ಮೇಯರ್‌, ಶಾಸಕಿಯಿಂದ ಪರಿಸರ ಪಾಠ


Team Udayavani, Aug 25, 2019, 3:05 AM IST

meyor

ಬೆಂಗಳೂರು: ಅಲ್ಲಿ ಮೇಯರ್‌ ಗಂಗಾಂಬಿಕೆ ಮತ್ತು ಶಾಸಕಿ ಸೌಮ್ಯಾ ರೆಡ್ಡಿ ಕೆಲ ಹೊತ್ತು ಶಿಕ್ಷಕಿಯರಾಗಿದ್ದರು. ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಗಣಪ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಪ್ರಶ್ನೆ ಕೇಳಿದರು. ಬಾಂಧವ ಸಂಸ್ಥೆ, ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನ ಸಮೀಪ ಶನಿವಾರ ಹಮ್ಮಿಕೊಂಡಿದ್ದ “ಮಣ್ಣಿನ ಗಣೇಶ ಬಳಕೆ’ ಕುರಿತ ಜಾಗೃತಿ ರ್ಯಾಲಿಯಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಜತೆ ಮೇಯರ್‌ ಹಾಗೂ ಶಾಸಕಿ ಭಾಗವಹಿಸಿದ್ದರು.

ಈ ವೇಳೆ ಮೇಯರ್‌ ಗಂಗಾಂಬಿಕೆ ಮತ್ತು ಶಾಸಕಿ ಸೌಮ್ಯಾ ರೆಡ್ಡಿ, ಪಿಒಪಿ ಗಣಪತಿ ಬಳಕೆಯಿಂದ ನೀರಿನ ಮೂಲಗಳು ಹೇಗೆ ಮಲಿನವಾಗಲಿವೆ, ಬಣ್ಣದ ಗಣಪತಿ ಬಳಕೆ ಪರಿಸರದ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬ ಪ್ರಶ್ನೆಗಳನ್ನು ವಿದ್ಯಾರ್ಥಿಗಳಿಗೆ ಕೇಳಿದರು. ವಿದ್ಯಾರ್ಥಿಗಳು ಚುಟುಕಾಗಿ ಉತ್ತರಿಸಿದರು.

ಮಣ್ಣಿನ ಮೂರ್ತಿ ಬಳಸಿ: ಮೇಯರ್‌ ಗಂಗಾಂಬಿಕೆ ಮಾತನಾಡಿ, ಪಿಒಪಿ ಗಣಪನ ಮೂರ್ತಿ ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣಪನನ್ನು ಬಳಸುವ ಮೂಲಕ ನಗರದ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಸಹಕರಿಸಬೇಕು. ಬಾಂಧವ ಸಂಸ್ಥೆ ಕಳೆದ ಐದು ವರ್ಷಗಳಿಂದ ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣಪತಿ ಮೂರ್ತಿ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದೆ. ಪಾಲಿಕೆ ಎಲ್ಲಾ ಸದಸ್ಯರು ಇಂತಹ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದರು.

ಪಿಒಪಿಯಿಂದ ಜಲಚರಗಳ ಸಾವು: ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಪಿಒಪಿ ಗಣಪನ ಮೂರ್ತಿಯನ್ನು ನೀರಿಗೆ ಬಿಡುವುದರಿಂದ ದಕ್ಕೆ ಬಳಸಿದ ರಾಸಾಯನಿಕ ಬಣ್ಣಗಳು ನೀರಿನ ಮೂಲಗಳಲ್ಲಿ ಬೆರೆತು ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಪಿಒಪಿ ಮೂರ್ತಿಗಳು ನೀರಲ್ಲಿ ಕರಗುವುದಿಲ್ಲ. ಹೀಗಾಗಿ ಮಣ್ಣಿನ ಗಣಪ ಬಳಸುವಂತೆ ಮನವಿ ಮಾಡಿದರು. ಬಾಂಧವ ಸಂಸ್ಥೆಯಿಂದ ಈ ಬಾರಿ ಸಾರ್ವಜನಿಕರಿಗೆ 5 ಸಾವಿರ ಮಣ್ಣಿನ ಗಣಪತಿ ಮೂರ್ತಿಗಳನ್ನು ಉಚಿತವಾಗಿ ನೀಡುವುದಾಗಿ ಪಾಲಿಕೆ ಸದಸ್ಯ ಎನ್‌.ನಾಗರಾಜ್‌ ಹೇಳಿದರು.

ಮಕ್ಕಳಿಂದ ಜಾಗೃತಿ ಜಾಥಾ: ಭೈರಸಂದ್ರ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಸರ್ವೋದಯ ಶಾಲೆಯ ಮಕ್ಕಳು ಸೇರಿದಂತೆ ಹಲವು ಶಾಲೆಗಳ ವಿದ್ಯಾರ್ಥಿಗಳು ಬಿತ್ತಿಪತ್ರ ಹಿಡಿದು ಪರಿಸರ ಗಣಪತಿ ಬಳಕೆ ಕುರಿತ ಜಾಗೃತಿ ಜಾಥದಲ್ಲಿ ಭಾಗವಹಿಸಿದ್ದರು. ಜಯನಗರದ 4ನೇ ಹಂತದ ಕೆಲವು ರಸ್ತೆಗಳಲ್ಲಿ ವಿದ್ಯಾರ್ಥಿಗಳು ಮಣ್ಣಿನ ಗಣೇಶ ಮೂರ್ತಿ ಹಿಡಿದು ಜನರಲ್ಲಿ ಅರಿವು ಮೂಡಿಸಿದರು.

ಟಾಪ್ ನ್ಯೂಸ್

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.