ಪ್ರಿಯಕರನ ಮೇಲೆ ಆ್ಯಸಿಡ್ ಎರಚಿದ್ದ ಯುವತಿಗೆ 15 ದಿನ ನ್ಯಾಯಾಂಗ ಬಂಧನ
Team Udayavani, Jan 21, 2017, 12:02 PM IST
ಬೆಂಗಳೂರು: ಪ್ರಿಯಕರನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಪ್ರಕರಣದ ಆರೋಪಿ ಲಿಡಿಯಾಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಯುವತಿ ಜ.16ರಂದು ಜಯಕುಮಾರ್ ಮೇಲೆ ಆ್ಯಸಿಡ್ ದಾಳಿ ನಡೆಸಿ, ಬ್ಲೇಡ್ನಿಂದ ಮುಖಕ್ಕೆ ಹಲ್ಲೆ ನಡೆಸಿದ್ದಳು.
ಈ ವೇಳೆ ಜಯಕುಮಾರ್ ಮತ್ತು ಆತನ ಸ್ನೇಹಿತ ಪದ್ಮನಾಭ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದರು. ಆಕೆಯ ವಿರುದ್ಧ ಪ್ರಕರಣ ದಾಖಲಿಸಿದ್ದ ವಿಜಯನಗರ ಪೊಲೀಸರು, ಆರೋಪಿಯನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ವಶಕ್ಕೆ ಪಡೆದಿದ್ದರು.
ಕಸ್ಟಡಿ ಅವಧಿ ಶುಕ್ರವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆಕೆಯನ್ನು ನ್ಯಾಯಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಇನ್ನು ಪ್ರಿಯಕರನ ಮೇಲೆ ಉದ್ದೇಶ ಪೂರ್ವಕವಾಗಿ ಆ್ಯಸಿಡ್ ಹಾಕಲು ಯತ್ನಿಸಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಲಿಡಿಯಾ ಮತ್ತು ಜಯಕುಮಾರ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆರು ತಿಂಗಳ ಹಿಂದೆ ಮದುವೆಯಾಗುವಂತೆ ಆತನನ್ನು ಕೇಳಿದಾಗ ಆತನ ನಿರಾಕರಿಸಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಈ ದ್ವೇಷದಿಂದ ಲಿಡಿಯಾ, ಪ್ರಿಯಕರ ಜಯಕುಮಾರ್ ಮೇಲೆ ಜ.16ರಂದು ಆ್ಯಸಿಡ್ ದಾಳಿ ನಡೆಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.