IST
ಬೆಂಗಳೂರು: “ರಾಜ್ಯದ ಐದು ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದು ನನ್ನ ಗುರಿ. ಅದಕ್ಕೆ ಪೂರಕವಾಗಿ ಕೌಶಲ್ಯ ವಿವಿ ಸ್ಥಾಪಿಸಲು ಉದ್ದೇಶಿಸಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ದಿ. ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕ ಸ್ಥಾಪಿತ ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಕನಸಿನ ಯೋಜನೆ ಮತ್ತು ಕಾರ್ಯಕ್ರಮಗಳ ವಿವರಗಳನ್ನು ಹಂಚಿಕೊಂಡರು. ಕಾಲೇಜಿನ ಹಳೆಯ ವಿದ್ಯಾರ್ಥಿ ಎಂಬ ಕಾರಣಕ್ಕೆ ಕುಮಾರಸ್ವಾಮಿಯವರಿಗೆ ಈ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ 65 ವರ್ಷ ದಾಟಿದ ಹಿರಿಯ ನಾಗರೀಕರಿಗೆ ಪಿಂಚಣಿ ಯೋಜನೆ ಜಾರಿಗೆ ತರುತ್ತೇನೆ. ಅದನ್ನು ಬಜೆಟ್‌ನಲ್ಲಿ ಘೋಷಣೆ ಮಾಡುತ್ತೆನೆ. ತರಕಾರಿ ಸೇರಿದಂತೆ ಬೀದಿ ಬದಿ ಸಣ್ಣ ಪುಟ್ಟ ವ್ಯಾಪಾರ ಮಾಡುವವರಿಗೆ ತಕ್ಷಣ ಆರ್ಥಿಕ ನೆರವು ನೀಡಲು ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ತರಬೇಕು ಎಂದು ಆಲೋಚಿಸಿದ್ದೇನೆ.
ವ್ಯಾಪಾರಿಗಳು ತಮ್ಮ ಆಧಾರ ಕಾರ್ಡ್ ಕೊಟ್ಟು ಹಣ ಪಡೆದುಕೊಂಡು ವ್ಯಾಪಾರ ಮಾಡಿ ಸಂಜೆ ಹಣ ವಾಪಸ್ ಕೊಟ್ಟು ಆಧಾರ್ ಕಾರ್ಡ್ ತೆಗೆದುಕೊಂಡು ಹೋಗಬೇಕು. ಇದರಿಂದ ಬಡ್ಡಿ ವ್ಯವಹಾರಕ್ಕೆ ಕಡಿವಾಣ ಬೀಳುತ್ತದೆ ಎಂದರು. ಕಳೆದ 10 ವರ್ಷಗಳಲ್ಲಿ ಆಡಳಿತ ಯಂತ್ರ ಕುಸಿದಿದೆ. ಅದರಲ್ಲಿ ಬದಲಾವಣೆ ತರಬೇಕಿದೆ. ಅದೇ ರೀತಿ ಕಳೆದ ಹತ್ತು ವರ್ಷಗಳಲ್ಲಿ ಶಿಕ್ಷಕ ನೇಮಕಾತಿ ಆಗಿಲ್ಲ.
23 ಸಾವಿರ ಶಿಕ್ಷಕ ಕೊರತೆ ಇದೆ. ಕಟ್ಟಡಗಳನ್ನು ಕಟ್ಟಲಾಗಿದೆ. ಆದರೆ, ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ಸರ್ಕಾರಗಳು ಎಡವಿದ್ದಾವೆ. ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ಏರಿಸಬೇಕು. 1ನೇ ತರಗತಿಯಿಂದ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಸಿಗಬೇಕು ಅನ್ನುವುದು ನನ್ನ ಆದ್ಯತೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ. ರೈತರ ರಕ್ಷಣೆ ಅಷ್ಟೇ ಅಲ್ಲ.
ಇನ್ನೂ ಅನೇಕ ವಿಷಯಗಳ ಬಗ್ಗೆ ಗಮನ ಕೊಡಬೇಕಿದೆ. ತೆರಿಗೆ ಹಣದ ಒಂದೊಂದು ಪೈಸೆಯೂ ಸದ್ಬಳಕೆ ಆಗಬೇಕು. ಒಂದು ಕ್ಷಣವೂ ವ್ಯರ್ಥ ಮಾಡದೇ ನಾನು ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಈ ವೇಳೆ ದಿ. ನ್ಯಾಷನಲ್ ಎಕುಕೇಷನ್ ಸೊಸೈಟಿ ಆಫ್ ಕರ್ನಾಟಕ ಇದರ ಅಧ್ಯಕ್ಷ ಡಾ. ಎ.ಎಚ್. ರಾಮರಾವ್, ಕಾರ್ಯದರ್ಶಿ ಪ್ರೊ. ಎನ್.ಎಸ್. ನಾಗರಾಜ ರೆಡ್ಡಿ, ಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ಮತ್ತಿತರರು ಇದ್ದರು.
ಪ್ರಶ್ನೆಗೆ ಹೆದರಿ ಕೊನೇ ಬೆಂಚಲ್ಲಿ ಕೂರ್ತಿದ್ದೆ!: ಇದೇ ವೇಳೆ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡ ಕುಮಾರಸ್ವಾಮಿ, ಎಚ್. ನರಸಿಂಹಯ್ಯ ಅವರ ಪರಿಶ್ರಮದ ಫಲವಾಗಿರುವ ಈ ಕಾಲೇಜಿನಲ್ಲಿ ನನಗೆ ಸೀಟು ಸಿಕ್ಕದ್ದೇ ಪುಣ್ಯ. ಅವರಿಗೆ ಗೌರವ ತರುವ ಕೆಲಸ ಮಾಡುತ್ತೇನೆ. ಮೇಷ್ಟ್ರು ಎಲ್ಲಿ ಪ್ರಶ್ನೆ ಕೇಳ್ತಾರೊ ಎಂದು ಹೆದರಿ ಲಾಸ್ಟ್ ಬೆಂಚ್‌ನಲ್ಲಿ ಕೂರುತ್ತಿದೆ. ಆ ದಿನಗಳಲ್ಲಿ ಕಷ್ಟ ಪಟ್ಟು ಓದಿದ್ದರೆ ಐಎಎಸ್ ಆಫಿಸರೋ ಮತ್ತೇನೂ ಆಗುತ್ತಿದೆ.
ಆದರೆ, ಓದದೇ ಇದ್ದಿದ್ದಕ್ಕೆ ಅನುಕೂಲ ಆಯಿತೇನೂ ಎಂದು ಈಗ ಅನಿಸುತ್ತಿದೆ. ಕಾಲೇಜು ದಿನಗಳಲ್ಲಿ ಹುಡುಗಾಟಿಕೆ ಸಹಜ. ಆದರೆ, ಬರೀ ಹುಡುಕಾಟಿಗೆ ಮಾಡಿದರೆ ಜನ್ಮ ಕೊಟ್ಟ ತಂದೆ ತಾಯಿಗೆ ಮೋಸ ಮಾಡಿದಂತೆ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇರುತ್ತದೆ. ಪರಿಶ್ರಮದ ಮೂಲಕ ಅದನ್ನು ಸಾಬೀತುಪಡಿಸಬೇಕು. ದೇವರು ಮತ್ತು ಗುರುಗಳ ಬಗ್ಗೆ ಶ್ರದ್ಧೆ ಮತ್ತು ಭಕ್ತಿ ಇಟ್ಟುಕೊಳ್ಳಬೇಕು ಎಂದು ಇದೇ ವೇಳೆ ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಹೊಸ ಸೇರ್ಪಡೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.