ಉದ್ಯಮಿಗಳಿಗೆ ಮುಕ್ತ ಸ್ವಾತಂತ್ರ್ಯ ಅಗತ್ಯ
Team Udayavani, Jul 2, 2019, 3:06 AM IST
ಬೆಂಗಳೂರು: ಉದ್ಯಮಿಗಳಿಗೆ ಮುಕ್ತ ಸ್ವಾತಂತ್ರ್ಯ, ತೆರಿಗೆ ಸಂಗ್ರಹ ವಿಧಾನ ಇನ್ನಷ್ಟು ಸರಳ ಹಾಗೂ ಸಂಗ್ರಹಿಸಿದ ತೆರಿಗೆಯನ್ನು ದಕ್ಷತೆಯಿಂದ ಬಳಕೆಯಾಗುವಂತೆ ನೋಡಿಕೊಳ್ಳುವ ಸವಾಲುಗಳನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಹೇಳಿದರು.
ಜಿಎಸ್‌ಟಿ ಜಾರಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರೀಯ ತೆರಿಗೆ (ಜಿಎಸ್‌ಟಿ) ಪ್ರಧಾನ ಮುಖ್ಯ ಆಯುಕ್ತರ ಕಚೇರಿಯು ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಎಸ್‌ಟಿ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಉದ್ಯಮಗಳಿಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರಗಳು ಹಲವು ಅನುಮತಿ ನೀಡಿಕೆ ವಿಚಾರದಲ್ಲಿ ತಮ್ಮ ಕಿರುಕುಳ ಮುಂದುವರಿಸಿದ್ದು, ಇದನ್ನು ನಿವಾರಿಸಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.
ಈ ಹಿಂದೆ ಅಂದರೆ 1973ರಲ್ಲೇ ಬ್ರಿಟನ್ನಿನಲ್ಲಿ ವ್ಯಾಟ್ ತೆರಿಗೆ ವ್ಯವಸ್ಥೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿತ್ತು. ದೇಶದಲ್ಲಿ 43 ವರ್ಷಗಳ ನಂತರ ಜಿಎಸ್‌ಟಿ ವ್ಯವಸ್ಥೆ ಜಾರಿಗೆ ಬಂದಿದ್ದು, ಅದರ ಅನುಷ್ಠಾನದಲ್ಲಿ ಕೇಂದ್ರ ಸರ್ಕಾರ ತನ್ನ ಬದ್ಧತೆ ತೋರಿಸಿದೆ. ರಾಜ್ಯ ಸರ್ಕಾರಗಳು ಇದಕ್ಕೆ ಸಹಕಾರ ನೀಡಿವೆ. 300 ವರ್ಷಗಳಿಂದ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಸಿಗದ ಗೌರವ ಈಗ ದೊರಕಿದೆ.
ಇದೇ ಅವಕಾಶ ಬಳಸಿಕೊಂಡು ದೇಶದ ಬಡತನವನ್ನು ನಿವಾರಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ನಡೆಯಬೇಕಿದೆ. ಇದಕ್ಕೆ ಎಲ್ಲರೂ ಶಕ್ತಿ ಮೀರಿ ಶ್ರಮಿಸಬೇಕು. ವೈಯಕ್ತಿಕ ಸುಖವನ್ನು ಬದಿಗೊತ್ತಿ, ದೇಶದ ಅಭಿವೃದ್ಧಿ ದೃಷ್ಟಿಯಿಂದ ದುಡಿಯುವ ಮನೋಭಾವನೆ ಮೂಡಬೇಕು ಎಂದು ಅಭಿಪ್ರಾಯಪಟ್ಟರು.
ಸೆಲ್ಕೊ ಕಂಪೆನಿ ಸಹ ಸ್ಥಾಪಕ ಹರೀಶ್ ಹಂದೆ, ಗ್ರಾಮೀಣ ಭಾರತವು ಉದ್ಯಮವನ್ನು ಮುನ್ನಡೆಸುವ ಹಂತಕ್ಕೆ ಬರಬೇಕು ಹಾಗೂ ಗ್ರಾಮೀಣ ಕೌಶಲ್ಯಕ್ಕೆ ಪ್ರೋತ್ಸಾಹ ಸಿಗಬೇಕು. ಆಫ್ರಿಕಾ, ಲ್ಯಾಟಿನ್ ಅಮೆರಿಕ ಸೇರಿದಂತೆ ಹಲವು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಮುಂದೆ ಭಾರತವೇ ದೊಡ್ಡ ಮಾರುಕಟ್ಟೆ ಒದಗಿಸಲು ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ಹೇಳಿದರು.
ಕೇಂದ್ರ ತೆರಿಗೆ ಇಲಾಖೆ ಬೆಂಗಳೂರು ವಲಯದ ಪ್ರಧಾನ ಮುಖ್ಯ ಆಯುಕ್ತ ಡಿ.ಪಿ.ನಾಗೇಂದ್ರ ಕುಮಾರ್, ಮುಂದಿನ ಅಕ್ಟೋಬರ್ 1ರಿಂದ ಎರಡನೇ ಹಂತದ ಜಿಎಸ್‌ಟಿ ಜಾರಿಗೆ ಬರಲಿದ್ದು, ಬಳಿಕ ಜಿಎಸ್‌ಟಿ ಇನ್ನಷ್ಟು ಸರಳವಾಗಿರಲಿದೆ ಎಂದು ತಿಳಿಸಿದರು.
ಆದಾಯ ತೆರಿಗೆ ಇಲಾಖೆ (ಕರ್ನಾಟಕ ಮತ್ತು ಗೋವಾ ವಲಯ) ಪ್ರಧಾನ ಮುಖ್ಯ ಆಯುಕ್ತ ಬಿ.ಆರ್.ಬಾಲಕೃಷ್ಣನ್, ಕೇಂದ್ರೀಯ ತೆರಿಗೆ ಬೆಂಗಳೂರು ವಲಯದ ಮುಖ್ಯ ಆಯುಕ್ತ ಎ.ಕೆ.ಜ್ಯೋತಿಷಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.