ವಕೀಲರ ವಿರುದ್ಧ ಈಶ್ವರಪ್ಪ ದೂರು
Team Udayavani, Jul 11, 2017, 11:19 AM IST
ಬೆಂಗಳೂರು: ಸಾಕ್ಷ್ಯಾಧಾರ ರಹಿತ ಆರೋಪಗಳನ್ನು ಮಾಡುವುದರೊಂದಿಗೆ ಮಾನಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ವಕೀಲ ಬಿ.ವಿನೋದ್ ಎಂಬುವವರ ವಿರುದ್ಧ ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಸೋಮವಾರ ನಗರದ 5ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ.
ಹಣ ಕೊಡದ ಕಾರಣಕ್ಕಾಗಿ ಬ್ಲ್ಯಾಕ್‌ವೆುàಲ್ ತಂತ್ರ ಅನುಸರಿಸಿರುವ ವಿನೋದ್, ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ತಮ್ಮ ವಿರುದ್ಧ ಹಲವು ವರ್ಷಗಳಿಂದ ನಿರಾಧಾರ ಆರೋಪಗಳನ್ನು ಮಾಡುತ್ತಿದ್ದು ತೇಜೋವಧೆಗೆ ಯತ್ನಿಸುತ್ತಿದ್ದಾರೆ.
ಅಲ್ಲದೆ ಇತ್ತೀಚೆಗೆ ಖಾಸಗಿ ವಾಹಿನಿಯೊಂದರಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಎಚ್‌ಎಸ್‌ಆರ್‌ಲೇಔಟ್‌ನಲ್ಲಿ ಬಿಡಿಎ ವತಿಯಿಂದ ಸಂಬಂಧಿಕರಿಗೆ ಸೈಟ್‌ಗಳನ್ನು ಕೊಡಿಸಿದ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮ ವ್ಯಕ್ತಿತ್ವಕ್ಕೆ ಚ್ಯುತಿ ತರಲು ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಈ ನಿಟ್ಟಿನಲ್ಲಿ ಆರೋಪಿತ ವಿನೋದ್ ವಿರುದ್ಧ ಐಪಿಸಿ ಕಲಂ 383, 384, ಹಾಗೂ ಮಾನನಷ್ಟ ಮೊಕದ್ದಮೆ ಐಪಿಸಿ ಕಲಂ 499,500, 5001ರ ಅನ್ವಯ ಕ್ರಮಕ್ಕೆ ಆದೇಶಿಸಬೇಕು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.