ಕಂದಾಯ ವಿಭಾಗ ಬದಲು ಆಯುಕ್ತಾಲಯ ಸ್ಥಾಪನೆ
Team Udayavani, Jul 7, 2017, 3:45 AM IST
ಬೆಂಗಳೂರು: ಪ್ರಸ್ತುತ ಇರುವ ಕಂದಾಯ ವಿಭಾಗಗಳ ಬದಲು ಆಯುಕ್ತಾಲಯ ಸ್ಥಾಪಿಸಲು ಹಾಗೂ ಪ್ರಾದೇಶಿಕ ಆಯುಕ್ತರ ಹುದ್ದೆಗಳನ್ನು ರದ್ದುಪಡಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಅರಮನೆ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ
ಕಂದಾಯ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಕಂದಾಯ ನೌಕರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. “ಈ ಹಿಂದೆ ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿ ನಾನು ಉಪಮುಖ್ಯಮಂತ್ರಿಯಾಗಿದ್ದಾಗ ಕಂದಾಯ ವಿಭಾಗ ತೆಗೆದು ಹಾಕುವಂತೆ ಶಿಫಾರಸು ಮಾಡಿದ್ದೆ. ಆದರೆ ಆಗಿರಲಿಲ್ಲ.
ಇದೀಗ ಕಂದಾಯ ಇಲಾಖಾ ನೌಕರರ ಸಂಘದವರು ಮತ್ತೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ, ಕಂದಾಯ ವಿಭಾಗ ಹಾಗೂ ಪ್ರಾದೇಶಿಕ ಆಯುಕ್ತರ ಹುದ್ದೆ ರದ್ದುಪಡಿಸುವ ಬಗ್ಗೆ ಪರಿಶೀಲಿಸಲಾಗುವುದು. ರಾಜ್ಯದಲ್ಲಿ ಸದ್ಯ ನಾಲ್ಕು ಕಂದಾಯ
ವಿಭಾಗಗಳು, ಅದಕ್ಕೊಬ್ಬ ಪ್ರಾದೇಶಿಕ ಆಯುಕ್ತರು ಇದ್ದು ಈ ವ್ಯವಸ್ಥೆಯಿಂದ ಕಾರ್ಯಕ್ರಮಗಳ ಅನುಷ್ಠಾನ, ವರ್ಗಾವಣೆ
ಸೇರಿ ಕೆಲವು ಆಡಳಿತಾತ್ಮಕ ವಿಷಯಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಹೀಗಾಗಿ, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.