ಪರಿಸರಕ್ಕಾಗುವ ಪರಿಣಾಮ ಪರಿಶೀಲನೆ
Team Udayavani, Jul 31, 2018, 11:03 AM IST
ಬೆಂಗಳೂರು: ನಗರದ ಸಂಚಾರ ದಟ್ಟಣೆ ತಗ್ಗಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿರುವ 102 ಕಿ.ಮೀ ಉದ್ದದ “ಎಲೆವೇಟೆಡ್ ಕಾರಿಡಾರ್’ ಯೋಜನೆಯ “ಪರಿಸರ ಪರಿಣಾಮ ಹಾಗೂ ಮೌಲ್ಯಮಾಪನ ವರದಿ’ ಸಿದ್ಧಪಡಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯೋಜನೆ ಕುರಿತು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಪ್ರಸ್ತುತಪಡಿಸಿದ “ವಿಸ್ತೃತ ಸಂಭವನೀಯ ವರದಿ’ಯನ್ನು (ಡಿಟೇಲ್ಡ್ μಸಿಬಿಲಿಟಿ ರಿಪೋರ್ಟ್) ಅವಲೋಕಿಸಿದ ಮುಖ್ಯಮಂತ್ರಿಯವರು, ಯೋ ಜನೆ ಜಾರಿಗೆ ತರಬೇಕಾದರೆ ಪರಿಸರಕ್ಕೆ ಸಂಬಂಧಿಸಿದ ವಿಷಯಗಳ ಕಾರಣಕ್ಕೆ ಕೆಲವೊಂದು ಸಂದೇಹಗಳು, ಗೊಂದಲಗಳು ಉಂಟಾಗಿ ವಿರೋಧ ವ್ಯಕ್ತವಾಗುವ ಸಾಧ್ಯತೆಗಳನ್ನು ಅಲ್ಲಗಳೆಯಲು ಆಗುವುದಿಲ್ಲ. ಹಾಗಾಗಿ ಯೋಜನೆ ಬಗ್ಗೆ ಪರಿಸರ ಪರಿಣಾಮ ಹಾಗೂ ಮೌಲ್ಯಮಾಪನ ವರದಿ ಸಿದ್ಧಪಡಿಸಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರು. ತಮ್ಮ ಬಜೆಟ್‌ನಲ್ಲಿ ಕುಮಾರಸ್ವಾಮಿ ಈ ಯೋಜನೆ ಘೋಷಣೆ ಮಾಡಿದ್ದರು.
ಬೆಂಗಳೂರಿನ ವಾಹನ ದಟ್ಟಣೆಯನ್ನು ಸುಗಮಗೊಳಿಸಲು, ಪ್ರಯಾಣದ ಸಮಯವನ್ನು ಕಡಿತಗೊಳಿಸಲು ಹಾಗೂ ಇಂಗಾಲ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ ಮೂರು ಎಲಿವೆಟೆಡ್ ಕಾರಿಡಾರ್ ಹಾಗೂ 3 ಸಂಪರ್ಕ ಕಾರಿಡಾರ್ ಸೇರಿ ಒಟ್ಟು 102. 04 ಕಿ.ಮೀ ಉದ್ದದ 6 ಕಾರಿಡಾರ್‌ಗಳನ್ನು ನಿರ್ಮಿಸುವ ಯೋಜನೆ ಇದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಏಕಾಂ, ಡೆಲಾಯಿಟ… ಹಾಗೂ ಇರ್ನ್ಪ್ರಸಪೋರ್ಟ್ ಸಂಸ್ಥೆಗಳ ಸಹಯೋಗದೊಂದಿಗೆ ವಿಸ್ತೃತ ಸಂಭವನೀಯ ವರದಿ’ ಸಿದ್ಧಪಡಿಸಲಾಗಿದೆ.
ವೇಗವಾಗಿ ಬೇಳೆಯುತ್ತಿರುವ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಗೆ ಒತ್ತು ಕೊಡಬೇಕಾಗಿದೆ. ಆದರೆ, ಮೆಟ್ರೋ, ಬಿಎಂಟಿಸಿ, ಮೊನೊ ರೈಲು, ಕೇಬಲ್ ಕಾರ್ ಇಂತಹ ಯೋಜನೆಗಳಿಂದ ಒಂದಿಷ್ಟು
ಒತ್ತಡ ಕಡಿಮೆಯಾಗ ಬಹುದು. ಆದರೆ, ಇವುಗಳಿಂದ ಮಾತ್ರ ಸಂಚಾರ ಸುಗಮವಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಎಲಿವೆಟೆಡ್ ಕಾರಿಡಾರ್‌ನಂತ ಯೋಜನೆಗಳನ್ನೂ ಜಾರಿಗೆ ತರಬೇಕಾಗುತ್ತದೆ. ಮೆಟ್ರೋ 3ನೇ ಹಂತದ ಜೊತೆಗೆ ಅದಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗಳನ್ನು ಕಾರ್ಯಗತಗೊಳಿಸಿದಾಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲಿವೆಟೆಡ್ ಕಾರಿಡಾರ್ ಯೋಜನೆ ಬಗ್ಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಹಾಗೂ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಧಿಕಾರಿಗಳು ಉಪಸ್ಥಿತರಿದ್ದರು.
ರೇವಣ್ಣ ಉಪಸ್ಥಿತಿ; ಸಿಎಂ ಸಮಜಾಯಿಷಿ ಎಲಿವೇಟೆಡ್ ಕಾರಿಡಾರ್ ಯೋಜನೆ ಸಂಬಂಧಿತ ಸಭೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಹ ಉಪಸ್ಥಿತರಿದ್ದರು. ಇದಕ್ಕೆ ಸಮಜಾಯಿಷಿ ನೀಡಿದ ಮುಖ್ಯಮಂತ್ರಿ ಎಚ್‌ಡಿಕೆ, ಈ ಯೋಜನೆ ಲೋಕೋಪಯೋಗಿ ಇಲಾಖೆ ವ್ಯಾಪಿಗೆ ಬರಲಿದೆ, ಹೀಗಾಗಿ ರೇವಣ್ಣ ಬಂದಿದ್ದಾರೆ. ಮಾಧ್ಯಮದವರು, ಬೆಂಗಳೂರು ಅಭಿವೃದ್ಧಿಯನ್ನು ರೇವಣ್ಣ ಅವರು ಹೈಜಾಕ್ ಮಾಡುತ್ತಿದ್ದಾರೆ ಎಂದು ಬಿಂಬಿಸಬೇಡಿ ಎಂದು ಚಟಾಕಿ ಹಾರಿಸಿದರು.
14 ವರ್ಷಗಳಿಂದ ಪ್ರಸ್ತಾವನೆಯಲ್ಲಿರುವ ಎಲಿವೆಟೆಡ್ ಕಾರಿಡಾರ್ ಯೋಜನೆ ಬಗ್ಗೆ ಇಂದು ಪ್ರಾಥಮಿಕ ಚರ್ಚೆ ನಡೆಸಿದ್ದೇವೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಯೋಜನೆ ಕಾರ್ಯಗತ ಗೊಳಿಸಲಾಗುವುದು. ಒಂದೊಮ್ಮೆ
ಜನ, ಯೋಜನೆ ಬೇಡ, ನಾವು ಟ್ರಾಫಿಕ್‌ನಲ್ಲೇ ಓಡಾಡುತ್ತೇವೆ ಎಂದರೆ ನಾವೇನೂ ಮಾಡಲಾಗುವುದಿಲ್ಲ.
ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.