ನಿಷೇಧ ತೆರವಿಗೆ ಒಂದಾದ ರಾಜಧಾನಿ ಜನತೆ
Team Udayavani, Jan 30, 2017, 12:07 PM IST
ಬೆಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದ ಪರ ಪ್ರತಿಭಟನೆಗಳು ಮುಂದುವರಿದಿದ್ದು, ಭಾನುವಾರ ರಾಜಧಾನಿಯ ಕಂಬಳ ಆಸ್ತಕರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿ, ಕಂಬಳ ನಿಷೇಧವನ್ನು ಕೂಡಲೇ ವಾಪಸ್ ಪಡೆಯುವಂತೆ ಆಗ್ರಹಿಸಿದರು.
“ರಾಜಧಾನಿ ಕಂಬಳ ಕ್ರಿಯಾ ಸಮಿತಿ’ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಭಾನುವಾರ ರಜಾ ದಿನವಾಗಿದ್ದ ಕಾರಣ ಐಟಿ-ಬಿಟಿ ಸೇರಿದಂತೆ ಹಲವು ಕ್ಷೇತ್ರಗಳ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು, ಕಂಬಳದ ಪರವಾಗಿ ಸರ್ಕಾರ ಸೂಕ್ತ ಕಾಯ್ದೆ ರೂಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆಕಾರರು ನಗರದ ಮೈಸೂರು ವೃತ್ತದಿಂದ ಫ್ರೀಡಂ ಪಾರ್ಕ್ ತನಕ ಬೈಕ್ ರ್ಯಾಲಿ ನಡೆಸಿದರು. ಕಂಬಳ ಪರವಾದ ಟಾಬ್ಲೊ ಪ್ರದರ್ಶನ ಕೂಡ ನಡೆಯಿತು.
ರಾಜ್ಯ ಸರ್ಕಾರವು ಕಂಬಳದ ಮೇಲಿನ ನಿರ್ಬಂಧ ತೆರವುಗೊಳಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಕಂಬಳ ಕ್ರೀಡೆಯನ್ನು ನಿರಂತರವಾಗಿ ಆಚರಿಸಿಕೊಂಡು ಹೋಗಲು ಅನು ಕೂಲವಾಗುವ ಕಾಯ್ದೆ ಜಾರಿಗೊಳಿಸ ಬೇಕು ಎಂದು ಸಮಿತಿ ಒತ್ತಾಯಿಸಿದೆ.
ಕಂಬಳದ ಪರವಾಗಿ ನ್ಯಾಯಾಲಯದಲ್ಲಿ ಜ. 30ರಂದು ನಡೆಯಲಿರುವ ಅರ್ಜಿ ವಿಚಾರಣೆ ಹಾಗೂ ಮುಂಬರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕಂಬಳದ ಪರವಾಗಿ ತೆಗೆದುಕೊಳ್ಳುವ ತೀರ್ಮಾನ ಆಧರಿಸಿ ಮುಂದಿನ ಹೋರಾಟ ನಡೆಸಲು ಸಮಿತಿ ನಿರ್ಣಯ ತೆಗೆದುಕೊಂಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.