ಸಿಎಂ ಸ್ಪಂದಿಸಿದರೂ ಮುಂದುವರಿದ ಧರಣಿ

Team Udayavani, Jun 20, 2018, 11:57 AM IST

cm-spand.jpg

ಬೆಂಗಳೂರು: ರಾಜ್ಯದ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸಬೇಕು ಮತ್ತು 2009ರ ಕೃಷಿ ವಿಶ್ವವಿದ್ಯಾಲಯಗಳ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಮಂಗಳವಾರ ಪುರಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದನ್ನು ಗಮನಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕಾರಿನಿಂದ ಕೆಳಗಿಳಿದು ಆಹವಾಲು ಆಲಿಸಿದರು.

ಮಂಗಳವಾರ ಬೆಳಗ್ಗೆ ಜೆ.ಪಿ.ನಗರ ನಿವಾಸದಿಂದ ಹೊರಟು ಇದೇ ಮಾರ್ಗವಾಗಿ ಬಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರತಿಭಟನೆ ನಡೆಸುತ್ತಿರುವುದನ್ನು ಗಮನಿಸಿ ತಕ್ಷಣ ವಾಹನ ನಿಲ್ಲಿಸುವಂತೆ ಸೂಚನೆ ನೀಡಿ ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳ ಬಳಿ ಚರ್ಚಿಸಿದರು.

ಸಮ್ಮಿಶ್ರ ಸರ್ಕಾರ ರಾಜ್ಯದ ರೈತರು, ವಿದ್ಯಾರ್ಥಿಗಳ ಹಿತ ಕಾಯಲು ಬದ್ಧವಾಗಿದೆ. ಸಂಜೆ ಕೃಷಿ ಸಚಿವರು, ಅಧಿಕಾರಿಗಳ ಜತೆಗೆ ವಿದ್ಯಾರ್ಥಿಗಳನ್ನು ಕರೆಸಿ ಚರ್ಚಿಸುವ ಭರವಸೆ ನೀಡಿದರು. ಅದಂತೆ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ಮಾಡುವ ಸಂಬಂಧ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರಿಂದಲೂ ಭರವಸೆ: ಇದಕ್ಕೂ ಮುನ್ನ ಬೆಂಗಳೂರು, ಧಾರವಾಡ, ರಾಯಚೂರು, ಶಿವಮೊಗ್ಗ ಮತ್ತು ಬಾಗಲಕೋಟೆ ಕೃಷಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಪುರಭವನ ಬಳಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಂತರ ಅಲ್ಲಿಂದ  ರ್ಯಾಲಿಯಲ್ಲಿ ಸ್ವಾತಂತ್ರ್ಯ ಉದ್ಯಾನಕ್ಕೆ ತೆರಳಿದರು.

ಮಧ್ಯಾಹ್ನ ಕೃಷಿ ಸಚಿವ ಶಿವಶಂಕರರೆಡ್ಡಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ, ಕೃಷಿಗೆ ಸಂಬಂಧಿತ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ರದ್ದುಪಡಿಸುವ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಬೇಕಿದೆ. ಈ ಬಗ್ಗೆ ಮತ್ತೂಮ್ಮೆ ಪರಿಶೀಲಿಸಿ ವಿಧಾನಮಂಡಲದಲ್ಲಿ ತಿದ್ದುಪಡಿ ವಿಧೇಯಕ ಮಂಡನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಜೆಟ್‌ನಲ್ಲಿ ಕೃಷಿಗೆ ಪೂರಕವಾದ ಕಾರ್ಯಕ್ರಮಗಳನ್ನು ಅಳವಡಿಸಲು ಮುಖ್ಯಮಂತ್ರಿಗಳು ಆದ್ಯತೆ ನೀಡಿದ್ದಾರೆ. ರೈತರ ಸಾಲ ಮನ್ನಾ ಬಗ್ಗೆಯೂ ಚರ್ಚೆ ನಡೆದಿದ್ದು, ರೈತರ ಪರ ನಿಲುವು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜಧಾನಿಯಲ್ಲಿ ಉಪವಾಸ ಸತ್ಯಾಗ್ರಹ: ಬುಧವಾರ ಬೆಂಗಳೂರು ಕೃಷಿ ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು. ಪೊಲೀಸರ ಅನುಮತಿ ಪಡೆದು ಗುರುವಾರದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಂಗಳೂರು ಕೃಷಿ ವಿವಿ ವಿದ್ಯಾರ್ಥಿಗಳ ವತಿಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು. ಸರ್ಕಾರದ ಸ್ಪಂದನೆ ಆಧರಿಸಿ ಮುಂದೆ ಹೋರಾಟದಲ್ಲಿ ಇತರೆ ವಿವಿಗಳ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಕೆವಿಕೆ ಕೃಷಿ ವಿದ್ಯಾರ್ಥಿ ಸಂಘದ ಸಂಚಾಲಕ ವಿ.ರಮೇಶ ಹೇಳಿದರು.

ಧರಣಿ ಮುಂದುವರಿಕೆ: ಮುಖ್ಯಮಂತ್ರಿಗಳ ಭರವಸೆ ಹೊರತಾಗಿಯೂ ಕೃಷಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಹಿಂದಿನ ಸರ್ಕಾರದಂತೆ ಸಮ್ಮಿಶ್ರ ಸರ್ಕಾರವೂ ಭರವಸೆ ನೀಡಿದ್ದು, ವಿಧೇಯಕಕ್ಕೆ ತಿದ್ದುಪಡಿ ತರುವ ಬಗ್ಗೆ ವಿಶ್ವಾಸ ಮೂಡಿಲ್ಲ.

ದೊಡ್ಡಬಳ್ಳಾಪುರದಲ್ಲಿ ಸ್ಥಾಪನೆಯಾಗಿರುವ ರೈಟೆಕ್‌ ವಿಶ್ವವಿದ್ಯಾಲಯವು ಕೃಷಿ ವಿಶ್ವವಿದ್ಯಾಲಯ ಕಾಯ್ದೆಯನ್ನು ಉಲ್ಲಂ ಸಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳುವ ದಿಟ್ಟತನ ತೋರಬೇಕಿದೆ. ಹಾಗಾಗಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಜಿಕೆವಿಕೆ ಕೃಷಿ ವಿದ್ಯಾರ್ಥಿ ಸಂಘದ ಸಂಚಾಲಕ ವಿ.ರಮೇಶ ತಿಳಿಸಿದರು.

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.