ಸರಕು ಸಾಗಣೆ ವಲಯದಲ್ಲಿ ಉದ್ಯೋಗಾವಕಾಶ; 3 ವಿವಿಗಳೊಂದಿಗೆ ಒಪ್ಪಂದಕ್ಕೆ ಸಹಿ


Team Udayavani, Jul 1, 2022, 3:09 PM IST

Employment opportunities in the freight sector

ಬೆಂಗಳೂರು: ಸರಕು ಸಾಗಾಣಿಕೆ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ಮಾನವ ಸಂಪನ್ಮೂಲ ಒದಗಿಸುವ ಉದ್ದೇಶದಿಂದ ಕರ್ನಾಟಕದ ಮೂರು ವಿವಿಗಳಾದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಮಂಡ್ಯ ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ ಹಾಗೂ ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಕೌಶಲ್ಯಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ಸರಕು ಸಾಗಾಣಿಕೆ ವಲಯಕ್ಕೆ ಸಂಬಂಧಿಸಿದಂತೆ ಇಂಡಸ್ಟ್ರಿ ಕನೆಕ್ಟ್ ಕಾನಕ್ಲೇವ್ ನಲ್ಲಿ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಪರಸ್ಪರ ಸಹಿ ಹಾಕಲಾಯಿತು. ಈ ಮೂಲಕ ಸರಕು ಸಾಗಣೆ ವಲಯದಲ್ಲಿ ಉದ್ಯೋಗ ಕಲ್ಪಿಸಲು  ಶೈಕ್ಷಣಿಕ ಮತ್ತು ಉದ್ಯೋಗದಾತರನ್ನು ಒಂದು ಕಡೆ ಸೇರಿಸಲು ಸಾಧ್ಯವಾಗಿದೆ.

ಈ ಮೂರು ವಿಶ್ವವಿದ್ಯಾಲಯಗಳಲ್ಲಿ ಸ್ಟೈಪೆಂಡರಿ ಅಪ್ರೆಂಟಿಸ್ಶಿಪ್ ಎಂಬೆಡೆಡ್ ಪದವಿ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತದೆ.  ಮೂರನೇ ವರ್ಷದಲ್ಲಿ ಸಂಬಂಧಿತ ಕಂಪನಿಗಳಲ್ಲಿ 12 ತಿಂಗಳ ಸ್ಟೈಪೆಂಡರಿ ಅಪ್ರೆಂಟಿಸ್ಶಿಪ್ನೊಂದಿಗೆ ಸಮಗ್ರ ಭಾಗವಾಗುವಂತೆ ಮಾಡಲಾಗುತ್ತದೆ. 12 ತಿಂಗಳುಗಳ ಶಿಷ್ಯವೃತ್ತಿಯು ವಿದ್ಯಾರ್ಥಿಗಳನ್ನು  ಕೌಶಲ್ಯಪೂರ್ಣರನ್ನಾಗಿ ಮಾಡುತ್ತದೆ. ಅವರನ್ನು ಉದ್ಯಮ-ಸಿದ್ಧರನ್ನಾಗಿ ಮಾಡುತ್ತದೆ. ಶಿಷ್ಯವೇತನದ ಅವಧಿಯಲ್ಲಿ ವಿದ್ಯಾರ್ಥಿಗಳು ಮಾಸಿಕ 7,500 ರೂ. ಸ್ಟೈಫಂಡ್ ಗಳಿಸುತ್ತಾರೆ.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಇ-ಕಾಮರ್ಸ್ ಬಿಬಿಎ, ಮಂಡ್ಯ ವಿಶ್ವವಿದ್ಯಾಲಯದಲ್ಲಿ ಲಾಜಿಸ್ಟಿಕ್ಸ್ ವಿಷಯದಲ್ಲಿ ಬಿ.ಕಾಂ. ಹಾಗೂ ನೃಪತುಂಗ ವಿಶ್ವವಿದ್ಯಾಲಯದಲ್ಲಿ ವಾಯುಯಾನದಲ್ಲಿ ಬಿಬಿಎ ಮತ್ತ ಏರ್ ಕಾರ್ಗೋ ಕೋರ್ಸ್ ಪ್ರಾರಂಭಿಸಲಾಗುವುದು.

