ಮಾತೃಪೂರ್ಣ ಡೋಲಾಯಮಾನ ನಿಗದಿತ ದಿನವೇ ಜಾರಿ ಅನುಮಾನ


Team Udayavani, Sep 18, 2017, 12:02 PM IST

mathru-poorana-yojane.jpg

ಬೆಂಗಳೂರು: ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಠಿಕಾಂಶ ಒದಗಿಸಲು ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಮಹತ್ವಾಕಾಂಕ್ಷೆಯ “ಮಾತೃಪೂರ್ಣ ಯೋಜನೆ’ ಸದ್ಯ ಡೋಲಾಯಮಾನ ಸ್ಥಿತಿ ಎದುರಿಸುತ್ತಿದೆ. ಅಕ್ಟೋಬರ್‌ 2ರ ಗಾಂಧಿಜಯಂತಿ ದಿನ ರಾಜ್ಯದ 30 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಯೋಜನೆ ಅನುಷ್ಠಾನಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಿಸಿದೆ. ಆದರೆ, ಯೋಜನೆ ಅನುಷ್ಠಾನಕ್ಕೆ ಬೇಕಾದ ಸಿದ್ಧತೆಗಳನ್ನು ಗಮನಿಸಿದರೆ, ನಿಗಧಿತ ಅವಧಿಗೆ ಯೋಜನೆ ಜಾರಿಯಾಗುವ ಸಾಧ್ಯತೆಗಳು ಗೋಚರಿಸುತ್ತಿಲ್ಲ. 

2016-17ನೇ ಸಾಲಿನಲ್ಲಿ ಮಾತೃಪೂರ್ಣ ಯೋಜನೆಯನ್ನು ಎಚ್‌.ಡಿ.ಕೋಟೆ, ಮಧುಗಿರಿ, ಮಾನ್ವಿ, ಜಮಖಂಡಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಸರ್ಕಾರ, 2017-18ನೇ ಸಾಲಿಗೆ ರಾಜ್ಯದೆಲ್ಲೆಡೆ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಮಧ್ಯಾಹ್ನ ಪೌಷ್ಠಿಕ ಆಹಾರ ಒದಗಿಸಲು ಸುಮಾರು 302 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲು ಇಟ್ಟಿತ್ತು, ಇದೀಗ ನಿಗದಿಯಂತೆ ಅ.2ಕ್ಕೆ ಯೋಜನೆ ಅನುಷ್ಠಾನವಾಗಬೇಕಿದೆ. ಆದರೆ, ಒಂದರ ಮೇಲೊಂದರಂತೆ ಸಮಸ್ಯೆಗಳು ಉದ್ಭವವಾಗುತ್ತಿದ್ದು, ಯೋಜನೆ ಅನುಷ್ಠಾನ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ.

ಗೊಂದಲ ಸೃಷ್ಟಿ: ರಾಜ್ಯದಲ್ಲಿ 61,187 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 1.28 ಲಕ್ಷ ಮಂದಿ ಕಾರ್ಯಕರ್ತೆಯರು, ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 204 ಶಿಶು ಅಭಿವೃದ್ಧಿ ಯೋಜನೆ ಇವೆ. ಅವುಗಳಲ್ಲಿ 181 ಗ್ರಾಮಾಂತರ ಪ್ರದೇಶ, 11 ನಗರ ಪ್ರದೇಶ ಮತ್ತು 12 ಬುಡಕಟ್ಟುಗಳಲ್ಲಿದ್ದು, ಈ ಯೋಜನೆಗಳ ನಿರ್ವಹಣೆ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರದ್ದೇ ಆಗಿದೆ.

ಇದರಲ್ಲಿ 3331 ಮಿನಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಕೊರತೆ ಇದೆ ಎಂಬ ಕಾರಣಕ್ಕೆ ಕೇವಲ ಓರ್ವ ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ಇದ್ದಾರೆ. ಅವರೊಬ್ಬರೇ ಬಿಸಿಯೂಟ ಸಿದ್ಧಪಡಿಸಲು ಹಾಗೂ ಶಾಲಾ ಪೂರ್ವ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಹೇಗೆ ಸಾಧ್ಯವೆಂಬ ಗೊಂದಲ ಸೃಷ್ಟಿಯಾಗಿದೆ. ಈ ಹಿಂದೆ ಗರ್ಭಿಣಿಯರಿಗೆ ಪೌಷ್ಠಿಕಾಂಶಯುಕ್ತ ಆಹಾರ ಕಾರ್ಯಕ್ರಮ ಅನುಷ್ಠಾನದಲ್ಲಿತ್ತು. ಆಗ ಬೆಳಗ್ಗೆ 10.30ರ ನಂತರ ಅಡುಗೆ ಮಾಡಲಾಗುತ್ತಿತ್ತು.

