ಸಂಜೆಗತ್ತಲ ಕಥೆ ಹೇಳುವ ಛಾಯಾಚಿತ್ರಗಳು

Team Udayavani, Dec 11, 2018, 12:26 PM IST

sanjegattala.jpg

ಬೆಂಗಳೂರು: ಕಪ್ಪು-ಬಿಳುಪಿನ ಬಣ್ಣವನ್ನು ಮೈಗೆ ಮೆತ್ತಿಕೊಂಡಿರುವ ಆ ಛಾಯಾಚಿತ್ರಗಳು  ನೋಡುಗರಿಗೆ ಕೃಷ್ಣರಾಜೇಂದ್ರ ಮಾರುಕಟ್ಟೆಯ ಸಂಜೆಯ ಬದುಕಿನ ಬವಣೆ ಬಿಚ್ಚಿಡುತ್ತವೆ. ಕತ್ತಲೆಯೊಳಗಿನ ಬೆಳಕಿನಾಟದಲ್ಲಿ ಬೆರಗು ಮೂಡಿಸುತ್ತವೆ. ಮಾರುಕಟ್ಟೆಯಲ್ಲಿ ರಾತ್ರಿ ವೇಳೆ ಸ್ಕೂಟರ್‌, ಆಟೋ ಮತ್ತು ಕಾರ್‌ಗಳ ಹೊಮ್ಮಿಸುವ ಬೆಳಕಿನಲ್ಲಿ ಸೆರೆಯಾಗಿರುವ ಆ ಚಿತ್ರಗಳು ಕೆಲ ಕ್ಷಣ, ಮಾಜಿ ಮುಖ್ಯ ಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಕಾಲೇಜು ದಿನಗಳತ್ತ ಕರೆದೊಯ್ಯುವಲ್ಲಿ ಸಫ‌ಲವಾದವು.

ನಗರದ ಚಿತ್ರಕಲಾ ಪರಿಷತ್‌ನಲ್ಲಿ ಹಿರಿಯ ಛಾಯಾಗ್ರಾಹಕ ಕೆ.ವೆಂಕಟೇಶ್‌ ಅವರ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿರುವ ಕೆ.ಆರ್‌.ಮಾರುಕಟ್ಟೆ ಮತ್ತು ಸುತ್ತಲ ವಾತಾವರಣದ ಚಿತ್ರಗಳು ರೈತರ ಮತ್ತು ಮಾರಾಟಗಾರರ ದುಡಿಮೆಯ ಬದುಕಿನ ನೂರಾರು ಕಥೆಗಳನ್ನು ತೆರೆದಿಟ್ಟಿವೆ.

ಸೋಮವಾರದಿಂದ ಆರಂಭವಾದ ಮೂರು ದಿನಗಳ “ಕೆ.ಆರ್‌.ಮಾರುಕಟ್ಟೆಯಲ್ಲಿ ಕತ್ತಲೆಯೊಡನೆ ಬೆಳಕಿನಾಟ’ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು, ಆ ಫೋಟೋಗಳನ್ನು ಬೆರಗು ಗಣ್ಣಿನಿಂದಲೇ ದಿಟ್ಟಿಸಿ, ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ಕಲಿಯುತ್ತಿದ್ದ ದಿನಗಳತ್ತ ಒಮ್ಮೆಲೆ ಜಾರಿದರು.

ನನ್ನ ಅಚ್ಚುಮೆಚ್ಚಿನ ಶೋ ರೂಂ ಅಲ್ಲಿತ್ತು: “ಇದು, ಕೆ.ಆರ್‌.ಮಾರುಕಟ್ಟೆಯ ಹೃದಯ ಭಾಗವಾ? ಈಗಲೂ ಇದು ಹೀಗೆ ಇದೆಯಾ? ಮಾರುಕಟ್ಟೆಯ ನಾಮಫ‌ಲಕದಲ್ಲಿ ಯಾವ ಇಸ್ವಿಯಲ್ಲಿ ನಿರ್ಮಾಣವಾಯ್ತು ಎಂಬುವುದರ ನಮೂದಿಲ್ಲ. ಕೆ.ಆರ್‌.ಮಾರುಕಟ್ಟೆಯಲ್ಲಿ ಒಂದು ಬಾಟ ಶೋ ರೂಂ ಇತ್ತು. ಈಗಲೂ ಅದು ಅಲ್ಲೇ ಇಲ್ಲಿರಬಹುದು.

ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಅಲ್ಲಿ ಶೂ, ಸಾಕ್ಸ್‌, ಚಪ್ಪಲಿ ಸೇರಿದಂತೆ ಇನ್ನಿತರ ಪರಿಕರ ಖರೀದಿಸುತ್ತಿದ್ದೆ. ಆಗ ಅದು ನನ್ನ ಅಚ್ಚುಮೆಚ್ಚಿನ ತಾಣ’ ಎಂದು ಹಳೆಯ ಘಟನೆಗಳನ್ನು ಎಸ್‌.ಎಂ.ಕೃಷ್ಣ ಮೆಲಕು ಹಾಕಿದರು. ಛಾಯಾಚಿತ್ರ ಪ್ರದರ್ಶನವನ್ನು ಒಂದು ಸುತ್ತು ಹಾಕಿದ ಅವರು, ಅಬ್ಟಾ ಒಂದು ಕ್ಷಣ ಹಳೇ ದಿನಗಳೇ ಕಣ್ಮುಂದೆ ಬಂದು ಹೋದವು ಎಂದು ಮುಗುಳ್ನಕ್ಕರು.