ಸಮಾವೇಶ ಉದ್ಘಾಟಿಸಿದ ಕೌಶಲ್ಯಾಭಿವೃದ್ಧಿ ಸಚಿವ ಅಶ್ವತ್ಥನಾರಾಯಣ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ, ಭವಿಷ್ಯದ ಭಾರತಕ್ಕಾಗಿ ಯುವಕರನ್ನು ಸಜ್ಜುಗೊಳಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.

ಎನ್ ಇಪಿಯು ಶಿಕ್ಷಣಶಾಸ್ತ್ರಗಳಲ್ಲಿ ಒಂದಾಗಿದೆ.  ಉದ್ಯೋಗಸ್ಥಳ ಸಂಸ್ಕೃತಿಗೆ ವಿದ್ಯಾರ್ಥಿಗಳನ್ನು ಸಂವೇದನಾಶೀಲಗೊಳಿಸುವ, ಉದ್ಯಮಗಳಿಂದ ವಿದ್ಯಾರ್ಥಿಗಳಿಗೆ ರಚಿಸಲಾದ ಇಂಟರ್ನ್ಶಿಪ್ ಮತ್ತು ಅಪ್ರೆಂಟಿಸ್ಶಿಪ್ ಅವಕಾಶಗಳನ್ನು ಒದಗಿಸಲಾಗುತ್ತದೆ. ಉದ್ಯೋಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.  ಈ ಉಪಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕಾಡೆಮಿ ಮತ್ತು ಉದ್ಯಮಗಳು ಒಗ್ಗೂಡಬೇಕಾಗಿದೆ ಎಂದರು.

ಪಠ್ಯಕ್ರಮದ ಭಾಗವಾಗಿ ಇಂಟರ್ನ್ಶಿಪ್ ಮತ್ತು ಎಂಬೆಡಿಂಗ್ ಅಪ್ರೆಂಟಿಸ್ಶಿಪ್ ಕೆಲವು ದಿಟ್ಟ ಉಪಕ್ರಮಗಳಾಗಿವೆ. ಈ ಯೋಜನೆಯಿಂದ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೂ ಸಹಾ ಉತ್ತೇಜನ ನೀಡಲಿದೆ, ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು,  ಈ ಕಾರ್ಯಕ್ರಮದಿಂದ ಉದ್ಯೋಗವನ್ನರಸಿ ತಮ್ಮ ಪ್ರದೇಶಗಳಿಂದ ನಿರುದ್ಯೋಗಿಗಳ ವಲಸೆಯನ್ನು ತಡೆಗಟ್ಟಬಹುದಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಈ ಉಪಕ್ರಮವು ಯುವಕರನ್ನು ಅವರ ಕುಟುಂಬಗಳನ್ನು ತೊರೆದು ಹೊರ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸುವುದರಿಂದ ಅವರ ಕುಟುಂಬದಲ್ಲಿ ನೆಮ್ಮದಿ ಮಾಡುತ್ತದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವಕುಮಾರ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ  ಅಶ್ವಿನ್ ಡಿ ಗೌಡ, ಭಾರತೀಯ ಲಾಜಿಸ್ಟಿಕ್ ಸ್ಕಿಲ್ ಕೌನ್ಸಿಲ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿಕಾಂತ್,  ಫ್ಲಿಪ್ ಕಾರ್ಟ್ ನ ಮುಖ್ಯ ಆಪರೇಟಿಂಗ್ ಅಧಿಕಾರಿ ಕೃಷ್ಣ ರಾಘವನ್ ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.