ಫ‌ಲಾನುಭವಿಗಳ ಮನೆಗಳಿಗೆ ಊಟ ತಲುಪಿಸುವ ವ್ಯವಸ್ಥೆ ಇತ್ತು. ಈ ಯೋಜನೆ ದುರುಪಯೋಗವಾಗುತ್ತಿದೆ ಎಂಬ ಕಾರಣಕ್ಕೆ ಇದೀಗ ಮಾತೃಪೂರ್ಣ ಯೋಜನೆ ತರಲಾಗಿದೆ. ಇದೊಂದು ಉತ್ತಮ ಯೋಜನೆ ನಿಜ. ಆದರೆ, ಗರ್ಭಿಣಿಯರು, ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ ಸುಡುಬಿಸಿಲಿನಲ್ಲಿ ಬಂದು ಊಟ ಮಾಡಿಕೊಂಡು ಹೋಗುತ್ತಾರೆ ಎಂಬುದೇ ಹಾಸ್ಯಾಸ್ಪದ ವಿಷಯ.

ಮಧ್ಯಾಹ್ನದ ಹೊತ್ತಿನಲ್ಲಿ ಬಾಣಂತಿಯರನ್ನು, ಗರ್ಭಿಣಿಯರನ್ನು ಸುಮಾರು 1-2 ಕಿ.ಮೀ ದೂರದ ಅಂಗನವಾಡಿಗಳಿಗೆ ಕಳುಹಿಸಿಕೊಡಲು ಸಾಧ್ಯವೇ? ಒಂದು ವೇಳೆ ಫ‌ಲಾನುಭವಿಗಳು ಬರದಿದ್ದರೆ ಮಾಡಿದ ಅಡುಗೆ ಗತಿಯೇನು? ಸರ್ಕಾರಕ್ಕೆ ನಷ್ಟ ಆಗುವುದಿಲ್ಲವೇ? ಎಂಬಿತ್ಯಾದಿ ಹಲವು ಪ್ರಶ್ನೆಗಳು ಉದ್ಭವವಾಗುತ್ತಿವೆ. 

ಕಾರ್ಯಕರ್ತರಿಗೆ ಹೊರೆ: ಈ ಹಿಂದೆ ಅಂಗನವಾಡಿಗಳು ಬೆಳಗ್ಗೆ 9.30ಕ್ಕೆ ಆರಂಭಗೊಂಡು ಮಧ್ಯಾಹ್ನ 1.30ರಿಂದ 2ಕ್ಕೆ ಅಂತ್ಯಗೊಳ್ಳುತ್ತಿತ್ತು. ಇದೀಗ ಅವಧಿ ವಿಸ್ತರಿಸಿರುವ ಸರ್ಕಾರ ಸಂಜೆ 4ರವರೆಗೆ ಕಾರ್ಯನಿರ್ವಹಿಸುವುದನ್ನು ಕಡ್ಡಾಯ ಮಾಡಿದೆ. ಇದರೊಂದಿಗೆ ವಿವಿಧ ಜವಾಬ್ದಾರಿಗಳು ಕೂಡ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹೆಗಲಿಗೆ ಹೊರಿಸಲಾಗಿದೆ. ಮಾತೃಪೂರ್ಣ ಯೋಜನೆಯಲ್ಲಿ ಒಟ್ಟು 12 ಲಕ್ಷಕ್ಕೂ ಅಧಿಕ ಫ‌ಲಾನುಭವಿಗಳು,

5 ವರ್ಷದೊಳಗಿನ ಮಕ್ಕಳು ಸೇರಿದಂತೆ ಒಟ್ಟು 55 ಲಕ್ಷ ಫ‌ಲಾನುಭವಿಗಳು ಅಂಗನವಾಡಿ ವ್ಯಾಪ್ತಿಯಲ್ಲಿ ಬರುತ್ತಾರೆ. ಅವರಿಗೆ ನಿಗದಿತ ಸಮಯಕ್ಕೆ ಪೌಷ್ಠಿಕಾಂಶಯುಕ್ತ ಆಹಾರ, ಶಾಲಾ ಪೂರ್ವ ಶಿಕ್ಷಣ ಒದಗಿಸಬೇಕಿದೆ. ಆದ್ದರಿಂದ ಈಗಿರುವ ಸಿಬ್ಬಂದಿ ಜತೆಗೆ ಅಡುಗೆ ತಯಾರಿಕೆಗಾಗಿ ಪ್ರತ್ಯೇಕವಾಗಿ ಸಹಾಯಕರನ್ನು ಒದಗಿಸಬೇಕು ಎಂಬ ಒತ್ತಾಯ ಅಂಗನವಾಡಿ ಕಾರ್ಯಕರ್ತೆಯರದ್ದು.  ಜತೆಗೆ ಹೆಚ್ಚಿನ ಹೊರೆಗೆ ಹೆಚ್ಚುವರಿ ಸಂಭಾವನೆ ನೀಡಬೇಕು ಎನ್ನುವ ಆಗ್ರಹಕ್ಕೆ ಸರ್ಕಾರದಿಂದ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. 

