ವಿಕಲಚೇತನ ವ್ಯಕ್ತಿಗೆ ಉದ್ಯೋಗ ಭರವಸೆ
Team Udayavani, Jun 5, 2018, 6:30 AM IST
ಬೆಂಗಳೂರು: ಎಂಬಿಎ ವ್ಯಾಸಂಗ ಮಾಡುತ್ತಿರುವ ವಿಕಲಚೇತನರೊಬ್ಬರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉದ್ಯೋಗ ನೀಡುವ ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಸೋಮವಾರ ಜನತಾ ದರ್ಶನ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಿಕಲಚೇತನ ಮಾಲತೇಶ್ ತಮ್ಮ ಅಳಲು ತೋಡಿಕೊಂಡರು. ಬಲಗಾಲು ಕಳೆದುಕೊಂಡಿರುವ ಮಾಲತೇಶ್ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.
ಇದಕ್ಕೆ ತಕ್ಷಣ ಸ್ಪಂದಿಸಿದ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಕಚೇರಿ ಇಲ್ಲವೇ ಗೃಹ ಕಚೇರಿ “ಕೃಷ್ಣಾ’ದಲ್ಲಿ ಸೂಕ್ತ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದರಿಂದ ಮಾಲತೇಶ್ ಅವರಿಗಾದ ಸಂತೋಷ ಅಷ್ಟಿಷ್ಟಲ್ಲ.
ಚಿಕಿತ್ಸೆ ನೀಡಲು ಸೂಚನೆ
ಮೂಳೆ ಸಮಸ್ಯೆಯಿಂದ ಬಳಲುತ್ತಿದ್ದ 10 ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಮೊರೆಯಿಟ್ಟ ದಂಪತಿಗೆ ಮುಖ್ಯಮಂತ್ರಿಗಳು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು.
ಕೊರಟಗೆರೆ ತಾಲ್ಲೂಕಿನ ಲಂಕೇನಹಳ್ಳಿ ನಿವಾಸಿ ಆಟೋ ಚಾಲಕ ಆನಂದ್ ಕುಮಾರ್ ಹಾಗೂ ಪ್ರೇಮಾ ದಂಪತಿಯ ಎರಡು ಮಕ್ಕಳು ಮೂಳೆ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಐದು ವರ್ಷದ ಬಾಲಕ ದೈಹಿಕ ಬೆಳವಣಿಗೆ ಕೊರತೆಯಿಂದ ಬಳಲುತ್ತಿದ್ದು, 10 ತಿಂಗಳ ಗಂಡು ಮಗು ಸಹ ಮೂಳೆ ಸಮಸ್ಯೆಯಿಂದ ಬಳಲುತ್ತಿದೆ.
ಖಾಸಗಿ ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದಾಗ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ನೀಡಬೇಕಿದ್ದು, 32 ಲಕ್ಷ ರೂ. ವೆಚ್ಚವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಡ ಕುಟುಂಬದವರಾದ ತಮಗೆ ಅಷ್ಟು ದುಬಾರಿ ವೆಚ್ಚದ ಚಿಕಿತ್ಸೆ ಕೊಡಿಸಲು ಸಾಧ್ಯವಿಲ್ಲ. ಹಾಗಾಗಿ ನೆರವು ನೀಡಬೇಕು ಎಂದು ದಂಪತಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ತಕ್ಷಣವೇ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಕರೆದೊಯ್ಯಿರಿ. ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.
ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯೊಂದು ಆರ್‌ಟಿಇ ಅಡಿಯಲ್ಲಿ ಬಡ ಮಕ್ಕಳಿಗೆ ಸೀಟು ನೀಡದಿರುವ ಬಗ್ಗೆ ಸಾರ್ವಜನಿಕರೊಬ್ಬರು ಗಮನ ಸೆಳೆದಾಗ ಈ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.
