ಖಾತೆ ಬದಲಾವಣೆಗೆ ಒಪ್ಪಿದರೂ ಬಗ್ಗದ ಜಿಟಿಡಿ
Team Udayavani, Jun 12, 2018, 6:00 AM IST
ಬೆಂಗಳೂರು: ತಮಗೆ ಸಿಕ್ಕಿದ ಉನ್ನತ ಶಿಕ್ಷಣ ಖಾತೆಯಿಂದ ಅಸಮಾಧಾನಗೊಂಡಿದ್ದ ಜೆಡಿಎಸ್‌ನ ಜಿ.ಟಿ.ದೇವೇಗೌಡ ಅವರ ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಒಪ್ಪಿದರೂ ಸಮಸ್ಯೆ ಇನ್ನೂ ಬಗೆಹರಿದಿಲ್ಲ.
ಉನ್ನತ ಶಿಕ್ಷಣ ಖಾತೆಯಿಂದ ಅಸಮಾಧಾನಗೊಂಡಿದ್ದ ಸಚಿವ ಜಿ.ಟಿ.ದೇವೇಗೌಡ ಅವರನ್ನು ಸೋಮವಾರ
ಪದ್ಮನಾಭನಗರದ ನಗರದ ನಿವಾಸಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ
ಕರೆಸಿಕೊಂಡಿದ್ದರು. ಈ ವೇಳೆ ಸಚಿವ ಎಚ್.ಡಿ.ರೇವಣ್ಣ ಕೂಡ ಇದ್ದರು. ನಂತರ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ
ಸಮಾಲೋಚನೆ ನಡೆಸಿ ಖಾತೆ ಬದಲಾವಣೆಗೆ ಒಪ್ಪಿಕೊಂಡಿದ್ದಾರೆ.
ಆದರೆ, ಜಿ.ಟಿ.ದೇವೇಗೌಡ ಮಾತ್ರ ತಮಗೆ ಜನರಿಗೆ ಹತ್ತಿರವಿರುವ ಖಾತೆಯೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಅಲ್ಲದೆ, ಜೆಡಿಎಸ್ ಪಾಲಿಗೆ ಬಂದಿರುವ ಖಾತೆಗಳಲ್ಲಿ ಹಂಚಿಕೆಯಾಗಿ ಉಳಿದಿರುವ ಉತ್ತಮವಾದ ಖಾತೆ ನೀಡಬಹುದು ಎನ್ನುವ ಮೂಲಕ ತಮಗೆ ಇಂಧನ ಖಾತೆ ಬೇಕು ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.
ಅದು ಸಾಧ್ಯವಾಗದಿದ್ದರೆ ಈಗಾಗಲೇ ಬಂಡೆಪ್ಪ ಕಾಶೆಂಪೂರ ಅವರಿಗೆ ನೀಡಿರುವ ಸಹಕಾರ ಖಾತೆ ಬೇಕು ಎಂಬ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ತಮಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದರಿಂದ ಅಸಮಾಧಾನಗೊಂಡಿದ್ದ ಜಿ.ಟಿ.ದೇವೇಗೌಡ ಶುಕ್ರವಾರವೇ ಸರ್ಕಾರ ನೀಡಿದ್ದ ಕಾರನ್ನು ವಾಪಸ್ ಮಾಡಿದ್ದರು. ಅಲ್ಲದೆ, ನೀಡುವುದಾದರೆ ಒಳ್ಳೆಯ ಖಾತೆ ನೀಡಿ. ಇಲ್ಲದಿದ್ದರೆ ಶಾಸಕನಾಗಿಯೇ ಇರುತ್ತೇನೆ ಎಂಬ ಸಂದೇಶವನ್ನು ವರಿಷ್ಠರಿಗೆ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಎಚ್.ಡಿ. ದೇವೇಗೌಡ ಅವರು ಎಚ್.ಡಿ.ಕುಮಾರಸ್ವಾಮಿ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜಿ.ಟಿ.ದೇವೇಗೌಡರನ್ನು ಕರೆಸಿ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಖಾತೆ ಬದಲಾವಣೆಗೆ ಮುಖ್ಯಮಂತ್ರಿಗಳೂ ಒಪ್ಪಿಕೊಂಡಿದ್ದಾರೆ.
