ನೆಗೆಟಿವ್‌ ಇದ್ದರಷ್ಟೇ ಎಂಟ್ರಿ

ಏರ್‌ಶೋ ಪ್ರವೇಶಕ್ಕೆ ಕೋವಿಡ್‌ ಪರೀಕ್ಷೆ ಕಡ್ಡಾಯ

Team Udayavani, Jan 23, 2021, 11:44 AM IST

Entry is just as covid negative

ಬೆಂಗಳೂರು: ನಗರದ ಯಲಹಂಕ ವಾಯುನೆಲೆ ಯಲ್ಲಿ ಫೆ.3ರಿಂದ 5ರವರೆಗೆ ನಡೆಯಲಿರುವ ಏರೋ ಶೋ ಪ್ರದರ್ಶನಕ್ಕೆ ಸಿದ್ಧತೆಗಳು ಭರದಿಂದ ಸಾಗಿದೆ. ಜಾಗತಿಕ ಮಹಾಮಾರಿ ಕೋವಿಡ್‌-19 ಸಂದರ್ಭದಲ್ಲಿ ನಡೆಯುತ್ತಿರುವ ವಿಶ್ವದ ಮೊದಲ ವೈಮಾನಿಕ ಪ್ರದರ್ಶನ ಮೇಳ ಇದಾಗಿದ್ದು ಭಾಗಿಯಾಗುವ ಎಲ್ಲರಿಗೂ ಕೋವಿಡ್‌ ಪರೀಕ್ಷೆ ಕಡ್ಡಾಯವಾಗಿದೆ. ಏರ್‌ಶೋ ವೀಕ್ಷಣೆಗೆ ಬರುವ 72 ಗಂಟೆಗೂ ಹಿಂದಿನ ಆರ್‌ಟಿಪಿಸಿಆರ್‌ ಪರೀಕ್ಷಾ ವರದಿ ತೋರಿಸಿ, ಪ್ರವೇಶ ಪಡೆಯಬೇಕು ಎಂದು ಭಾರತೀಯ ವಾಯುಪಡೆಯ ಏರ್‌ ಕಮಾಡರ್‌ ಶೈಲೇಂದ್ರ ಸೂದ್‌ ಶುಕ್ರವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾಹಿತಿ ನೀಡಿದ್ದಾರೆ.

ಕೋವಿಡ್‌ ಹಾವಳಿ ಇರುವುದರಿಂದ ಸಾಧ್ಯವಾದಷ್ಟು ಭಾಗವಹಿಸುವವರ ಸಂಖ್ಯೆಯನ್ನು ತಗ್ಗಿಸಲಾಗುತ್ತಿದೆ. ಸಾಮಾನ್ಯವಾಗಿ 4ರಿಂದ 5 ದಿನಗಳು ನಡೆಯುತ್ತಿದ್ದ ಪ್ರದರ್ಶನವನ್ನು ಮೂರು ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅಲ್ಲದೆ, ಒಂದು ದಿನಕ್ಕೆ ಒಟ್ಟಾರೆ 15 ಸಾವಿರ ಜನ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ 3 ಸಾವಿರ ಜನರಿಗೆ ಮಾತ್ರ ವೈಮಾನಿಕ ಪ್ರದರ್ಶನ ವೀಕ್ಷಣಾ ಪ್ರದೇಶ (ಎಡಿವಿಎ)ದಲ್ಲಿ ಪ್ರವೇಶ ಕಲ್ಪಿಸಲಾಗುತ್ತಿದೆ ಎಂದರು. ಪ್ರದರ್ಶನದಲ್ಲಿ ನಾಲ್ಕು ತುರ್ತು ವೈದ್ಯಕೀಯ ತಂಡಗಳನ್ನು ರಚಿಸಿದ್ದು, ಇದರಲ್ಲಿ 26 ವೈದ್ಯರು, 46 ವೈದ್ಯಕೀಯ ಸಿಬ್ಬಂದಿ, 5 ಆ್ಯಂಬುಲನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಜತೆಗೆ 14 ಸರ್ಕಾರಿ ಮತ್ತು 48 ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಹೆಲಿಕಾಪ್ಟರ್‌ಗಳನ್ನೂ ಇದಕ್ಕಾಗಿ ಮೀಸಲಿಡಲಾಗಿದೆ ಎಂದರು.