ಹೆಬ್ಟಾಳ ಕೆಂಪಾಪುರದಲ್ಲಿ ವಿದ್ಯಾನಿಕೇತನ ಶಾಲೆಯು ಆರ್‌ಟಿಇ ಅಡಿ 33 ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಬೇಕೆಂಬ ಆದೇಶವಿದ್ದರೂ ನೀಡುತ್ತಿಲ್ಲ. ಗುಜರಾತಿ ಭಾಷಾ ಅಲ್ಪಸಂಖ್ಯಾತ ಕೋಟಾದಡಿಯ ಶಿಕ್ಷಣ ಸಂಸ್ಥೆಗೆ ಆರ್‌ಟಿಇ ಅನ್ವಯಿಸುವುದಿಲ್ಲ ಎಂದು ಆಡಳಿತ ಮಂಡಳಿ ಸಬೂಬು ಹೇಳುತ್ತಿದೆ. ಈ ಬಗ್ಗೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆಗ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಎಂ.ಲಕ್ಷ್ಮೀನಾರಾಯಣ್ ಅವರು ಮನವಿಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಶಾಲೆಗೆ ಸೂಚಿಸಿದ್ದರು. ಈ ಪತ್ರಕ್ಕೂ ಶಾಲೆಯ ಆಡಳಿತ ಮಂಡಳಿ ಬೆಲೆ ನೀಡಿಲ್ಲ ಎಂದು ಮಹದೇವ ರಾವ್ ಹೇಳಿದರು.
ಬಡವರು, ಆರ್ಥಿಕವಾಗಿ ಹಿಂದುಳಿದವರು, ಪರಿಶಿಷ್ಟ ಜಾತಿ, ಪಂಗಡ ಕುಟುಂಬದ ಮಕ್ಕಳಿದ್ದು ಅವರಿಗೆ ಆರ್‌ಟಿಇ ಅಡಿ ಪ್ರವೇಶ ನೀಡಿಲ್ಲ. ಇದನ್ನು ಸೋಮವಾರ ಮತ್ತೂಮ್ಮೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ತಮ್ಮ ನಿವೇಶನ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಬೇಕೆಂದು ನ್ಯಾಯಾಲಯದ ಆದೇಶವಿದ್ದರೂ ತೆರವುಗೊಳಿಸುತ್ತಿಲ್ಲ ಎಂದು ವಯೋವೃದ್ಧೆ ಗಂಗಮ್ಮ, ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಉಲ್ಲಾಳ ಉಪನಗರದ ಅಂಬೇಡ್ಕರ್ ಕಾಲೋನಿಯ 9ನೇ ಅಡ್ಡರಸ್ತೆಯಲ್ಲಿ 30 ಹಾಗೂ 40 ಚದರ ಅಡಿ ವಿಸ್ತೀರ್ಣದ ನಿವೇಶನವಿದೆ. ಒಂದು ಬದಿ ರಮೇಶ್ ಎಂಬುವರು ಎಂಟು ಅಡಿ, ಇನ್ನೊಂದೆಡೆ ದೊರೆಸ್ವಾಮಿ ಎಂಬುವರು ನಾಲ್ಕು ಅಡಿ ಒತ್ತುವರಿ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದಾಗ ತಹಶೀಲ್ದಾರ್ ಸರ್ವೇ ನಡೆಸಿ ಒತ್ತುವರಿಯನ್ನು ದೃಢಪಡಿಸಿದ್ದರು. ನಂತರ ನ್ಯಾಯಾಲಯ ಸಹ ಒತ್ತುವರಿ ತೆರವುಗೊಳಿಸಲು ಸೂಚಿಸಿತ್ತು. ಇದೀಗ ತಹಶೀಲ್ದಾರ್ ಬದಲಾಗಿದ್ದು, ಮತ್ತೆ ಸಮಸ್ಯೆ ತಲೆದೋರಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಪರಿಶೀಲಿಸಿ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಗಂಗಮ್ಮ ಹೇಳಿದರು.
ಆತ್ಮೀಯತೆ ತೋರಿದ ಸಿಎಂ
ತಾಯಿ ಅಂಧರಾಗಿದ್ದು, ಬಾಡಿಗೆ ಮನೆಯಲ್ಲಿ ನೆಲೆಸಿರುವ ತಮಗೆ ನೆರವಾಗಬೇಕು ಎಂದು ಕೊಡಿಗೇಹಳ್ಳಿಯ ಬಾಲಕನೊಬ್ಬ ತಾಯಿಯೊಂದಿಗೆ ಜನತಾ ದರ್ಶನಕ್ಕೆ ಬಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಬಾಲಕರನ್ನು ಆಲಿಂಗಿಸಿ ಆತ್ಮೀಯತೆ ತೋರಿದರು. ಬಳಿಕ ತಮಗೆ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ತಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.