ರೈತರಿಗೆ ಹತ್ತಿರವಾದ ಖಾತೆ ಬೇಕು: ಈ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ಉನ್ನತ ಶಿಕ್ಷಣ ಖಾತೆ ನಿರ್ವಹಿಸುವ ಸಾಮರ್ಥ್ಯ ನನಗಿದೆ. ಆದರೆ, ರೈತರಿಗೆ ಹತ್ತಿರವಾಗುವ ಖಾತೆ ತೆಗೆದುಕೊಳ್ಳುವಂತೆ ಕ್ಷೇತ್ರದ ಮತದಾರರು ಒತ್ತಾಯಿಸಿದ್ದರಿಂದ ಖಾತೆ ಬದಲಾವಣೆಗೆ ಮನವಿ ಮಾಡಿದ್ದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಅವರೊಂಂದಿಗೆ ಮಾತನಾಡಿದ್ದೇನೆ ಎಂದರು.
ಖಾತೆ ಬದಲಾವಣೆಗೆ ಅವರು ಒಪ್ಪಿದ್ದು, ಮೊದಲು ಅಬಕಾರಿ ಖಾತೆ ತೆಗೆದುಕೊಳ್ಳುವಂತೆ ಹೇಳಿದರು. ಆದರೆ, ಈ ಖಾತೆ ಬೇಡ. ರೈತರಿಗೆ ಹತ್ತಿರವಾಗಿರುವ ಖಾತೆ ಕೊಡಿ ಎಂದು ಕೇಳಿದ್ದೇನೆ. ಹಾಗಾಗಿ ಜೆಡಿಎಸ್ ಪಾಲಿಗೆ ಬಂದಿರುವ ಖಾತೆಗಳಲ್ಲಿ ಹಂಚಿಕೆಯಾಗಿ ಉಳಿದಿರುವ ಉತ್ತಮವಾದ ಖಾತೆ ನೀಡಬಹುದು ಎಂದು ಹೇಳಿದರು. ಪ್ರಸ್ತುತ ಜೆಡಿಎಸ್‌ಗೆ ಲಭ್ಯವಾದ ಖಾತೆಗಳ ಪೈಕಿ ಸಚಿವರಿಗೆ ಹಂಚಿಕೆಯಾಗಿ ಹಣಕಾಸು, ಅಬಕಾರಿ, ಇಂಧನ, ಸಣ್ಣ ಉಳಿತಾಯ ಮತ್ತು ಲಾಟರಿ, ಗುಪ್ತಚರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಯೋಜನೆ ಮತ್ತು ಸಾಂಖೀÂಕ, ಮೂಲಸೌಕರ್ಯ, ಜವಳಿ ಖಾತೆಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಲ್ಲಿ ಉಳಿದುಕೊಂಡಿದೆ. ಈ ಪೈಕಿ ರೈತರಿಗೆ ಹತ್ತಿರವಾಗಿರುವ ಖಾತೆ ಎಂದರೆ ಅದು ಇಂಧನ ಮಾತ್ರ. ಹೀಗಾಗಿ ಜಿ.ಟಿ.ದೇವೇಗೌಡ ಅವರು ಇಂಧನ ಖಾತೆ ಮೇಲೆ ಕಣ್ಣಿಟ್ಟಿರುವುದು ಸ್ಪಷ್ಟ.
ಬಗೆಹರಿದ ಪುಟ್ಟರಾಜು ಮುನಿಸು: ಈ ಮಧ್ಯೆ ಸಾರಿಗೆ ಖಾತೆ ಮೇಲೆ ಕಣ್ಣಿಟ್ಟಿದ್ದ ತಮಗೆ ಸಣ್ಣ ನೀರಾವರಿ ಖಾತೆ ಸಿಕ್ಕಿದ್ದರಿಂದ ಅಸಮಾಧಾನಗೊಂಡಿದ್ದ ಮತ್ತೂಬ್ಬ ಸಚಿವ ಸಿ.ಎಸ್.ಪುಟ್ಟರಾಜು ಅವರ ಅತೃಪ್ತಿ ಶಮನವಾಗಿದೆ. ಸಣ್ಣ ನೀರಾವರಿ ಜತೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದರಿಂದ ಪುಟ್ಟರಾಜು ಅವರು ಅದಕ್ಕೆ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.