ಆದರೆ, ಇದಕ್ಕಾಗಿ ಭಾರತೀಯ ವಾಯು ಪಡೆ ಎಲ್ಲ ಅಗತ್ಯ ಸಿದ್ಧತೆ ಗಳನ್ನೂ ಮಾಡಿ ಕೊಂಡಿದೆ. ಮೊದಲ ಬಾರಿಗೆ ಹೈಬ್ರಿಡ್‌ ಪ್ರದರ್ಶನ ನಡೆಯುತ್ತಿದ್ದು, ಹಿಂದೆಂದಿಗಿಂತ ಹೆಚ್ಚು ಜನ ಆನ್‌ಲೈನ್‌ ಮೂಲಕ ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕೋವಿಡ್‌ ಹಾವಳಿ ಹಿನ್ನೆಲೆಯಲ್ಲಿ ಆರು ತಿಂಗಳು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರದರ್ಶನದಲ್ಲಿ ವಿದೇಶಿ ಏರೋಬಾಟಿಕ್‌ ತಂಡಗಳು, ಯುದ್ಧವಿಮಾನಗಳ ಭಾಗವಹಿಸಲು ಈಗಲೂ ನೋಂದಣಿಗೆ ಮುಕ್ತ ಅವಕಾಶ ಇದೆ. ತಿಂಗಳಾಂತ್ಯಕ್ಕೆ ಎಷ್ಟು ತಂಡಗಳು ಭಾಗವಹಿಸಲಿವೆ ಎಂಬುದರ ಸ್ಪಷ್ಟಚಿತ್ರ  ತಿಳಿಯಲಿದೆ. ಪ್ರಸ್ತುತ ಫ್ರಾನ್ಸ್‌, ಅಮೆರಿಕ ಸೇರಿದಂತ ಹಲವು ದೇಶಗಳಿಂದ ನೋಂದಣಿ ಮಾಡಿಕೊಂಡಿವೆ ಎಂದು ಹೇಳಿದರು.

ಇದನ್ನೂ ಓದಿ:ಸ್ಪೋಟಕ ಸಾಗಿಸುವವರನ್ನು ಬಿಟ್ಟು, ಮರಳು ತುಂಬಿದ ಗಾಡಿ ಮಾತ್ರ ವಶಪಡೆಯುತ್ತಾರೆ: ಖಾದರ್ ಆಕ್ರೋಶ

ಡ್ರೋಣ್‌ ನಿಷಿದ್ಧ

ವಿಮಾನಗಳ ಕಸರತ್ತು ಹಾಗೂ ಪ್ರದರ್ಶನದ ಹಿನ್ನೆಲೆಯಲ್ಲಿ ಜ. 24ರಿಂದ ಫೆ. 5ರವರೆಗೆ ಯಲಹಂಕ ವಾಯುನೆಲೆ ಸುತ್ತಲಿನ ಪ್ರದೇಶದಲ್ಲಿ ಡ್ರೋಣ್‌ ಹಾರಾಟ ನಿಷೇಧಿಸಲಾಗಿದೆ. ಅದೇ ರೀತಿ, ಹದ್ದು ಮತ್ತಿತರ ಪಕ್ಷಿಗಳ ಅಡತಡೆಯನ್ನು ತಪ್ಪಿಸಲು ವಾಯುನೆಲೆ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಈಗಾಗಲೇ ಮಾಂಸ ಮತ್ತು ಮೀನು ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಫೆ. 7ರವರೆಗೂ ಈ ನಿಯಮ ಜಾರಿಯಲ್ಲಿರಲಿದೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.