ಕಾಲ ಬದಲಾದಂತೆ ರಸ್ತೆಯ ಆಕಾರ, ಗಾತ್ರ ಬದಲಾಗಿದೆ. ಜನಸಂಖ್ಯೆ ಹೆಚ್ಚಾಗುತ್ತಲೇ ಇರುತ್ತದೆ. ಹೀಗಾಗಿ ಕೃಷ್ಣರಾಜೇಂದ್ರ ಮಾರುಕಟ್ಟೆಯು ವ್ಯಾಪಾರ ವಹಿವಾಟು ಸೇರಿದಂತೆ  ಹಲವು ರೀತಿಯಲ್ಲಿ ಸಾಕಷ್ಟು ಬದಲಾಗಿದೆ. ವ್ಯಾಪಾರ ಸೇರಿದಂತೆ ಹಲವು ವಿಚಾರಗಳಲ್ಲಿ ಗಮನ ಸೆಳೆದಿರುವ ಈ ಮಾರುಕಟ್ಟೆಗೆ ಮೂಲಭೂತ ಸೌಕರ್ಯಕಲ್ಪಿಸುವತ್ತ ಪಾಲಿಕೆ ಮತ್ತು ಸರ್ಕಾರ ಗಮನ ಹರಿಸಬೇಕು ಎಂದರು.

ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು: ಇದೇ ವೇಳೆ ಮಾತನಾಡಿದ ಎಸ್‌.ಕೃಷ್ಣ, ನಾನು ಮುಖ್ಯ ಮಂತ್ರಿಯಾಗಿದ್ದ ಕಾಲದಲ್ಲಿ ಐಟಿ-ಬಿಟಿ ಕಂಪನಿಗಳು ಬೆಂಗಳೂರಿನತ್ತ ಮುಖ ಮಾಡಿದವು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಸಿಲಿಕಾನ್‌ ಸಿಟಿ ಎಂಬ ಹಿರಿಮೆ ಪಡೆದುಕೊಂಡಿದೆ.

ಇದೇ “ಟ್ರೆಂಡ್‌’ ಎಷ್ಟು ದಿನ ಇರುತ್ತೆ?. ಹೀಗಾಗಿ ಇದನ್ನು ಮತ್ತಷ್ಟು ಬೆಳಸುವ ನಿಟ್ಟಿನಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು ಎಂದರು. ಸರ್ಕಾರಕ್ಕೆ ಒಂದು ಮಿತಿ ಇರುತ್ತದೆ. ಅದನ್ನು ಮೀರಿ ಎನನ್ನೂ ಮಾಡಲಾಗದು. ಈ ಹಿನ್ನೆಲೆಯಲ್ಲಿ  ಸಾರ್ವಜನಿಕರು ಮತ್ತು ಬಂಡವಾಳದಾರರು ನಗರವನ್ನು ಅಭಿವೃದ್ಧಿ ಪಡಿಸುವತ್ತ ಗಮನ ಹರಿಸಬೇಕು.

ಬೆಂಗಳೂರು ಮೆಟ್ರೊ ಬಗ್ಗೆ ನಾನು ಕಾಳಜಿ ತೋರಿದೆ. ಹೀಗಾಗಿ ಶ್ರೀಧರನ್‌ ಅವರನ್ನು ಬೆಂಗಳೂರಿಗೆ ಕರೆತಂದೆ. ಮೆಟ್ರೊ ಬಗ್ಗೆ ಶ್ರೀಧರನ್‌ ಅವರು ಸಾಕಷ್ಟು ಮುತವರ್ಜಿ ತೋರಿದರು. ಬೆಂಗಳೂರು ಮತ್ತಷುc ಬೆಳೆಯುತ್ತಿದ್ದು, ಮೂಲ ಸೌಕರ್ಯ ಕಲ್ಪಿಸುವತ್ತ ಗಮನ ಹರಿಸಬೇಕು ಎಂದರು. ಈ ವೇಳೆ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷೆ ಪ್ರೊ.ಎಂ.ಜೆ.ಕಮಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಸಂಜೆ ವೇಳೆ ಸತತ ಹದಿನೈದು ದಿನಗಳ ಕಾಲ, ನಗರದ ಕೆ.ಆರ್‌.ಮಾರುಕಟ್ಟೆಯ ಮೇಲ್ಸೇತುವೆ ಮೇಲೆ ಕುಳಿತು ಈ ಫೋಟೋಗಳನ್ನು ಸೆರೆಹಿಡಿದೆ. ಕತ್ತಲಿನಲ್ಲಿ ವಾಹನಗಳು ಹೊಮ್ಮಿಸುವ ಬೆಳಕಿನಲ್ಲಿ ಚಿತ್ರಗಳನ್ನು ಸೆರೆಹಿಡಿಯುವುದೇ ಮನಸ್ಸಿಗೆ ಹಿತ.
-ಕೆ.ವೆಂಕಟೇಶ್‌,ಛಾಯಾಗ್ರಾಹಕ

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.