ನೋಟಿಸ್‌ ಜಾರಿ: ಮಾತೃಪೂರ್ಣ ಯೋಜನೆಯ ಕಾರ್ಯಕ್ಕೆ ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಿಕೊಳ್ಳುವಂತೆ ಸೂಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಯೋಜನೆ ಜಾರಿಗೊಳಿಸಲು ಹೊರಟಿರುವ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘ, ಮಂಗಳೂರು ನಗರ ಹಾಗೂ ಗ್ರಾಮಾಂತರ ಅಂಗನವಾಡಿ ಕಾರ್ಯಕರ್ತೆಯರ ಸಂಘ ಸೇರಿ 28 ಮಂದಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಯ ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ನಿರ್ದೇಶಕರು, ಉಪನಿರ್ದೇಶಕರು ಸೇರಿದಂತೆ ಹಲವರಿಗೆ ನೋಟಿಸ್‌ ಜಾರಿ ಮಾಡಿದೆ. ಯೋಜನೆ ಕಾರ್ಯವಿಧಾನ, ಮಾರ್ಗಸೂಚಿಗಳನ್ನೊಳಗೊಂಡ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ. 

ಯೋಜನೆ ಜಾರಿಗೆ ಸರ್ಕಾರ ತರಾತುರಿಯಲ್ಲಿ ಈಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಪಾತ್ರೆಗಳು, ಸಿಲಿಂಡರ್‌, ಸ್ಟೌಟ್‌ಗಳ ಖರೀದಿ ಮಾಡುತ್ತಿದ್ದು, ಹಣ ದೋಚುವ ಕಾರ್ಯಕ್ರಮ ಇದಾಗಿದೆ. ಫ‌ಲಾನುಭವಿಗಳಿಗೆ ಆಹಾರ ಒದಗಿಸುವ ಮತ್ತು ಯೋಜನೆ ಯಶಸ್ವಿ ಮಾಡುವ ಕುರಿತು ಇದುವರೆಗೂ ಒಂದು ಸಮೀಕ್ಷೆಯನ್ನೂ ಮಾಡಿಲ್ಲ. ಇದೆಲ್ಲಾ ಚುನಾವಣೆ ಗಿಮಿಕ್‌.
-ಜಿ.ಆರ್‌.ಶಿವಶಂಕರ್‌, ಅಧ್ಯಕ್ಷ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ

ಮಾತೃಪೂರ್ಣ ಯೋಜನೆಗೆ ನಮ್ಮ ವಿರೋಧವೇನಿಲ್ಲ. ಅಂಗನವಾಡಿ ಕೇಂದ್ರಗಳಲ್ಲಿ ಅಡುಗೆ ತಯಾರಿಸಲು ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಈಗಿರುವ ಸಿಬ್ಬಂದಿ ಜತೆಗೆ ಅಡುಗೆ ತಯಾರಿಕೆಗೆ ಮತ್ತೂಬ್ಬ ಸಹಾಯಕರನ್ನು ಒದಗಿಸಬೇಕು. ಒಂದು ವೇಳೆ ಫ‌ಲಾನುಭವಿಗಳ ಆರೋಗ್ಯದಲ್ಲಿ ಏರುಪೇರಾದರೆ ಅಂಗನವಾಡಿ ಊಟದಿಂದ ಆಗಿದೆಯೆಂಬ ಆರೋಪ ವಹಿಸಿದೇ, ಇಲಾಖೆಯೇ ಅದರ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು. ನಮ್ಮನ್ನು ಹೊಣೆ ಮಾಡಬಾರದು.
-ಎಸ್‌.ವರಲಕ್ಷ್ಮಿ, ಅಧ್ಯಕ್ಷೆ, ರಾಜ್ಯ ಅಂಗನವಾಡಿ ನೌಕರರ ಸಂಘ

* ಸಂಪತ್‌ ತರೀಕೆರೆ

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.