EV bike taxis: ಇನ್ಮುಂದೆ ಇವಿ ಬೈಕ್‌ ಟ್ಯಾಕ್ಸಿಗಿಲ್ಲ ಅವಕಾಶ


Team Udayavani, Mar 9, 2024, 11:35 AM IST

EV bike taxis: ಇನ್ಮುಂದೆ ಇವಿ ಬೈಕ್‌ ಟ್ಯಾಕ್ಸಿಗಿಲ್ಲ ಅವಕಾಶ

ಬೆಂಗಳೂರು: ಬೆಂಗಳೂರು ಹಾಗೂ ಮೈಸೂರಿನಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸೇವೆಯನ್ನು ರದ್ದುಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಇದರೊಂದಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರು ನಿಟ್ಟುಸಿರುಬಿಟ್ಟಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಉದ್ದೇಶಿತ ಬೈಕ್‌ ಟ್ಯಾಕ್ಸಿ ಯೋಜನೆ ರದ್ದುಗೊಳಿಸಿರುವುದಕ್ಕೆ ಹಲವು ಕಾರಣಗಳನ್ನು ನೀಡಿದೆ. ಯೋಜನೆ ಹೆಸರಿನಲ್ಲಿ ದುರುಪಯೋಗ ಆಗುತ್ತಿದ್ದು, ಕೆಲವು ಖಾಸಗಿ ಆ್ಯಪ್‌ ಆಧಾರಿತ ಸಂಸ್ಥೆಗಳು, ಮೋಟಾರು ವಾಹನ ಕಾಯ್ದೆ ಮತ್ತು ಅದರಡಿ ರಚಿತವಾದ ನಿಯಮಗಳನ್ನು ಉಲ್ಲಂಘಿಸುತ್ತಿವೆ. ವಿಶೇಷವಾಗಿ ಸಾರಿಗೆಯೇತರ ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳನ್ನಾಗಿ ಉಪಯೋಗಿಸುತ್ತಿರುವುದು ಕಂಡುಬಂದಿದೆ. ಇದು ಸಾರಿಗೆ ನಿಯಮಗಳ ಸ್ಪಷ್ಟ ಉಲ್ಲಂಘನೆ ಆಗಿದೆ ಎಂದು ಉಲ್ಲೇಖೀಸಲಾಗಿದೆ.

ಇದಲ್ಲದೆ, 2021ರಲ್ಲಿ ಜಾರಿಗೊಳಿಸಲಾದ ಬೈಕ್‌ ಟ್ಯಾಕ್ಸಿ ಯೋಜನೆಯು ಆರಂಭದಿಂದಲೂ ಆಟೋ, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಚಾಲಕರು ಮತ್ತು ಬೈಕ್‌ ಟ್ಯಾಕ್ಸಿ ನಡುವೆ ಸಂಘರ್ಷಗಳಿಗೂ ಎಡೆಮಾಡಿಕೊಡುತ್ತಿದೆ. ಈ ಸಂಬಂಧ ಹಲವು ಪ್ರಕರಣಗಳು ಕೂಡ ದಾಖಲಾಗಿವೆ. ಜತೆಗೆ ಬೈಕ್‌ ಟ್ಯಾಕ್ಸಿಯು ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದನ್ನು ಕೂಡ ಇಲಾಖೆ ಗಮನಿಸಿದ್ದು, ಈ ಬಗ್ಗೆಯೂ ತನ್ನ ಆದೇಶದಲ್ಲಿ ಉಲ್ಲೇಖೀಸಿದೆ.

ಈ ಅಂಶಗಳನ್ನು ಗಮನಿಸಿ ವಿದ್ಯುತ್‌ಚಾಲಿತ ಬೈಕ್‌ ಟ್ಯಾಕ್ಸಿಗಳ ಸೇವೆ ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಸಾರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆ ಮತ್ತು ಪ್ರವರ್ತನ (ಎನ್ಫೋರ್ಸ್‌ಮೆಂಟ್‌) ಚಟುವಟಿಕೆಯ ಸಮರ್ಥ ಕಾರ್ಯನಿರ್ವಹಣೆಗೂ ಈ ಯೋಜನೆಯಿಂದ ಕಷ್ಟವಾಗುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಯ ಅಗತ್ಯತೆ ಮತ್ತು ಜಾರಿಯ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿ ವರದಿಯಲ್ಲಿ ಕೂಡ ಬೈಕ್‌ ಟ್ಯಾಕ್ಸಿ ಯೋಜನೆಗೆ ಸಂಬಂಧಿಸಿದಂತೆ ವರದಿಯು ಪೂರಕವಾಗಿರುವುದಿಲ್ಲ ಎಂದೂ ತಿಳಿಸಿದೆ.

“ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಲಾಗಿದ್ದ ಇ-ಬೈಕ್‌ ಟ್ಯಾಕ್ಸಿ ಯೋಜನೆ ಹೆಸರಿನಲ್ಲಿ ಹಲವು ರೀತಿಯ ದುರುಪಯೋಗಗಳು ಆಗುತ್ತಿವೆ. ಯೋಜನೆ ಇರುವುದು ವಿದ್ಯುತ್‌ಚಾಲಿತ ಬೈಕ್‌ಗಳ ಕಾರ್ಯಾಚರಣೆಗೆ ಮಾತ್ರ; ಆದರೆ, ಇತರೆ ದ್ವಿಚಕ್ರ ವಾಹನಗಳೂ ಕಾರ್ಯಾಚರಣೆ ಮಾಡುತ್ತಿವೆ. ಇದು ಕಾನೂನು-ಸುವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯೇ ಹಿಂದೆ ಹೊರಡಿಸಿದ್ದ ತನ್ನ ಆದೇಶವನ್ನು ರದ್ದುಗೊಳಿಸುವ ಮೂಲಕ ಬೈಕ್‌ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಇದರ ಬದಲಿಗೆ ಪ್ರಯಾಣಿಕರ ಅನಕೂಲಕ್ಕಾಗಿ ಸಾವಿರಕ್ಕೂ ಅಧಿಕ ವಿದ್ಯುತ್‌ ಚಾಲಿತ ಬಸ್‌ಗಳನ್ನು ರಸ್ತೆಗಿಳಿಸಲಾಗುತ್ತಿದೆ’ ಎಂದು ಸಾರಿಗೆ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಬಿಜೆಪಿ ಆಡಳಿತದಲ್ಲಿ ಜಾರಿಗೊಂಡಿದ್ದ ಯೋಜನೆ: ಎಲೆಕ್ಟ್ರಿಕ್‌ ಬೈಕ್‌ಗಳನ್ನು ಉತ್ತೇಜಿಸಲು ಹಾಗೂ ಮೊದಲ ಮತ್ತು ಕೊನೆಯ ಗಮ್ಯದ ನಡುವೆ ಸಂಪರ್ಕ (ಫ‌ಸ್ಟ್‌ ಆ್ಯಂಡ್‌ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ) ಕಲ್ಪಿಸುವ ಉದ್ದೇಶದಿಂದ 2021ರಲ್ಲಿ ಬಿಜೆಪಿ ಸರ್ಕಾರ ಈ ಯೋಜನೆ ಜಾರಿಗೊಳಿಸಿತ್ತು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುವುದರ ಜತೆಗೆ ಸಾಕಷ್ಟು ಯುವಕರಿಗೆ ಉದ್ಯೋಗ ಕೂಡ ಸೃಷ್ಟಿಯಾಗಿತ್ತು. ಇಲಾಖೆಯು ಈ ಬೈಕ್‌ ಟ್ಯಾಕ್ಸಿಗಳಿಗೆ ದರದ ಜತೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನೂ 10 ಕಿ. ಮೀ.ವರೆಗೆ ನಿಗದಿಪಡಿಸಿತ್ತು. ಇದರ ಬೆನ್ನಲ್ಲೇ ಯೋಜನೆ ದುರುಪಯೋಗದ ಬಗ್ಗೆ ವ್ಯಾಪಕ ಆರೋಪಗಳು ಕೂಡ ಕೇಳಿ ಬಂದಿದ್ದವು. ಇದಕ್ಕೆ ಪೂರಕವಾಗಿ ಇತ್ತೀಚಿನ ದಿನಗಳಲ್ಲಿ ರಸ್ತೆಗಿಳಿಯುತ್ತಿರುವ ದ್ವಿಚಕ್ರ ವಾಹನಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಬಂದಿದ್ದನ್ನು ಗಮನಿಸಬಹುದು. ಸಾಮಾನ್ಯವಾಗಿ ಈ ಬೈಕ್‌ ಸವಾರರು ಆ್ಯಪ್‌ ಆಧಾರಿತ ಸೇವೆಗಳಾದ ಒಲಾ, ರ್ಯಾಪಿಡೊದಂತಹ ಅಗ್ರಿಗೇಟರ್‌ ಕಂಪನಿಗಳೊಂದಿಗೆ ಲಿಂಕ್‌ ಮಾಡಿಕೊಂಡು, ಸೇವೆ ಸಲ್ಲಿಸುತ್ತಿದ್ದಾರೆ.

ಇ-ಬೈಕ್‌ ಟ್ಯಾಕ್ಸಿ ರದ್ದುಗೊಳಿಸಿದ ಸಾರಿಗೆ ಇಲಾಖೆ ಕ್ರಮ ಸ್ವಾಗತಾರ್ಹ. ಈ ಮೂಲಕ ಸರ್ಕಾರವು ಆಟೋ, ಟ್ಯಾಕ್ಸಿ ಚಾಲಕರ ಪರವಾಗಿ ನಿಂತಿದೆ. ಇದಕ್ಕಾಗಿ ಚಾಲಕರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳು. ತನ್ವೀರ್‌ ಪಾಷ, ಒಲಾ-ಉಬರ್‌ ಟ್ಯಾಕ್ಸಿ ಚಾಲಕರ ಸಂಘ

ಟಾಪ್ ನ್ಯೂಸ್

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.