ಮಾದಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಸ್ತು
Team Udayavani, Mar 8, 2018, 6:25 AM IST
ಬೆಂಗಳೂರು: ರಾಜ್ಯದ ಮಾದಿಗ ಸಮುದಾಯದ ಅಭಿವೃದ್ಧಿಗೆ ಆರ್ಥಿಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು “ಡಾ. ಬಾಬು ಜಗಜೀವನರಾಮ್ ಅಭಿವೃದ್ಧಿ ನಿಗಮದ’ ಹೆಸರಲ್ಲಿ ಪ್ರತ್ಯೇಕ ಮಾದಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂಬ ಪ್ರಸ್ತಾವನೆಗೆ ಸರ್ಕಾರದ ಹಸಿರು ನಿಶಾನೆ ಸಿಕ್ಕಿದೆ.
ಬುಧವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಬೇಕೆಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈಗ ಅದಕ್ಕೆ ಸರ್ವಾನುಮತದ ಅನುಮತಿ ಸಿಕ್ಕಿದೆ.
ಈಗಾಗಲೇ ಭೋವಿ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ ಇದೆ. ಅದೇ ಮಾದರಿಯಲ್ಲಿ ಮಾದಿಗ ಸಮುದಾಯದ ಅಭಿವೃದ್ಧಿಗೆ ಡಾ. ಬಾಬು ಜಗಜೀವನರಾಮ್ ಅಭಿವೃದ್ದಿ ನಿಗಮ ಕೆಲಸ ಮಾಡಲಿದೆ. ಇದಕ್ಕೆ ಪ್ರತಿ ವರ್ಷ 500 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಎಂದರು.
ಒಳಮೀಸಲಾತಿ ಕುರಿತು ಕೆಲವರಲ್ಲಿ ಗೊಂದಲಗಳಿದ್ದು, ನಮ್ಮನ್ನು ಎಸ್ಟಿ ಪಟ್ಟಿಯಿಂದ ಕೈಬಿಡುತ್ತಾರೆ ಎಂದು ಭೋವಿ ಮತ್ತು
ಲಂಬಾಣಿ ಸಮುದಾಯ ಅನುಮಾನಗೊಂಡಿದ್ದಾರೆ. ಹಾಗೆ ಇಲ್ಲ ಎಂದು ನಾವು ಹೇಳಿದರೂ ನಂಬುತ್ತಿಲ್ಲ. ಈ ಬಗ್ಗೆ ಸಚಿವ
ಸಂಪುಟದ ಉಪಸಮಿತಿ ರಚಿಸುವ ಬಗ್ಗೆ ತೀರ್ಮಾನವಾಗಿದೆ. ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು.
– ಎಚ್. ಆಂಜನೇಯ, ಸಮಾಜ ಕಲ್ಯಾಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.